ಬೆರಳೆಣಿಕೆ ಜನ: ಸಾಮಾಜಿಕ ಅಂತರ
Team Udayavani, Mar 27, 2020, 6:12 PM IST
ತಾವರಗೇರಾ: ಪಟ್ಟಣದಲ್ಲಿ ಗುರುವಾರ ಬೆಳಗ್ಗೆಯಿಂದಲೇ ರಸ್ತೆಯಲ್ಲಿ ಬೆರಳೆಣಿಕೆಯಷ್ಟು ಜನ ತಿರುಗಾಡುವುದು ಕಂಡುಬಂತು. ಕೆಲವರು ಪಟ್ಟಣದಲ್ಲಿನ ಗಿಡಮರದ ನೆರಳಿಗೆ ಮಲಗಿರುವುದು ಸಾಮಾನ್ಯವಾಗಿತ್ತು.
ಅಗತ್ಯ ವಸ್ತುಗಳನ್ನು ತೆಗೆದುಕೊಳ್ಳಲು ಮತ್ತು ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಆಹಾರ ಧಾನ್ಯಗಳನ್ನು ತೆಗೆದುಕೊಂಡು ಹೋಗುವುದು ಸಾಮಾನ್ಯವಾಗಿತ್ತು. ಆದರೆ ಕೆಲ ನ್ಯಾಯಬೆಲೆ ಅಂಗಡಿಯ ಮುಂದೆ ಸಾಮಾಜಿಕ ಅಂತರ ಕಾಯ್ದುಕೊಂಡು ದಿನಸಿ ಸಾಮಗ್ರಿ ತೆಗೆದುಕೊಳ್ಳುವುದು ಕಂಡು ಬಂದರೆ, ಮತ್ತೂಂದು ನ್ಯಾಯಬೆಲೆ ಅಂಗಡಿ ಮುಂದೆ ಒಬ್ಬರ ಮೆಲೊಬ್ಬರು ಬಿದ್ದು ಆಹಾರಧಾನ್ಯ ತೆಗೆದುಕೊಳ್ಳುವುದು ಕಂಡು ಬಂತು. ಅಂತಹ ಪರಿಸ್ಥಿತಿಯಲ್ಲಿ ನ್ಯಾಯ ಬೆಲೆ ಅಂಗಡಿಯವರು ಜನರಲ್ಲಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ.
ಪೊಲೀಸರ ಜಾಥಾ ಬಂದ ಕೂಡಲೇ ಬಜಾರದೊಳಗಿನ ಮಳಿಗೆಗಳ ಮುಂದೆ ಖಾಲಿ ಕುಳಿತು ಹರಟೆ ಹೊಡೆಯುತ್ತಿದ್ದ 8-10 ಜನರು ಓಡಿ ಹೋಗುವುದು, ಜಾಥಾ ಮುಂದೆ ಹೋದ ತಕ್ಷಣ ಪುನಃ ಕಟ್ಟೆಯ ಮೇಲೆ ತಮ್ಮ ಹರಟೆ ಮುಂದುವರಿಸಿದ್ದು ಕಂಡು ಬಂದಿತು. ಹೀಗೆ ಜನರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದಿದ್ದರೆ, ಕೋವಿಡ್ 19 ವೈರಸ್ ಬರುವ ಸಾಧ್ಯತೆಗಳಿವೆ. ಇದರ ಬಗ್ಗೆ ಜನರು ಜಾಗೃತಗೊಳ್ಳಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.