ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಕೋವಿಡ್ ರೋಗಿಗಳನ್ನು ಅಟ್ಟುತ್ತಿರುವ ಪಾಕಿಸ್ತಾನ
Team Udayavani, Mar 28, 2020, 1:56 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮೀರ್‌ಪುರ್: ಸ್ಥಳೀಯರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಪಂಜಾಬ್ ಪ್ರಾಂತ್ಯದಲ್ಲಿನ ಕೋವಿಡ್ 19 ವೈರಸ್ ಸೋಂಕಿತರನ್ನು ಬಲವಂತವಾಗಿ ಪಾಕ್ ಆಕ್ರಮಿತ ಕಾಶ್ಮೀರಕ್ಕೆ (ಪಿಒಕೆ) ಕಳುಹಿಸಲಾಗುತ್ತಿದೆ. ಪ್ರಮುಖವಾಗಿ ಪಿಒಕೆ ಮತ್ತು ಗಿಲ್ಗಿಟ್ ಬಾಲ್ಟಿಸ್ತಾನಕ್ಕೆ ಪಾಕ್ ಸರ್ಕಾರ ರೋಗಿಗಳನ್ನು ಸ್ಥಳಾಂತರಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.
ಪಾಕ್ ಆಕ್ರಮಿತ ಕಾಶ್ಮೀರ ಪ್ರದೇಶದಲ್ಲಿರುವ ಮೀರ್‌ಪುರ್ ಮತ್ತು ಇತರ ಪ್ರಮುಖ ನಗರಗಳಲ್ಲಿ ಕ್ವಾರೆಂಟೈನ್ ಕೇಂದ್ರಗಳನ್ನು ತೆರೆಯಲಾಗಿದೆ. ಪಂಜಾಬ್ ಪ್ರಾಂತ್ಯವನ್ನು ಸಂಪೂರ್ಣ ಕೋವಿಡ್ 19 ವೈರಸ್ ಮುಕ್ತವಾಗಿಸುವ ಉದ್ದೇಶದಿಂದ ಅಲ್ಲಿರುವ ದೊಡ್ಡ ಸಂಖ್ಯೆಯ ರೋಗಿಗಳನ್ನು ಮೀರ್ಪುರ ಮತ್ತಿತರ ನಗರಗಳಿಗೆ ಬಲವಂತವಾಗಿ ಕಳುಹಿಸಲಾಗುತ್ತಿದೆ ಎನ್ನಲಾಗಿದೆ.
ಈ ನಡುವೆ ಸೋಂಕು ದೃಢಪಟ್ಟಿರುವ ರೋಗಿಗಳನ್ನು ಸೇನಾ ನೆಲೆಗಳು ಹಾಗೂ ಯೋಧರ ಕುಟುಂಬಗಳು ವಾಸವಿರುವ ಪ್ರದೇಶದ ಸಮೀಪವೂ ಕಳಿಸುವಂತಿಲ್ಲ ಎಂದು ಸೇನಾ ಮುಖ್ಯಸ್ಥರು ಸ್ಪಷ್ಟ ಸಂದೇಶ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.
ಪಾಕಿಸ್ತಾನದ ಒಳಗೇ ಕ್ವಾರೆಂಟೈನ್ ಕೇಂದ್ರಗಳನ್ನು ತೆರೆಯುವುದಕ್ಕೆ ಅಲ್ಲಿನ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದರಿಂದ ಪಾಕ್ ಸರ್ಕಾರ ಈ ಕೆಲಸ ಮಾಡುತ್ತಿದೆ ಎಂದು ಮೂಲಗಳು ಮಾಹಿತಿ ನೀಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Netherlands: ಇಸ್ರೇಲ್ ಫುಟ್ಬಾಲ್ ಅಭಿಮಾನಿಗಳ ಮೇಲೆ ದಿಢೀರ್ ದಾಳಿ!
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Australia: ಜಾಲತಾಣ ಬಳಕೆಗೆ ಕನಿಷ್ಠ 16 ವರ್ಷ ಮಿತಿ ನಿಗದಿ?
MUST WATCH
ಹೊಸ ಸೇರ್ಪಡೆ
State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್.ಎನ್. ನಾಗಮೋಹನ್ ದಾಸ್ ಅಧ್ಯಕ್ಷ?
Supreme Court; ಧರ್ಮಕ್ಕೊಂದು ರಾಜ್ಯ ಕೂಡದು: ತಿರುಪತಿ ಕುರಿತ ಅರ್ಜಿ ತಿರಸ್ಕೃತ
Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ
1857 ಸಿಪಾಯಿ ದಂಗೆ ಕಾಲದ ಶಸ್ತ್ರಾಸ್ತ್ರ ಹೊಲದಲ್ಲಿ ಪತ್ತೆ!
Netherlands: ಇಸ್ರೇಲ್ ಫುಟ್ಬಾಲ್ ಅಭಿಮಾನಿಗಳ ಮೇಲೆ ದಿಢೀರ್ ದಾಳಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.