ಉಡುಪಿ: 21 ಮಂದಿ ಶಂಕಿತರು ಆಸ್ಪತ್ರೆಗೆ
Team Udayavani, Mar 28, 2020, 5:35 AM IST
ಉಡುಪಿ: ಜಿಲ್ಲೆಯಲ್ಲಿ ಶುಕ್ರವಾರ 21 ಮಂದಿ ಕೋವಿಡ್ 19 ಶಂಕಿತರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈಗಾಗಲೇ 99 ಮಂದಿ ಹೋಂ ಕ್ವಾರಂಟೈನ್ ಆಗಿದ್ದಾರೆ. 30 ಮಂದಿ ಆಸ್ಪತ್ರೆಯಲ್ಲಿ ಕ್ವಾರಂಟೈನ್‌ಗೆ ಒಳಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.
ಈವರೆಗೆ ಒಟ್ಟು 8 ಮಂದಿ ಐಸೋಲೇಶನ್ ಕ್ವಾರಂಟೈನ್‌ಗೆ ಒಳಪಟ್ಟಿದ್ದಾರೆ. 128 ಮಂದಿ 28 ದಿನಗಳ ಹೋಂ ಕ್ವಾರಂಟೈನ್ ಅವಧಿ ಪೂರ್ಣಗೊಳಿಸಿದ್ದಾರೆ. ಇದುವರೆಗೆ 124 ಸಂಶಯಾಸ್ಪದ ಕೋವಿಡ್ -19 ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು 1 ಮಾತ್ರ ಪಾಸಿಟಿವ್ ಬಂದಿದೆ. ಇದುವರೆಗೆ 1,429 ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದೆ. ಆಶಾ ಕಾರ್ಯಕರ್ತೆಯರು ಮನೆಮನೆಗೆ ಭೇಟಿ ನೀಡುತ್ತಿದ್ದು ಈವರೆಗೆ 96,446 ಮನೆಗಳಿಗೆ ಭೇಟಿ ನೀಡಿ 4,14,719 ಮಂದಿಯನ್ನು ಸಂಪರ್ಕಿಸಿ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ.
ವಿದೇಶದಿಂದ ಬಂದ ಪ್ರಯಾಣಿಕರನ್ನು ಮನೆಯಲ್ಲಿಯೇ ಇರುವಂತೆ ತಿಳಿಸಲಾಗುತ್ತಿದೆ.
ಬುಧವಾರ ಕೋವಿಡ್ 19 ಪಾಸಿಟಿವ್ ಕಂಡುಬಂದ ವ್ಯಕ್ತಿಯೊಂದಿಗೆ ಮಂಗಳೂರು ವಿಮಾನ ನಿಲ್ದಾಣದಿಂದ ಬಂದಿದ್ದ ಟ್ಯಾಕ್ಸಿ ಚಾಲಕನನ್ನು ಹೋಂ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಚಾಲಕ ಉಳ್ಳಾಲ ಮೂಲದವನಾಗಿದ್ದಾನೆ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.