ಬಂಟ್ವಾಳ ತಾಲೂಕು ಸಂಪೂರ್ಣ ಸ್ತಬ್ಧ
ಮೆಡಿಕಲ್ ಎಂದಿನಂತೆ ತೆರೆದಿತ್ತು; ಹಾಲು ಮಾರಾಟ ಕುಸಿತ
Team Udayavani, Mar 29, 2020, 5:59 AM IST
ಬಂಟ್ವಾಳ: ದ.ಕ.ಜಿಲ್ಲೆಯಲ್ಲಿ ಮಾ. 27ರಂದು ಒಂದೇ ದಿನ ಎರಡು ಕೋವಿಡ್ 19 ಸೋಂಕು ದೃಢ ಪ್ರಕರಣಗಳು ಕಂಡುಬಂದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಂಪೂರ್ಣ ಬಂದ್ಗೆ ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನಲ್ಲಿ ಮೆಡಿಕಲ್ ಹೊರತು ಉಳಿದ ಎಲ್ಲವೂ ಸಂಪೂರ್ಣ ಬಂದ್ ಆಗಿತ್ತು.
ಈ ಹಿಂದೆ ನಿಷೇಧಾಜ್ಞೆ ಇದ್ದರೂ ಬೆಳಗ್ಗಿನ ಹೊತ್ತು ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿತ್ತು. ಹೀಗಾಗಿ ಮಧ್ಯಾಹ್ನ 12 ಗಂಟೆಯವರೆಗೆ ತಾಲೂಕಿನ ಪೇಟೆ ಪ್ರದೇಶಗಳಲ್ಲಿ ಚಟುವಟಿಕೆ ಕಂಡುಬರುತ್ತಿತ್ತು. ಆದರೆ ಶುಕ್ರವಾರ ರಾತ್ರಿ ಜಿಲ್ಲಾಡಳಿತ ಸಂಪೂರ್ಣ ಬಂದ್ ಆದೇಶಿಸಿದ್ದರಿಂದ ಬಳಿಕ ಸಂಪೂರ್ಣ ಸ್ತಬ್ಧಗೊಂಡಿತ್ತು.
ಬಂದ್ನ ನಡುವೆಯೂ ಅಗತ್ಯ ಸೇವೆ ಎಂಬ ಹಿನ್ನೆಲೆಯಲ್ಲಿ ಹಾಲಿನ ಸಾಗಾಟ ಹಾಗೂ ಮಾರಾಟಕ್ಕೆ ಅವಕಾಶ ನೀಡಿದ್ದರೂ ಹಾಲಿನ ಡೀಲರ್ಗಳೂ ಬಾರದೆ ಹಾಲಿಗೆ ಪರದಾಡುವಂತಾಗಿತ್ತು.
ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿದ್ದು, ಬೆಳ್ಳಂಬೆಳಗ್ಗೆಯೇ ಪೊಲೀಸರು ರಸ್ತೆಗಿಳಿದು ಜನತೆ ಮನೆಯಿಂದ ಹೊರ ಬಾರದಂತೆ ಎಚ್ಚರಿಕೆ ವಹಿಸಿದ್ದರು. ಸ್ಥಳೀಯ ಪೊಲೀಸರ ಜತೆಗೆ ರಾಜ್ಯ ಮೀಸಲು ಪೊಲೀಸರನ್ನೂ ನಿಯೋಜಿಸಲಾಗಿತ್ತು.
ಸಜಿಪನಡು: ಕಟ್ಟೆಚ್ಚರ
ತಾಲೂಕಿನ ಸಜಿಪನಡು ಗ್ರಾಮದ 10 ತಿಂಗಳ ಮಗುವಿಗೆ ಕೋವಿಡ್ 19 ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಇಡೀ ಗ್ರಾಮವನ್ನೇ ಹೋಮ್ ಕ್ವಾರಂಟೈನ್ ನಲ್ಲಿಡಲಾಗಿದೆ. ಗುರುವಾರ ಸಂಜೆಯಿಂದಲೇ ಗ್ರಾಮದ ಸಂಪರ್ಕ ರಸ್ತೆಗಳನ್ನು ಬಂದ್ ಮಾಡಲಾಗಿದ್ದು, ಶನಿವಾರ ಬಿಗಿ ಪೊಲೀಸ್ ಬಂದೋಬಸ್ತ್ ಮುಂದುವರಿದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.