1077 ಸಹಾಯವಾಣಿಗೆ ನಿತ್ಯ 60-70 ಕರೆ
Team Udayavani, Mar 30, 2020, 11:21 AM IST
ಹುಬ್ಬಳ್ಳಿ: ವಿದೇಶಗಳಿಂದ ಬಂದವರ ಮಾಹಿತಿ ನೀಡುವುದು ಹಾಗೂ ಆರೋಗ್ಯ ಶಿಕ್ಷಣ ಪಡೆಯುವ ನಿಟ್ಟಿನಲ್ಲಿ ಜಿಲ್ಲಾಡಳಿತ ಆರಂಭಿಸಿರುವ 1077-ಸಹಾಯವಾಣಿಗೆ ನಿತ್ಯ 60-70 ಕರೆಗಳು ಬರುತ್ತಿವೆ. ಸಾರ್ವಜನಿಕರ ದೂರು-ದುಮ್ಮಾನಗಳಿಗೆ ಸ್ಪಂದಿಸುವ ಕಾರ್ಯ ಸಂಬಂಧಪಟ್ಟ ಇಲಾಖೆಗಳಿಂದ ನಡೆಯುತ್ತಿದೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರಂಭಿಸಿರುವ ಈ ಸಹಾಯವಾಣಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದ್ದು, ಅಧಿಕಾರಿಗಳು ಹಾಗೂ ಸಿಬ್ಬಂದಿ ಸೇರಿದಂತೆ 12ಕ್ಕೂ ಹೆಚ್ಚು ಮಂದಿ ಸೇವೆ ಸಲ್ಲಿಸುತ್ತಿದ್ದಾರೆ. ಜಿಲ್ಲಾಡಳಿತ ಕಳೆದ ಮಾರ್ಚ್ 18ರಂದು ಈ ಸಹಾಯವಾಣಿಗೆ ಚಾಲನೆ ನೀಡಿತ್ತು. ಅಲ್ಲಿಂದ ಇಲ್ಲಿಯವರೆಗೆ ಸುಮಾರು 520 ಕರೆಗಳು ಬಂದಿವೆ. ಶೇ.90ರಷ್ಟು ಕರೆಗಳು ಮಹಾನಗರ ವ್ಯಾಪ್ತಿಯದ್ದಾಗಿದ್ದು, ಶೇ.10ರಷ್ಟು ಜಿಲ್ಲೆಯ ವಿವಿಧೆಡೆಗಳಿಂದ ಕರೆಗಳು ಬರುತ್ತಿವೆ.
ಯಾವ್ಯಾವ ದೂರುಗಳು?: ಹೊರ ದೇಶದಿಂದ ಬಂದಿದ್ದಾರೆ ಅವರನ್ನು ತಪಾಸಣೆಗೆ ಒಳಪಡಿಸಿ, ತಮ್ಮ ಪ್ರದೇಶದಲ್ಲಿ ವ್ಯಕ್ತಿಯೊಬ್ಬರಿಗೆ ಕೋವಿಡ್ 19 ಸೋಂಕು ಲಕ್ಷಣ ಕಾಣುತ್ತಿದ್ದು ತಪಾಸಣೆ ಮಾಡಿಸಿ, ವಿದೇಶದಿಂದ ಬಂದು 14 ದಿನ ಮನೆಯಲ್ಲಿದ್ದೆವು ಮುಂದೆ ಏನು ಮಾಡಬೇಕು, ತಮ್ಮ ಏರಿಯಾದಲ್ಲಿ ವ್ಯಕ್ತಿಯೊಬ್ಬರಿಗೆ ಕೋವಿಡ್ 19 ದೃಢಪಟ್ಟಿದೆ ಎಂದು ಜನರು ಮಾತನಾಡುತ್ತಿದ್ದಾರೆ, ಆಸ್ಪತ್ರೆಗಳಲ್ಲಿ ವೈದ್ಯರು ಇಲ್ಲ, ತಮ್ಮ ಏರಿಯಾದಲ್ಲಿ ಔಷಧಿ ಸಿಂಪರಣೆ ಮಾಡಬೇಕು, ಅಗತ್ಯ ವಸ್ತುಗಳು ಎಲ್ಲಿ ದೊರೆಯುತ್ತಿವೆ. ಅಗತ್ಯ ವಸ್ತುಗಳನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂಬಿತ್ಯಾದಿ ದೂರು ಹಾಗೂ ಮಾಹಿತಿಗಳನ್ನು ಕೇಳಲಾಗುತ್ತಿದೆ. ಕೆಲ ದೂರುಗಳಿಗೆ ತಕ್ಷಣವೇ ಅಧಿಕಾರಿಗಳಿಂದ ಮಾಹಿತಿ ಪಡೆದು ಪರಿಹಾರ ಕಲ್ಪಿಸುವ ಕೆಲಸವಾಗುತ್ತಿದ್ದು, ಇನ್ನೂ ಕೆಲವನ್ನು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿ ನಂತರ ಮಾಹಿತಿ ನೀಡಲಾಗುತ್ತಿದೆ.
ಪರಿಹಾರಕ್ಕೆ ಒತ್ತು: ಕರೆ ಮಾಡಿ ನೀಡಿದ ಮಾಹಿತಿ ಸೇರಿದಂತೆ ಪ್ರತಿಯೊಂದನ್ನು ದಾಖಲು ಮಾಡಿಕೊಳ್ಳಲಾಗುತ್ತಿದೆ. ಇನ್ನೂ ಕೆಲ ದೂರುಗಳನ್ನು ಸಂಬಂಧಪಟ್ಟ ಇಲಾಖೆಗೆ ತಿಳಿಸಲಾಗುತ್ತಿದೆ. ಆ ಕುರಿತು ಅಧಿಕಾರಿಗಳು ಕೈಗೊಂಡಿರುವ ಕ್ರಮ ಹಾಗೂ ಪರಿಹಾರ ಕಲ್ಪಿಸಿರುವ ಮಾಹಿತಿ ಪಡೆದು ದಾಖಲಾಗಿರುವ ದೂರಿನ ಮುಂದೆ ಕೈಗೊಂಡಿರುವ ಕ್ರಮದ ಬಗ್ಗೆ ನಮೂದಿಸಲಾಗುತ್ತಿದೆ. ಪ್ರತಿಯೊಂದು ಕರೆಯನ್ನು ಅತ್ಯಂತ ಸೂಕ್ಷ್ಮವಾಗಿ ಪರಿಗಣಿಸಿ ಅವುಗಳಿಗೆ ಪರಿಹಾರ ಅಥವಾ ಮಾಹಿತಿ ನೀಡುವ ಕೆಲಸ ನಡೆಯುತ್ತಿದೆ. ಕರೆ ಮಾಡಿದವರ ವಿವರಗಳನ್ನು ಗೌಪ್ಯವಾಗಿರಿಸಲಾಗುತ್ತಿದೆ.
ಅಗತ್ಯ ಸೇವೆಗಾಗಿ 0836-274355 : ಆರೋಗ್ಯ ಶಿಕ್ಷಣ ಹಾಗೂ ವಿದೇಶದಿಂದ ಬಂದಿರುವವರ ಮಾಹಿತಿ ನೀಡುವ ಕುರಿತು 1077 ಆರಂಭಿಸಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಅಗತ್ಯ ಸೇವೆಗಳ ಕುರಿತು ಹೆಚ್ಚಿನ ಕರೆಗಳು ಬರುತ್ತಿರುವ ಹಿನ್ನೆಲೆಯಲ್ಲಿ ಇದಕ್ಕಾಗಿ ಪ್ರತ್ಯೇಕವಾಗಿ ಜಿಲ್ಲಾ ಪಂಚಾಯ್ತಿ ಕಚೇರಿಯಲ್ಲಿ ದೂರವಾಣಿ: 0836-2743555 ಸಹಾಯವಾಣಿ ಆರಂಭಿಸಲಾಗಿದೆ. ಮಾ.26ರಿಂದ ಆರಂಭವಾಗಿರುವ ಈ ಸಹಾಯವಾಣಿಗೆ 93 ಕರೆಗಳು ಬಂದಿವೆ. ಸಾರ್ವಜನಿಕರು ಅಗತ್ಯ ಸೇವೆಗಳಲ್ಲಿ ಯಾವುದೇ ವ್ಯತ್ಯಯ, ಮಾಹಿತಿ ಬೇಕಾದರೆ ಈ ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದು.
ಸಹಕಾರ-ಸಹಭಾಗಿತ್ವ ಅಗತ್ಯ : ಕೋವಿಡ್ 19 ಹರಡದಂತೆ ತಡೆಯುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಹೋರಾಟ ಮಾಡಬೇಕು. ತಮ್ಮ ಸುತ್ತಮುತ್ತಲಿನ ವಿಷಯಗಳ ಕುರಿತು ಸಹಾಯವಾಣಿಗೆ ಕರೆ ಮಾಡಿ ತಿಳಿಸುವುದರಿಂದ ಆದಷ್ಟು ಶೀಘ್ರದಲ್ಲಿ ಪರಿಹಾರ ನೀಡುವ ಕೆಲಸ ಆಗಲಿದೆ. ಸಾರ್ವಜನಿಕರು ಯಾವುದೇ ಆತಂಕವಿಲ್ಲದೆ ಕರೆ ಮಾಡಿ ಮಾಹಿತಿ ನೀಡಬೇಕು. ಸೋಂಕು ಹರಡದಂತೆ ತಡೆಗಟ್ಟುವಲ್ಲಿ ಸಾರ್ವಜನಿಕರ ಸಹಕಾರ ಹಾಗೂ ಸಹಭಾಗಿತ್ವ ಬಹಳ ಮುಖ್ಯವಾಗಿದೆ. –ಇಬ್ರಾಹಿಂ ಮೈಗೂರ, ಸಹಾಯವಾಣಿ ನೋಡಲ್ ಅಧಿಕಾರಿ
–ಹೇಮರಡ್ಡಿ ಸೈದಾಪುರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.