ಸೋಮವಾರ ಒಂದೇ ದಿನ ಭಾರತದಲ್ಲಿ 227 ಜನರಿಗೆ ಕೋವಿಡ್-19 ಸೋಂಕು ದೃಢ !
Team Udayavani, Mar 31, 2020, 8:21 AM IST
ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ಕೋವಿಡ್- 19 ಪ್ರಕರಣಗಳ ಸಂಖ್ಯೆಯಲ್ಲಿ ಅತೀ ಹೆಚ್ಚು ಏರಿಕೆ ಕಂಡಿದೆ. ಸೋಮವಾರ ಒಂದೇ ದಿನ 227 ಜನರಲ್ಲಿ ಕೋವಿಡ್-19 ಪಾಸಿಟಿವ್ ವರದಿ ಬಂದಿದ್ದು 11 ಜನರು ಮೃತರಾಗಿದ್ದಾರೆ. ದೆಹಲಿಯ ಮಸೀದಿಗೆ ತೆರಳಿದ ತೆಲಂಗಾಣದ 6 ಜನರು ಸಾವನ್ನಪ್ಪಿದ್ದು ಅಕ್ಷರಶಃ ಬೆಚ್ಚಿಬೀಳಿಸಿದೆ.
ಇನ್ನು, ಒಂದೇ ದಿನ ಇಷ್ಟೊಂದು ಹೊಸ ಪ್ರಕರಣ ದಾಖಲಾಗಿದ್ದು ಭಾರತದಲ್ಲಿ ಇದೇ ಮೊದಲು. ಮುಂದಿನ ದಿನಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. 227 ಹೊಸ ಪ್ರಕರಣಗಳ ಪೈಕಿ 25 ಪ್ರಕರಣಗಳು ದೆಹಲಿಯಲ್ಲೇ ದಾಖಲಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಭಾರತದಲ್ಲಿ ಈ ವೈರಸ್ ಸಾಮೂದಾಯಿಕ ಹಂತಕ್ಕೆ ತಲುಪಿಲ್ಲ ಎಂದಿರುವುದು ಸ್ಪಲ್ಪ ಮಟ್ಟಿಗೆ ನಿಟ್ಟುಸಿರು ಬಿಡುವಂತಾಗಿದೆ. ಆದರೆ ದೇಶಾದ್ಯಂತ ಲಾಕ್ ಡೌನ್ ಆದೇಶ ಜಾರಿಯಲ್ಲಿದ್ದರೂ ಸೋಂಕಿತರ ಸಂಖ್ಯೆ ದ್ವಿಗುಣಗೊಳ್ಳುತ್ತಲೇ ಇದೆ. ಆ ಮೂಲಕ oಟ್ಟಾರೆ ಸೋಂಕಿತರ ಪ್ರಮಾಣ 1251ಕ್ಕೆ ಏರಿಕೆಯಾಗಿದ್ದರೆ, ಮೃತರ ಸಂಖ್ಯೆ 32ಕ್ಕೆ ಜಿಗಿದಿದೆ.
ಜಗತ್ತಿನಾದ್ಯಂತ ಈ ಮಾರಕ ವೈರಸ್ ಗೆ 37,638 ಜನರು ಬಲಿಯಾಗಿದ್ದರೆ, 7,84,314 ಜನರಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಇಟಲಿಯಲ್ಲಿ ಅತೀ ಹೆಚ್ಚು ಜನರು ಸಾವನ್ನಪ್ಪಿದ್ದು(11,5891) , 1,63,429 ಜನರು ಸೋಂಕು ಪೀಡಿತರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಾ*ವು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.