Covid-19ಗೆ ಅಮೆರಿಕ ತತ್ತರ-ಒಂದೇ ವಾರದಲ್ಲಿ ನಿರುದ್ಯೋಗಿಗಳ ಸಂಖ್ಯೆ 33 ಲಕ್ಷಕ್ಕೆ ಏರಿಕೆ!
ಕೋವಿಡ್ 19 ವೈರಸ್ ನಿಂದ ಹಾಗೂ ಲಾಕ್ ಡೌನ್ ನಿಂದ ದೇಶಾದ್ಯಂತ ನಿರುದ್ಯೋಗಿಳ ಸಂಖ್ಯೆ ಹೆಚ್ಚಳವಾಗುತ್ತಿದೆ.
Team Udayavani, Mar 28, 2020, 10:19 AM IST
Representative Image
ವಾಷಿಂಗ್ಟನ್: ಮಾರಣಾಂತಿಕ ಕೋವಿಡ್ 19 ವೈರಸ್ ನಿಂದ ವಿಶ್ವದ ದೊಡ್ಡಣ್ಣ ಎನ್ನಿಸಿಕೊಂಡಿದ್ದ ಅಮೆರಿಕ ಲಾಕ್ ಡೌನ್ ನಿಂದಾಗಿ ಆರ್ಥಿಕವಾಗಿ ನಲುಗಿ ಹೋಗಿದೆ. ಅಲ್ಲದೇ ದೇಶದಲ್ಲಿ ನಿರುದ್ಯೋಗಿಗಳ ಸಂಖ್ಯೆ ದುಪ್ಪಟ್ಟಾಗಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದು ವರದಿ ತಿಳಿಸಿದೆ.
ಪ್ರತಿಷ್ಠಿತ ಸಂಸ್ಥೆಗಳು ಆರ್ಥಿಕ ಹೊಡೆತಕ್ಕೆ ಸಿಲುಕಿದ್ದು, ಉದ್ಯೋಗ ಕಡಿತಕ್ಕೆ ಮುಂದಾಗಿರುವ ಹಿನ್ನೆಲೆಯಲ್ಲಿ ಪಿಂಕ್ ಸ್ಲಿಪ್ ಕೊಡುತ್ತಿದೆ. ಇದರಿಂದಾಗಿ ಅಮೆರಿಕದಲ್ಲಿ ನಿರುದ್ಯೋಗಿಗಳ ಸಂಖ್ಯೆ ಹತ್ತು ಪಟ್ಟು ಹೆಚ್ಚಳವಾಗುತ್ತಿದ್ದು, ನಿರುದ್ಯೋಗಿಗಳಿಗೆ ನೀಡುವ ಭತ್ಯೆಗೆ ಅರ್ಜಿ ಹಾಕುವವರ ಸಂಖ್ಯೆ ಭರ್ಜರಿ ಏರಿಕೆಯಾಗಿದೆ ಎಂದು ವರದಿ ವಿವರಿಸಿದೆ.
ಕಳೆದ ಒಂದು ವಾರದಲ್ಲಿಯೇ 30 ಲಕ್ಷಕ್ಕೂ ಅಧಿಕ ಅಮೆರಿಕನ್ನರು ನಿರುದ್ಯೋಗ ಭತ್ಯೆ ಕೊಡುವಂತೆ ಅರ್ಜಿ ಸಲ್ಲಿಸಿದ್ದಾರೆ. ಇದು ಕೋವಿಡ್ 19 ವೈರಸ್ ನಿಂದ ಹಾಗೂ ಲಾಕ್ ಡೌನ್ ನಿಂದ ದೇಶಾದ್ಯಂತ ನಿರುದ್ಯೋಗಿಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಾಗೂ ಜನಜೀವನ ಅಸ್ತವ್ಯಸ್ತವಾಗುತ್ತಿರುವ ಚಿತ್ರಣ ಇದಾಗಿದೆ ಎಂದು ವರದಿ ಹೇಳಿದೆ.
ಅಮೆರಿಕದ ಕಾರ್ಮಿಕ ಇಲಾಖೆ ಬಿಡುಗಡೆ ಮಾಡಿರುವ ಅಂಕಿಅಂಶದ ಪ್ರಕಾರ, ನಿರುದ್ಯೋಗ ಭತ್ಯೆಗಾಗಿ ಅರ್ಜಿ ಸಲ್ಲಿಸಿದವರ ಸಂಖ್ಯೆ ಶನಿವಾರದ ವೇಳೆ 3.3 ಮಿಲಿಯನ್ ಗೆ ಏರಲಿದೆ ಎಂದು ತಿಳಿಸಿದೆ. ಕಳೆದ ವಾರ ಈ ಸಂಖ್ಯೆ 2,82,000 ಆಗಿತ್ತು. ಇದಕ್ಕೂ ಮುನ್ನ 1.7 ಮಿಲಿಯನ್ ಅಮೆರಿಕನ್ ನಿರುದ್ಯೋಗ ಭತ್ಯೆಗೆ ಅರ್ಜಿ ಸಲ್ಲಿಸಿದ್ದರು. ಆದರೆ ಇದೀಗ ಅದರ ಪ್ರಮಾಣ ಹತ್ತರಷ್ಟು ಹೆಚ್ಚಳವಾಗಿದೆ ಎಂದು ವರದಿ ತಿಳಿಸಿದೆ.
ಕೋವಿಡ್ 19 ವೈರಸ್ ನಿಂದ ಉಂಟಾದ ತೊಂದರೆ, ನಷ್ಟದ ಬಗ್ಗೆ ಅಮೆರಿಕದ ಪ್ರತಿಯೊಂದು ರಾಜ್ಯವೂ ವಿವರವನ್ನು ನೀಡುತ್ತಿದೆ. ಕಾರ್ಮಿಕ ಇಲಾಖೆ ಪ್ರಕಾರ, ರಾಜ್ಯಗಳಲ್ಲಿನ ಹೋಟೆಲ್ ಗಳು, ರೆಸ್ಟೋರೆಂಟ್ ಗಳು ಸಂಪೂರ್ಣ ಬಂದ್ ಆಗಿದೆ. ಅದೇ ರೀತಿ ಸಿನಿಮಾ ಮಂದಿರಗಳು, ಸಾರಿಗೆ, ಕೈಗಾರಿಕಾ ವಲಯ, ಆರೋಗ್ಯ ವಲಯ ಮತ್ತು ಸಾಮಾಜಿಕ ನೆರವು ಕೂಡಾ ಬಂದ್ ಆಗಿದೆ ಎಂದು ವಿವರಿಸಿದೆ.
ಹಲವಾರು ಹಂತಗಳಲ್ಲಿ ಇದೊಂದು ದುರಂತ ಸ್ಥಿತಿಯಾಗಿದೆ ಎಂದು ಡ್ಯೂಶೆ ಬ್ಯಾಂಕ್ ಸೆಕ್ಯೂರಿಟೀಸ್ ನ ಮುಖ್ಯ ಆರ್ಥಿಕ ತಜ್ಞ ಟೋರ್ ಸ್ಟೇನ್ ಸ್ಲೋಕ್ ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ಕಾಸ್ಟ್ ಕಟ್ಟಿಂಗ್ ಕಂಪನಿಗಳು ಈಗಾಗಲೇ ಕಠಿಣ ಕ್ರಮ ಕೈಗೊಂಡಿರುವ ಬಗ್ಗೆ ಅಂಕಿ ಅಂಶದಿಂದ ತಿಳಿದು ಬಂದಿದೆ ಎಂದು ತಿಳಿಸಿದ್ದಾರೆ. 1967ರ ನಂತರ ಕಾರ್ಮಿಕ ಇಲಾಖೆ ಪ್ರಕಟಿಸಿದ ಅಂಕಿ ಅಂಶದ ಪ್ರಕಾರ ದೇಶದ ಇತಿಹಾಸದಲ್ಲಿಯೇ ದಾಖಲೆಯ ಪ್ರಮಾಣದ ನಿರುದ್ಯೋಗ ಸೃಷ್ಟಿಯಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.