ಸಮನ್ವಯದಿಂದ ಕಾರ್ಯ ನಿರ್ವಹಿಸಲು ಸೂಚನೆ

Team Udayavani, Mar 31, 2020, 12:11 PM IST

ಸಮನ್ವಯದಿಂದ ಕಾರ್ಯ ನಿರ್ವಹಿಸಲು ಸೂಚನೆ

ಶಿವಮೊಗ್ಗ: ಕೋವಿಡ್ 19 ಸೋಂಕು ಹಿನ್ನೆಲೆಯಲ್ಲಿ ಎಲ್ಲಾ ಖಾಸಗಿ ಆಸ್ಪತ್ರೆಗಳು ಜಿಲ್ಲಾಡಳಿತದ ನಿರ್ದೇಶನದಂತೆ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌. ಈಶ್ವರಪ್ಪ ಅವರು ಸೂಚನೆ ನೀಡಿದರು.

ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅವರು ವಿವಿಧ ಖಾಸಗಿ ಆಸ್ಪತ್ರೆ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿ ಅವರು ಮಾತನಾಡಿದರು. ಜ್ವರ, ಸೋಂಕು ಸೇರಿದಂತೆ ಒಂದಕ್ಕಿಂತ ಹೆಚ್ಚು ರೋಗ ಲಕ್ಷಣಗಳನ್ನು ಹೊಂದಿರುವವರನ್ನು ನೇರವಾಗಿ ಮೆಗ್ಗಾನ್‌ ಆಸ್ಪತ್ರೆಗೆ ಕಳುಹಿಸಲು ಈಗಾಗಲೇ ಸೂಚನೆ ನೀಡಲಾಗಿದೆ. ಇನ್ನುಳಿದ ರೋಗಗಳಿಗೆ ಚಿಕಿತ್ಸೆಯನ್ನು ಯಾವುದೇ ಕಾರಣಕ್ಕೂ ಖಾಸಗಿ ಆಸ್ಪತ್ರೆಗಳಲ್ಲಿ ನಿರಾಕರಿಸಬಾರದು. ಮೆಗ್ಗಾನ್‌ ಆಸ್ಪತ್ರೆಯನ್ನು ಕೋವಿಡ್ 19  ಚಿಕಿತ್ಸೆಗಾಗಿ ಮಾತ್ರ ನಿಗದಿಪಡಿಸಲಾಗಿದ್ದು, ಇನ್ನುಳಿದ ಒಳರೋಗಿ ಚಿಕಿತ್ಸೆಗಳಿಗೆ ಸುಬ್ಬಯ್ಯ ಮೆಡಿಕಲ್‌ ಕಾಲೇಜನ್ನು ಗುರುತಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸುಬ್ಬಯ್ಯ ಮೆಡಿಕಲ್‌ ಕಾಲೇಜಿನಲ್ಲಿ ಜ್ವರ, ಸೋಂಕು ಹೊರತುಪಡಿಸಿ ಎಲ್ಲಾ ರೋಗಿಗಳಿಗೆ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚನೆ ನೀಡಿದರು.

ಮೆಗ್ಗಾನ್‌ ಆಸ್ಪತ್ರೆಯಲ್ಲಿ ಜ್ವರ ಪೀಡಿತ ವ್ಯಕ್ತಿಗಳನ್ನು ದಾಖಲು ಮಾಡದೆ ಬೇರೆ ಆಸ್ಪತ್ರೆಗಳಿಗೆ ಕಳುಹಿಸಿರುವ ಬಗ್ಗೆ ದೂರುಗಳು ಬಾರದಂತೆ ನೋಡಿಕೊಳ್ಳಬೇಕು. ಸೇವೆಯಲ್ಲಿ ಲೋಪ ಎಸಗದೆ ಕರ್ತವ್ಯ ನಿರ್ವಹಿಸುವಂತೆ ಅವರು ಮನವಿ ಮಾಡಿದರು.

ಸುತ್ತೋಲೆ: ಶಾಲೆಗಳಿಗೆ ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ ಬಿಸಿಯೂಟದ ಬದಲು, ಆಯಾ ವಿದ್ಯಾರ್ಥಿಗಳ ಮನೆಗೆ ಅಕ್ಕಿ, ಬೇಳೆ ತಲುಪಿಸುವಂತೆ ಶಿಕ್ಷಕರಿಗೆ ಸೂಚಿಸಿ ಸರ್ಕಾರ ಸುತ್ತೋಲೆ ಹೊರಡಿಸಿದೆ. ಆದರೆ ಪ್ರಾಯೋಗಿಕವಾಗಿ ಇದು ಕಷ್ಟವಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದೊಂದಿಗೆ ಸಮಾಲೋಚನೆ ನಡೆಸಿ, ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.

ಗ್ರಾಪಂ ಚುನಾವಣೆ ಮುಂದಕ್ಕೆ: ರಾಜ್ಯದಲ್ಲಿ ಗ್ರಾಮ ಪಂಚಾಯತ್‌ ಚುನಾವಣೆ ಮೇ ತಿಂಗಳಲ್ಲಿ ನಡೆಯಬೇಕಾಗಿತ್ತು. ಕೋವಿಡ್ 19 ಹಿನ್ನೆಲೆಯಲ್ಲಿ ಚುನಾವಣೆ ಮುಂದಕ್ಕೆ ಹಾಕುವಂತೆ ಕೋರಿ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಲಾಗಿದೆ. ಪಂಚಾಯತ್‌ ರಾಜ್‌ ಕಾಯ್ದೆ ತಿದ್ದುಪಡಿಗೆ ಸುಗ್ರೀವಾಜ್ಞೆ ಹೊರಡಿಸಲಾಗಿದೆ. ಮುಂದಿನ ಚುನಾವಣೆಯಲ್ಲಿ ಈ ತಿದ್ದುಪಡಿ ಅನ್ವಯವಾಗಲಿದೆ ಎಂದು ಅವರು ಸ್ಪಷ್ಟಪಡಿಸಿದರು.

ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್‌, ಪೊಲೀಸ್‌ ವರಿಷ್ಠಾಧಿಕಾರಿ ಕೆ.ಎಂ. ಶಾಂತರಾಜು, ಜಿಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತೇಶ್‌, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಎಲ್‌. ವೈಶಾಲಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

sagara

Sagara: ಕಾಡಾನೆಗಳ ಹಾವಳಿ; ಲಕ್ಷಾಂತರ ರೂ. ಬೆಳೆ ನಷ್ಟ

19-thirthahalli

Thirthahalli: ನದಿಗೆ ಹಾರಿ ಕಾಲೇಜು ವಿದ್ಯಾರ್ಥಿ ಮೃತ್ಯು

1-edd

Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು

9

Shivamogga: ಅಯೋಧ್ಯೆ ರೀತಿ ವ‌ಕ್ಫ್ ಹಗರಣಕ್ಕೂ ನ್ಯಾಯ ಸಿಕ್ಕೇ ಸಿಗುತ್ತದೆ; ಈಶ್ವರಪ್ಪ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.