![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 31, 2020, 7:52 PM IST
ಹೊಸದಿಲ್ಲಿ: ಭಾರತದಲ್ಲಿ ಕೋವಿಡ್ 19 ವೈರಸ್ ಪೀಡಿತರ ಸಂಖ್ಯೆ ಮಿತಿಮೀರಿದರೆ ಅಂತಿಮ ವರ್ಷದ ಎಂ.ಬಿ.ಬಿ.ಎಸ್. ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು, ವೈದ್ಯಕೀಯ ಸ್ನಾತಕೋತ್ತರ ವಿದ್ಯಾರ್ಥಿಗಳನ್ನು ಈ ಮಾರಕ ವೈರಸ್ ವಿರುದ್ಧದ ಯುದ್ಧಕ್ಕೆ ಅಣಿಗೊಳಿಸಲು ಯೋಚಿಸಲಾಗಿದೆ.
ಇದು ಸಾಲದಾದರೆ, ನರ್ಸಿಂಗ್, ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳನ್ನೂ ಇದಕ್ಕೆ ಬಳಸಿಕೊಳ್ಳಲು ಚಿಂತನೆ ನಡೆಸಲಾಗಿದೆ. ವೈದ್ಯರ ಕೊರತೆಯನ್ನು ನೀಗಿಸಲು ಭಾರತೀಯ ವೈದ್ಯಕೀಯ ಕೌನ್ಸಿಲ್ (ಎಂಸಿಐ) ಈ ನಿಟ್ಟಿನಲ್ಲಿ ಚಿಂತನೆ ನಡೆಸಿದೆ ಎಂದು “ದ ಹಿಂದುಸ್ತಾನ್ ಟೈಮ್ಸ್’ ವರದಿ ಮಾಡಿದೆ.
ಯಾಕೆ ಈ ಚಿಂತನೆ?: ವಿಶ್ವ ಆರೋಗ್ಯ ಸಂಸ್ಥೆಯ ಸಾಮಾನ್ಯ ಸಲಹೆಗಳ ಪ್ರಕಾರ, ಪ್ರತಿ 1,000 ಜನರಿಗೆ ಒಬ್ಬ ವೈದ್ಯನಾದರೂ ಇರಬೇಕು. ಆದರೆ, ಭಾರತದಲ್ಲಿ 1,500 ಜನಕ್ಕೆ ಒಬ್ಬ ವೈದ್ಯನಿದ್ದಾನೆ. ಗ್ರಾಮೀಣ ಪ್ರದೇಶಗಳಲ್ಲಿ, ಪ್ರತಿ 10,000 ಜನರಿಗೆ ಒಬ್ಬ ವೈದ್ಯನಿದ್ದಾನೆ. ಕೋವಿಡ್ 19 ವೈರಸ್ ಹೆಚ್ಚಾದರೆ ಈ ಕೊರತೆ ಇನ್ನೂ ಅಗಾಧವಾಗುವುದರಿಂದ ಈ ಚಿಂತನೆ ನಡೆಸಲಾಗಿದೆ ಮತ್ತು ಈ ಮೂಲಕ 60 ವರ್ಷ ಮೇಲ್ಪಟ್ಟ ವೈದ್ಯರೂ ಈ ಮಾರಕ ಸೋಂಕಿಗೆ ಒಳಗಾಗುವುದನ್ನು ತಪ್ಪಿಸಲೂ ಇದರಿಂದ ಸಾಧ್ಯವಾಗಲಿದೆ.
ಸದ್ಯದ ಕೋವಿಡ್ 19 ನಿರ್ವಹಣೆಯಲ್ಲೇ ಶೇ. 85ರಷ್ಟು ವೈದ್ಯರ ಕೊರತೆಯಿದೆ. ಸೋಂಕು ಹೆಚ್ಚಾಗುತ್ತಾ ಹೋದರೆ ಹೆಚ್ಚಿನ ಸಂಖ್ಯೆಯಲ್ಲಿ ವೈದ್ಯರು ಬೇಕಾಗುತ್ತದೆ. ಹಾಗಾದಾಗ, ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳ ನೆರವು ಪಡೆಯಬೇಕಿದೆ.
– ಡಾ. ದೇವಿ ಶೆಟ್ಟಿ, ನಾರಾಯಣ, ಹೆಲ್ತ್ ಗ್ರೂಪ್ ಮುಖ್ಯಸ್ಥರು
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.