ಉಡುಪಿ: 7 ಮಂದಿ ಆಸ್ಪತ್ರೆಗೆ ದಾಖಲು
Team Udayavani, Mar 29, 2020, 5:21 AM IST
ಉಡುಪಿ: ಶಂಕಿತ ಕೋವಿಡ್ 19 ಸೋಂಕು ಲಕ್ಷಣದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಶನಿವಾರ 7 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಪೈಕಿ ಇಬ್ಬರ ಗಂಟಲಿನ ದ್ರವ ಹಾಗೂ ರಕ್ತದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಐದು ಮಂದಿಯ ವರದಿ ಕಳುಹಿಸಲು ಬಾಕಿ ಇದೆ. ರಾಜ್ಯದಲ್ಲಿ ಕೋವಿಡ್ 19 ಸೋಂಕು ಪರೀಕ್ಷೆ ನಡೆಸುವ ಕೇಂದ್ರಗಳ ಕೊರತೆ ಇದ್ದು, ಈ ಹಿನ್ನೆಲೆಯಲ್ಲಿ ಸರಕಾರವು ಕೋವಿಡ್ 19 ಶಂಕಿತರ ಸ್ಯಾಂಪಲ್ ಅನ್ನು ಪರೀಕ್ಷೆಗೆ ಒಳ ಪಡಿ ಸುವ ವಿಧಾನವನ್ನು ಬದಲಾವಣೆ ಮಾಡಿದೆ.
ಈ ವರೆಗೆ ಜಿಲ್ಲೆಯಲ್ಲಿ 126 ಮಂದಿ ಕೋವಿಡ್ 19 ಶಂಕಿತರನ್ನು ಪತ್ತೆ ಮಾಡಲಾಗಿದ್ದು, ಅದರಲ್ಲಿ 103 ಮಂದಿಯ ವೈದ್ಯಕೀಯ ವರದಿ ಬಂದಿದೆ. 23 ಮಂದಿಯ ವೈದ್ಯಕೀಯ ವರದಿ ಬರಲು ಬಾಕಿ ಇದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.
ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡುತ್ತಿದ್ದು, ಈವರೆಗೆ 99,638 ಮನೆಗಳಿಗೆ ಭೇಟಿ ನೀಡಿ 4,43,632 ಮಂದಿ ಯನ್ನು ಸಂಪರ್ಕಿಸಿ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಿದ್ದಾರೆ. ವಿದೇಶದಿಂದ ಬಂದವರನ್ನು ಮನೆಯಲ್ಲಿಯೇ ಇರುವಂತೆ ತಿಳಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
Pro Kabaddi League: ಗುಜರಾತ್ ಜೈಂಟ್ಸ್ ವಿರುದ್ಧದಬಾಂಗ್ ಡೆಲ್ಲಿಗೆ ಗೆಲುವು
PAK Vs SA: ಸರಣಿ ಕ್ಲೀನ್ ಸ್ವೀಪ್ ಗೈದ ಪಾಕಿಸ್ಥಾನ
Eshwara Khandre; ಕುಕ್ಕೆ, ಧರ್ಮಸ್ಥಳದಲ್ಲಿ: ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕಾರ
BCCI: ಇನ್ನೆರಡು ಟೆಸ್ಟ್ ನಿಂದ ಮೊಹಮ್ಮದ್ ಶಮಿ ಹೊರಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.