ಕೋವಿಡ್ 19 ತಡೆಗೆ ಇನ್ನಷ್ಟು ಬಿಗಿ ಕ್ರಮ ಜಾರಿ

Team Udayavani, Mar 29, 2020, 1:22 PM IST

ಕೋವಿಡ್ 19 ತಡೆಗೆ ಇನ್ನಷ್ಟು  ಬಿಗಿ ಕ್ರಮ ಜಾರಿ

ಹಾಸನ: ಜಿಲ್ಲೆಯಲ್ಲಿ ಕೋವಿಡ್ 19 ಸೋಂಕು ಹರಡುವುದನ್ನು ತಡೆಯಲು ದಿನಸಿ ಅಂಗಡಿಗಳನ್ನು ಮಧ್ಯಾಹ್ನದವರೆಗೆ ಮಾತ್ರ ತೆರೆಯಲು ಅವಕಾಶ ನೀಡುವುದು. ಅಗತ್ಯ ಸೇವೆಯಲ್ಲಿ ಇರುವವರಿಗೆ ಮಾತ್ರ ಪೆಟ್ರೋಲ್‌, ಡೀಸೆಲ್‌ ವಿತರಣೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಅವರು ಎಲ್ಲಾ ಶಾಸಕರೊಂದಿಗೆ ನಡೆಸಿದ ವೀಡಿಯೋ ಕಾನ್ಫರೆನ್ಸ್‌ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಲಾಕ್‌ಡೌನ್‌ ಜಾರಿಯಲ್ಲಿದ್ದರೂ ಸಾರ್ವಜನಿಕರು ದಿನಸಿ ಖರೀದಿ ನೆಪದಲ್ಲಿ ದಿನವಿಡೀ ಸಂಚರಿಸುವುದನ್ನು ತಡೆಯಲು ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನಿಡಲಾಗುತ್ತದೆ. ಅಗತ್ಯವಿದ್ದವರ ಮನೆಗೆ ವರ್ತಕರೇ ದಿನಸಿ ತಲುಪಿಸಲಿ ಎಂದು ಸಭೆಯಲ್ಲಿ ನಿರ್ಧರಿಸಲಾಯಿತು.

ಆಹಾರ ಸಾಮಗ್ರಿ ಸರಬರಾಜಿಗೆ ಅವಕಾಶ: ಅಹಾರ ಸಾಮಗ್ರಿ ಸರಬರಾಜು ವಾಹನಗಳ ಸಂಚಾರಕ್ಕೆ ಮುಕ್ತ ಅವಕಾಶ ಕಲ್ಪಿಸಬೇಕು. ಜಿಲ್ಲಾಧಿಕಾರಿ ಅನುಮತಿ ಪಡೆದು ಯಾರು ಎಲ್ಲಿಂದ ಬೇಕಿದ್ದರೂ ಅಹಾರ ಸಾಮಗ್ರಿ ತರಿಸಿಕೊಳ್ಳಬಹುದು. ಪರಿಸ್ಥಿತಿಯ ದುರ್ಲಾಭ ಪಡೆದು ದುಬಾರಿ ಬೆಲೆಗೆ ಹಾಗೂ ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಭೆ ನಿರ್ಧರಿಸಿತು.

ಅಗತ್ಯವಿರುವಷ್ಟು ಔಷಧ ಪೂರೈಕೆ: ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಜೆ.ಸಿ. ಮಾಧು ಸ್ವಾಮಿ ಅವರು, ಜಿಲ್ಲೆಯಲ್ಲಿ ಈವರೆಗೂ ಕೊರೊನಾ ಸೋಂಕಿತರಿಲ್ಲ. ಇದೇ ಸ್ಥಿತಿಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ವೈದ್ಯರು ರಜೆ ಪಡೆಯದಂತೆ ಸೂಚನೆ ನೀಡಿದ್ದು, ಅನಿವಾರ್ಯ ಸಂದರ್ಭ ಇದ್ದರಷ್ಟೇ ರಜೆ ನೀಡಬೇಕು. ಮನೆ ಮನೆಗೆ ತೆರಳಿ ಆರೋಗ್ಯ ಬಗ್ಗೆ ತಪಾಸಣೆಗೆ ಆಶಾ ಕಾರ್ಯ ಕರ್ತೆಯರ ಬಳಕೆ ಮಾಡಿಕೊಳ್ಳುವಂತೆ ನಿರ್ದೇಶನ ನೀಡಲಾ ಗಿದೆ. ಮೆಡಿಕಲ್‌ ಸ್ಟೋರ್‌ಗಳಿಗೆ ಅಗತ್ಯವಿರುವಷ್ಟು ಔಷಧ ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಜಿಲ್ಲೆಯ ಗಡಿ ಬಂದ್‌: ಹಾಸನ ಜಿಲ್ಲೆಯ ಅಕ್ಕಪಕ್ಕದ ಜಿಲ್ಲೆ ಗಳಲ್ಲಿ ಕೋವಿಡ್ 19  ಪಾಸಿಟಿವ್‌ ಪ್ರಕರಣಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಹಾಸನಕ್ಕೆ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳಲ್ಲೂ ನಿರ್ಬಂಧ ವಿಧಿಸಲಾಗಿದೆ. ಅನಗತ್ಯವಾಗಿ ಸಂಚರಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ನಿರ್ಗತಿಕರಿಗೆ ಊಟದ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು.

ಸಂಸದ ಪ್ರಜ್ವಲ್‌ ರೇವಣ್ಣ, ಶಾಸಕ ಎಚ್‌.ಕೆ.ಕುಮಾರಸ್ಬಾಮಿ, ಜಿಲ್ಲಾಧಿಕಾರಿ ಆರ್‌. ಗಿರೀಶ್‌, ಎಸ್ಪಿ ಶ್ರೀನಿವಾಸ್‌ಗೌಡ, ಜಿಪಂ ಸಿಇಒ ಬಿ.ಎ.ಪರಮೇಶ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್‌ ಕುಮಾರ್‌ ಅವರು ಸಭೆಯಲ್ಲಿ ಉಪಸ್ಥಿತರಿದ್ದರು. ಶಾಸಕರಾದ ಎಚ್‌.ಡಿ.ರೇವಣ್ಣ, ಕೆ.ಎಂ.ಶಿವಲಿಂಗೇಗೌಡ, ಸಿ.ಎನ್‌.ಬಾಲಕೃಷ್ಣ, ಕೆ.ಎಸ್‌. ಲಿಂಗೇಶ್‌ ಅವರು ವಿಡಿಯೋ ಕಾನ್ಫರೆನ್ಸ್‌ನಲ್ಲಿ ಪಾಲ್ಗೊಂಡು ಕೆಲವು ಸಲಹೆ ನೀಡಿದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

1-sswewqewq

Shravanabelagola;ಅಹಿಂಸಾ ಮಾರ್ಗದಿಂದಷ್ಟೇ ಜಗದ ಶಾಂತಿ: ಪೇಜಾವರ ಶ್ರೀ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.