ಹೋಂ ಕಾರಂಟೈನ್ ಉಲ್ಲಂಘಿಸದಿರಿ
Team Udayavani, Mar 25, 2020, 3:51 PM IST
ತುಮಕೂರು: ಹೋಂ ಕ್ವಾರಂಟೈನ್‌ನಲ್ಲಿ ಇರುವವರು ಯಾವುದೇ ಕಾರಣಕ್ಕೂ ಮನೆ ಬಿಟ್ಟು ಹೊರ ಬರಬಾರದು. ಒಂದು ವೇಳೆ ಬಂದರೆ ಅಂತಹವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್ ಕುಮಾರ್ ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಮಂಗಳವಾರ ಸಂಜೆ ನಡೆದ ಕೊರೊನಾ ಸೋಂಕು ತಡೆಯುವ ಮುಂಜಾಗ್ರತಾ ಸಭೆಯಲ್ಲಿ ಮಾತನಾಡಿ, ವಿದೇಶಗಳಿಂದ ಬಂದಿರುವ 332 ಜನರು ನಿಗಾದಲ್ಲಿದ್ದಾರೆ. ಜಿಲ್ಲಾಮಟ್ಟದ ಅಧಿಕಾರಿಗಳು ಯಾವುದೇ ಕಾರಣಕ್ಕೂ ಕೇಂದ್ರ ಸ್ಥಾನ ತೊರೆಯುವಂತಿಲ್ಲ. ಎಲ್ಲರೂ ಕೇಂದ್ರ ಸ್ಥಾನದಲ್ಲಿಯೇ ಇರಬೇಕು. ಜಿಲ್ಲೆಯಲ್ಲಿ ಫೀವರ್ ಕ್ಲಿನಿಕ್ ಪ್ರತ್ಯೇಕವಾಗಿ ತೆರೆಯಲಾಗುತ್ತಿದ್ದು, ಅವು ಎಲ್ಲಿ ಸ್ಥಾಪಿಸಬೇಕು ಎಂಬುದರ ಬಗ್ಗೆ ಸ್ಥಳ ಗುರುತಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು 4.50ಲಕ್ಷ ಮನೆಗಳಿಗೆ ಭೇಟಿ ನೀಡಿ ಅರಿವು ಮೂಡಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಟರಾಜ್ ತಿಳಿಸಿದರು.
ಎಸ್‌ಪಿ ಡಾ.ಕೋ.ನ.ವಂಶಿಕೃಷ್ಣ, ಪಾಲಿಕೆ ಆಯುಕ್ತ ಟಿ.ಭೂಬಾಲನ್, ಸಿಇಒ ಶುಭಾ ಕಲ್ಯಾಣ್, ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಆರ್.ಚಂದ್ರಿಕಾ, ಜಿಲ್ಲಾ ಸರ್ಜನ್ ಡಾ. ವೀರಭದ್ರಯ್ಯ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಜಂಟಿ ನಿರ್ದೇಶಕ ಎಂ.ಸಿ.ಶ್ರೀನಿ ವಾಸಯ್ಯ, ಜಿಪಂ ಉಪ ಕಾರ್ಯದರ್ಶಿ ರಮೇಶ್, ಉಪವಿಭಾಗಾಧಿಕಾರಿ ಅಜಯ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.