ದೆಹಲಿ ಮಸೀದಿಗೆ ತೆರಳಿದ್ದ ತೆಲಂಗಾಣದ 6 ಮಂದಿ ಕೋವಿಡ್-19ಗೆ ಬಲಿ: ಬೆಚ್ಚಿಬಿದ್ದ ಜನರು

Team Udayavani, Mar 31, 2020, 7:50 AM IST

delhi-muzamuddin

ನವದೆಹಲಿ: ರಾಷ್ಟ್ರ ರಾಜಧಾನಿ ನಿಜಾಮುದ್ದೀನ್‌ ಪ್ರದೇಶದಲ್ಲಿರುವ ಮಸೀದಿಗೆ ತೆರಳಿದ್ದ 6 ಮಂದಿ ತೆಲಂಗಾಣ ಪ್ರಜೆಗಳು ಕೋವಿಡ್-19 ವೈರಸ್ ನಿಂದ ಸಾವನ್ನಪ್ಪಿದ್ದಾರೆ ಎಂದು ತೆಲಂಗಾಣ ಆರೋಗ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆ ಮೂಲಕ ಇಲ್ಲಿ 48 ಗಂಟೆಗಳ ಅವಧಿಯಲ್ಲಿ ಈ ಮಾರಕ ವೈರಾಣುವಿಗೆ 8 ಮಂದಿ ಸಾವನ್ನಪ್ಪಿದ್ದಾರೆ.

ತೆಲಂಗಾಣ ಸಿಎಂ ಕೆ. ಚಂದ್ರಶೇಖರ್‌ ರಾವ್‌ ಸೋಮವಾರ ಸಂಜೆ  ಈ ಕುರಿತು ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಮಾರ್ಚ್ 13 ಮತ್ತು 14ರಂದು ನಿಜಾಮುದ್ದೀನ್‌ ಮಸೀದಿಯ ಧಾರ್ಮಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದ ಆರು ಜನರು ರಾಜ್ಯದಲ್ಲಿ ಸಾವನ್ನಪ್ಪಿದ್ದಾರೆ ಎಂಬುದಾಗಿ ಹೇಳಿದ್ದಾರೆ. ಈ ಮಾಹಿತಿ ಅಕ್ಷರಶಃ ಜನರನ್ನು ಬೆಚ್ಚಿಬೀಳುವಂತೆ ಮಾಡಿದೆ.

ಈ ಆರು ವ್ಯಕ್ತಿಗಳು ವಿವಿಧ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಕೋವಿಡ್ 19 ಪರೀಕ್ಷೆಗೆ ಒಳಗಾಗಿದ್ದರು. ಇವರಿಗೆ ಪಾಸಿಟಿವ್ ವರದಿಯೂ ಬಂದಿತ್ತು. ರಾಜ್ಯ ಆರೋಗ್ಯ ಇಲಾಖೆಯು ಭಾನುವಾರ ರಾತ್ರಿ 74 ವರ್ಷದ ವೃದ್ದರೋರ್ವರು ಈ ಮಾರತಕ ವೈರಸ್ ಗೆ ಸಾವನ್ನಪ್ಪಿರುವ ಮಾಹಿತಿಯನ್ನು ಖಚಿತಪಡಿಸಿತ್ತು.  ಕಾರ್ಯಕ್ರಮದಲ್ಲಿ ಭಾಗಿಯಾದ ಪ್ರತಿಯೊಬ್ಬರು ಕೂಡ  ಆರೋಗ್ಯ ಇಲಾಖೆಗೆ ಮಾಹಿತಿ ರವಾನಿಸಬೇಕು. ಸರ್ಕಾರ ಇವರಿಗೆ ಉಚಿತ ವಾಗಿ ಕೋವಿಡ್-19 ಪರೀಕ್ಷೆ ಮತ್ತು ಪಾಸಿಟಿವ್ ವರದಿ ಬಂದರೂ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಕೆ. ಚಂದ್ರಶೇಖರ್‌ ರಾವ್‌ ತಿಳಿಸಿದ್ದಾರೆ.

ದೆಹಲಿಯಲ್ಲಿ ನಡೆದ ಈ ಧಾರ್ಮಿಕ ಕಾರ್ಯಕ್ರಮ ಈಗ ದೊಡ್ಡ ಅಪಾಯ ತಂದೊಡ್ಡುವ ಸಾಧ್ಯತೆ ಇದ್ದು, ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರ ಪೈಕಿ 7 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿರುವ ಬೆನ್ನಲ್ಲೇ ಸೋಮವಾರ ಇಡೀ ಪ್ರದೇಶವನ್ನು  ಸಾರ್ವಜನಿಕರಿಗೆ ನಿರ್ಬಂಧಿಸಲಾಗಿದೆ. ಜನರ ಚಲನವಲನದ ಮೇಲೆ ನಿಗಾ ಇಡಲು ಡ್ರೋನ್‌ಗಳನ್ನೂ ಬಳಸಿಕೊಳ್ಳಲಾಗುತ್ತಿದೆ. 200 ಮಂದಿಯನ್ನು ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವರದಿ ನಿರೀಕ್ಷಿಸಲಾಗುತ್ತಿದೆ. ಇವರ ಸಂಪರ್ಕಕ್ಕೆ ಬಂದ 2,000 ಕ್ಕಿಂತ ಹೆಚ್ಚು ಜನರನ್ನು  ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ಆರೋಗ್ಯ ಸಚಿವಾಲಯ, ವಿಶ್ವ ಆರೋಗ್ಯ ಸಂಸ್ಥೆ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ.

ಈ ಕಾರ್ಯಕ್ರಮಕ್ಕೆ ಮಲೇಷ್ಯಾ, ಇಂಡೋನೇಷ್ಯಾ, ಸೌದಿ ಅರೇಬಿಯಾ, ಕಜಕಿಸ್ಥಾನದಿಂದ ಅನೇಕರು ಭೇಟಿ ಕೊಟ್ಟಿದ್ದರು.

ಟಾಪ್ ನ್ಯೂಸ್

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

8-belthangady

Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು

ಟ್ರಕ್ ಡಿಕ್ಕಿ ಹೊಡೆದು ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ… ಓರ್ವ ಸಾ*ವು

Tragedy: ಬೆಳ್ಳಂಬೆಳಗ್ಗೆ ಭೀಕರ ಅಪಘಾತ… ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ

7-icc

ICC Champions Trophy: ಹೈಬ್ರಿಡ್‌ ಮಾದರಿಯೇ ಅಂತಿಮ

6-mandya

Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ  87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

1-lasike

Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

10-up-yodhas

Pro Kabaddi: ದ್ವಿತೀಯ ಸ್ಥಾನಕ್ಕೆ ಯೋಧಾಸ್‌

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

9-ind-pak

Kho Kho ವಿಶ್ವಕಪ್‌: ಭಾರತ- ಪಾಕಿಸ್ಥಾನ ಉದ್ಘಾಟನ ಪಂದ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.