ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ಬಂದ್
Team Udayavani, Mar 27, 2020, 3:18 PM IST
ಬಾಗೇಪಲ್ಲಿ: ಕೋವಿಡ್ 19 ವೈರಸ್ ವಿಶ್ವವನ್ನೇ ಬೆಚ್ಚಿ ಬೀಳಿಸಿದ್ದು, ಜಿಲ್ಲೆಯಲ್ಲೂ ಆತಂಕದ ವಾತಾವರಣದ ಸೃಷ್ಟಿಯಾಗಿದ್ದು, ಈ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲಾ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸದಿರಲು ಜಾಮೀಯಾ ಮಸೀದಿ ಆಡಳಿತ ಮಂಡಳಿ ತೀರ್ಮಾನಿಸಿದೆ.
ಪಟ್ಟಣದ ಜಾಮೀಯಾ ಮಸೀದಿ ಸಭಾಂಗಣದಲ್ಲಿ ಜಾಮೀಯಾ ಮಸೀದಿ ಆಡಳಿತ ಮಂಡಳಿ ಹಾಗೂ ಮುಸ್ಲಿಂ ಸಮುದಾಯದ ಮುಖಂಡರು ತುರ್ತಾಗಿ ಸಭೆ ಸೇರಿ ರಾಜ್ಯ ಸರ್ಕಾರ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಪ್ರತಿ ದಿನ ಮಸೀದಿಗಳಲ್ಲಿ ನಿರ್ವಹಿಸಲಾಗುತ್ತಿರುವ ಐದು ಹೊತ್ತಿನ ಸಾಮೂಹಿಕ ನಮಾಜನ್ನು ಸಮುದಾಯದವರು ಮನೆಗಳಲ್ಲಿ ನಿರ್ವಹಿಸಲು ಸೂಚನೆ ನೀಡಲಾಗಿದೆ. ತಾತ್ಕಾಲಿಕವಾಗಿ ಮಸೀದಿಯಲ್ಲಿ ಗುಂಪು ಗುಂಪಾಗಿ ಸೇರುವುದನ್ನು ನಿಷೇಧಿಸಲಾಗಿದೆ.
ಮುಂದಿನ ಆದೇಶದವರೆಗೆ ತಾಲೂಕಿನ ಎಲ್ಲಾ ಮಸೀದಿಗಳಲ್ಲಿನ ಜಮಾತ್ನ ನಮಾಜನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ತೀರ್ಮಾನ ತೆಗೆದುಕೊಳ್ಳಲಾಯಿತು. ಈ ಸಂದರ್ಭದಲ್ಲಿ ಜಾಮೀಯಾ ಮಸೀದಿ ಅಧ್ಯಕ್ಷ ಶೇಕ್ ಖಾಸೀಂ ಸಾಬ್, ಕಾರ್ಯದರ್ಶಿ ಮಹಮದ್ ಯೂನೂಸ್, ಪುರಸಭೆ ಮಾಜಿ ಸದಸ್ಯ ಮಹಮದ್ ಎಸ್ .ನೂರುಲ್ಲಾ ಹಾಗೂ ಮುಖಂಡರಾದ ಇಂತಿಯಾಜ್, ಪರೀದ್, ಅಹಮದ್ ಖಾನ್, ಶಬ್ಬೀರ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
IPL Auction 2025: ಇಂದು, ನಾಳೆ ಐಪಿಎಲ್ ಬೃಹತ್ ಹರಾಜು
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Channapatna; ಜನಾದೇಶಕ್ಕೆ ತಲೆಬಾಗುತ್ತೇನೆ, ಪಲಾಯನ ಮಾಡಲ್ಲ: ನಿಖಿಲ್
Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.