ರಾಜ್ಯದಲ್ಲಿ ಕೋವಿಡ್-19ಗೆ ಮತ್ತೊಂದು ಬಲಿ: ತುಮಕೂರಿನ ಸೋಂಕಿತ ಸಾವು
Team Udayavani, Mar 27, 2020, 11:59 AM IST
ತುಮಕೂರು: ಅಪಾಯಕಾರಿ ಕೋವಿಡ್-19ಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದೆ. ತುಮಕೂರಿನಲ್ಲಿ ಕೋವಿಡ್-19 ಸೋಂಕಿತ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ತುಮಕೂರಿನ ಶಿರಾ ಮೂಲದ 60 ವರ್ಷದ ವ್ಯಕ್ತಿಗೆ ಕೋವಿಡ್-19 ಸೋಂಕು ದೃಢವಾಗಿತ್ತು. ಮಾರ್ಚ್ 24ರಂದು ಈ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಿದ್ದರು. ಶುಕ್ರವಾರ ಬೆಳಗ್ಗೆ 10.45ರ ಸುಮಾರಿಗೆ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಇದರೊಂದಿಗೆ ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಕಾರಣ ಸಾವನ್ನಪ್ಪಿದವರ ಸಂಖ್ಯೆ ಮೂರಕ್ಕೇರಿದೆ. ಕಲಬುರಗಿಯಲ್ಲಿ ಮೊದಲ ಸಾವು ಆಗಿದ್ದರೆ, ಎರಡನೇ ಸಾವು ಚಿಕ್ಕಬಳ್ಳಾಪುರದಲ್ಲಿ ವರದಿಯಾಗಿತ್ತು.
ತುಮಕೂರಿನಲ್ಲಿ ಮೃತಪಟ್ಟ ಸೋಂಕಿತ ವ್ಯಕ್ತಿಯ ಜೊತೆ 13 ಜನರು ಪ್ರಯಾಣಿಸಿದ್ದು, ಅವರನ್ನು ಪತ್ತೆ ಹಚ್ಚಿ ಅವರ ಮೇಲೆ ನಿಗಾ ಇಡಲಾಗಿದೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್ ಟೀಕೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.