ಇಬ್ಬರ ವರದಿ ನೆಗೆಟಿವ್
Team Udayavani, Mar 27, 2020, 4:24 PM IST
ಯಾದಗಿರಿ: ಕೋವಿಡ್ 19 ವೈರಸ್‌ಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಪರೀಕ್ಷೆ ಮಾಡಲು ಸಂಗ್ರಹಿಸಿದ ಒಟ್ಟು 3 ವ್ಯಕ್ತಿಗಳ ಮಾದರಿಗಳಲ್ಲಿ 2 ನೆಗೆಟಿವ್ ಫಲಿತಾಂಶ ಬಂದಿವೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ
ಒಬ್ಬರನ್ನು ಮತ್ತು ಸುರಪುರ ಆಸ್ಪತ್ರೆಯಲ್ಲಿ ಒಬ್ಬರನ್ನು ಪ್ರತ್ಯೇಕವಾಗಿರಿಸಿ, ಐಸೊಲೇಷನ್ ವ್ಯವಸ್ಥೆ ಮಾಡಲಾಗಿದೆ. ಯಾದಗಿರಿ ತಾಲೂಕಿನಲ್ಲಿ 27, ಶಹಾಪುರ ತಾಲೂಕಿನಲ್ಲಿ 16 ಹಾಗೂ ಸುರಪುರ ತಾಲೂಕಿನಲ್ಲಿ 21 ಸೇರಿದಂತೆ ಮಾ.26ರವರೆಗೆ ಜಿಲ್ಲೆಯಲ್ಲಿ ಒಟ್ಟು 64 ಜನ ದುಬೈ, ಕತಾರ, ಸೌದಿ, ಮದಿನಾ ಪ್ರವಾಸದಿಂದ ಜಿಲ್ಲೆಗೆ ಮರಳಿ ಬಂದಿರುವ ಹಿನ್ನೆಲೆಯಲ್ಲಿ ಅವರನ್ನು ವೈದ್ಯಕೀಯ ತಪಾಸಣೆಗೊಳಪಡಿಸಲಾಗಿದೆ. ಯಾವುದೇ ರೋಗ ಲಕ್ಷಣಗಳು ಕಂಡು ಬಂದಿಲ್ಲ ಆದರೂ ಹೋಮ್ ಐಸೊಲೇಷನ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಈವರೆಗೆ ಜಿಲ್ಲಾಡಳಿತದ ಕಂಟ್ರೋಲ್ ರೂಮ್ ಸಹಾಯವಾಣಿ ಸಂಖ್ಯೆ 08473-253950ಗೆ 11 ಕರೆಗಳು ಸ್ವೀಕೃತವಾಗಿವೆ ಎಂದು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.