ದೆಹಲಿ ಮಸೀದಿ ಸಭೆ: ಮತ್ತೆ 24 ಮಂದಿಗೆ ಮಾರಣಾಂತಿಕ ಕೋವಿಡ್ 19 ಸೋಂಕು ದೃಢ, 7 ಜನರು ಸಾವು
ಇಡೀ ನಿಜಾಮುದ್ದೀನ್ ಪ್ರದೇಶವನ್ನು ಬಂದ್ ಮಾಡಲಾಗಿದ್ದು, ನಗರದ ವಿವಿಧ ಕಡೆಗಳಲ್ಲಿ ಶಂಕಿತರನ್ನು ಕ್ವಾರಂಟೈನ್ ನಲ್ಲಿ ಇಡಲಾಗಿದೆ ಎಂದು ತಿಳಿಸಿದೆ.
Team Udayavani, Mar 31, 2020, 12:07 PM IST
ನವದೆಹಲಿ: ನವದೆಹಲಿಯ ನಿಜಾಮುದ್ದೀನ್ ಪ್ರದೇಶದ ಮಸೀದಿಯ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದವರಲ್ಲಿ 24 ಮಂದಿಗೆ ಮಾರಣಾಂತಿಕ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ಇನ್ನಷ್ಟು ಜನರಿಗೆ ಸೋಂಕು ಇದ್ದಿರುವುದಾಗಿ ವರದಿ ತಿಳಿಸಿದೆ. ಈವರೆಗೆ ದಿಲ್ಲಿಯಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ.
ಇಲ್ಲಿನ ಮಸೀದಿಯೊಂದರಲ್ಲಿ ಮಾರ್ಚ್ 13ರಿಂದ 15ವರೆಗೆ ಧಾರ್ಮಿಕ ಸಭೆ ನಡೆದಿತ್ತು. ಸುಮಾರು 2 ಸಾವಿರ ಜನರು ಪಾಲ್ಗೊಂಡಿದ್ದು, ಇದರಲ್ಲಿ 300 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಇವರಿಗೆ ಕೋವಿಡ್ 19 ಸೋಂಕಿನ ಲಕ್ಷಣ ಕಾಣಿಸಿಕೊಂಡಿರುವುದಾಗಿ ವರದಿ ಹೇಳಿದೆ.ಇದೀಗ ಇಡೀ ನಿಜಾಮುದ್ದೀನ್ ಪ್ರದೇಶವನ್ನು ಬಂದ್ ಮಾಡಲಾಗಿದ್ದು, ನಗರದ ವಿವಿಧ ಕಡೆಗಳಲ್ಲಿ ಶಂಕಿತರನ್ನು ಕ್ವಾರಂಟೈನ್ ನಲ್ಲಿ ಇಡಲಾಗಿದೆ ಎಂದು ತಿಳಿಸಿದೆ.
ಸಂಘಟಕರು ದೊಡ್ಡ ಅಪರಾಧ ಎಸಗಿದ್ದು, ನಾವು ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವಂತೆ ಲೆಫ್ಟಿನೆಂಟ್ ಗವರ್ನರ್ ಬಳಿ ಕೇಳಿಕೊಂಡಿರುವುದಾಗಿ ದಿಲ್ಲಿ ಆರೋಗ್ಯ ಸಚಿವ ಸತ್ಯೇಂದ್ರ ತಿಳಿಸಿದ್ದಾರೆ. ಸಭೆಯಲ್ಲಿ ಪಾಲ್ಗೊಂಡಿದ್ದವರ ಪತ್ತೆ ಹಚ್ಚುವ ಕಾರ್ಯಕ್ಕೆ ಗೃಹ ಸಚಿವಾಲಯ ಪ್ರಮುಖ ಆದ್ಯತೆ ನೀಡಿದೆ ಎಂದು ಮೂಲಗಳು ಹೇಳಿವೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೂಡಾ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಸಚಿವರ ಜತೆ ಮಾತುಕತೆ ನಡೆಸಿದ್ದಾರೆ. ಮಸೀದಿಯ ಆಡಳಿತ ಮಂಡಳಿಯ ನಿರ್ಲಕ್ಷ್ಯಕ್ಕೆ ನೂರಾರು ಮಂದಿಯ ಬದುಕು ಕಳೆದುಕೊಳ್ಳುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್
Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್ ಗೆದ್ದ ವಿಜ್ಞಾನಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.