ನಿಜಾಮುದ್ದೀನ್ ನಿಂದ ವಿಜಯಪುರ ನಗರಕ್ಕೆ ಬಂದ 10 ಜನರ ಗಂಟಲು ದ್ರವ ಪರೀಕ್ಷೆ


Team Udayavani, Apr 1, 2020, 3:05 PM IST

ನಿಜಾಮುದ್ದೀನ್ ನಿಂದ ವಿಜಯಪುರ ನಗರಕ್ಕೆ ಬಂದ 10 ಜನರ ಗಂಟಲು ದ್ರವ ಪರೀಕ್ಷೆ

ವಿಜಯಪುರ: ದೆಹಲಿ ನಿಜಾಮುದ್ದೀನ್ ಮಸೀದಿಯಲ್ಲಿ ಸಭೆ ನಡೆಸಿದ ಪಶ್ಚಿಮ ಬಂಗಾಳದ ಐವರು, ಅವರೊಂದಿದ್ದ ಇನ್ನೂ ಐವರು ಮಹಿಳೆಯರು ಸೇರಿ 10 ಜನರು ವಿಜಯಪುರ ನಗರದಲ್ಲಿ ವಾಸ ಇರುವ ಮಾಹಿತಿ ಬಹಿರಂಗ ಆಗಿದೆ. ಇವರೊಂದಿಗೆ ಸಂಪರ್ಕದಲ್ಲಿ ಇದ್ದ ಮೂವರು ಸೇರಿದಂತೆ ಒಟ್ಟು 13 ಜನರ ಗಂಟಲು ದ್ರವವನ್ನು ಪ್ರಯೋಗಾಲಯಕ್ಕೆ ಕಳಿಸಲಾಗಿದೆ. ಇಡೀ ಪ್ರಕರಣದಲ್ಲಿ 39 ಜನರನ್ನು ಹೋಂ ಕ್ವಾರಂಟೈನ್ ನಿಗಾದಲ್ಲಿ ಇರಿಸಲಾಗಿದೆ.

ಈ ಕುರಿತು ಬುಧವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ,  ಪಶ್ಚಿಮ ಬಂಗಾಲ ಮೂಲದ 10 ಜನರು ಮಾರ್ಚ್ 3 ಕ್ಕೆ ಪಶ್ಚಿಮ ಬಂಗಾಲದಿಂದ ದೆಹಲಿಗೆ ಪ್ರಯಾಣ ಬೆಳೆಸಿ, ಮಾರ್ಚ್ 4 ಕ್ಕೆ ದೆಹಲಿ ನಿಜಾಮುದ್ದೀನ್‌  ಸಭೆಯಲ್ಲಿ ಭಾಗಿಯಾಗಿದ್ದರು ಎಂದು ವಿವರಿಸಿದ್ದಾರೆ.

ದೆಹಲಿ ನಿಜಾಮುದ್ದೀನ್ ಮಜೀದ್ ಸಭೆ ಬಳಿಕ ಮಾರ್ಚ 10 ರಂದು  ವಿಜಯಪುರ ಜಿಲ್ಲೆಗೆ ಆಗಮಿಸಿದ್ದ 10 ಜನರ ತಂಡ, ನಗರದ ವಿವಿಧ ಕಡೆಗಳಲ್ಲಿ ಸಭೆ ನಡೆಸಿದ್ದರು. ಹೀಗಾಗಿ ಇವರೊಂದಿಗೆ ಸಂಪರ್ಕದಲ್ಲಿದ್ದ ಸ್ಥಳೀಯ ಇನ್ನೂ 3 ಜನರ ಮಾಹಿತಿ ಸಂಗ್ರಹಿಸಿ, 13 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳಿಸಲಾಗಿದೆ. ಈ 13 ಜನರು ‌ಮಾತ್ರವಲ್ಲದೇ ಇವರೊಂದಿಗೆ ಸಂಪರಗಕದಲ್ಲಿದ್ದ ಇತರೆ 23 ಜನರು ಹಾಗೂ ವಿವಿಧ ದೇಶಗಳ‌ ಪ್ರವಾಸಿಗರಿಗೆ ಮಾರ್ದಗರ್ಶನ ಮಾಡಿದ್ದ 3 ಗೈಡ್ ಗಳೂ ಸೇರಿದಂತೆ 39 ಜನರನ್ನು ಹೋಂ ಕ್ವಾರಂಟೈನ್ ನಿಗಾದಲ್ಲಿ ಇರಿಸಲಾಗಿದೆ ಎಂದು ವಿವರಿಸಿದರು.

ಗಂಟಲು ದ್ರವ ಪರೀಕ್ಷೆ ವರದಿ ಬಂದ ನಂತರ ಆರೋಗ್ಯ ಇಲಾಖೆ ಮುಂದಿನ ‌ಕ್ರಮ ಕೈಗೊಳ್ಳಲಿದೆ ಎಂದರು.

ಅಗತ್ಯ ಎನಿಸಿದರೆ ನಿಜಾಮುದ್ದೀನ್ ‌ಮಜೀದ್ ಸಭೆಯಲ್ಲಿ ಭಾಗವಹಿಸಿದವರ ಸಂಪರ್ಕ ಹೊಂದಿದ್ದ ಜಿಲ್ಲೆಯ 23 ಜನರ ಗಂಟಲು ದ್ರವ ಮಾದರಿಯನ್ನೂ ಸಂಗ್ರಹಿಸಿ ಪರೀಕ್ಷೆಗೆ ಕಳುಹಿವುದಾಗಿ ಹೇಳಿದರು.

ಇದಲ್ಲದೇ ಇಂಡೋನೇಷ್ಯಾ, ಮಲೇಷಿಯಾ ದೇಶ ಪ್ರವಾಸಿಗರಿಗೆ ಮಾರ್ಗದರ್ಶನ  (ಗೈಡ್) ಮಾಡಿದ್ದ ನಗರದ ಮೂವರು ಪ್ರವಾಸಿ ಮಾರ್ಗದರ್ಶಿಗಳನ್ನೂ ಹೋಂ ಕ್ವಾರಂಟೈನ್ ನಿಗಾ  ಇರಿಸಲಾಗಿದೆ ಎಂದು  ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ  ವಿವರಿಸಿದರು‌

ಟಾಪ್ ನ್ಯೂಸ್

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

vidan-soudha-kannada

Golden Jubilee: ಕನ್ನಡವೇ ಅಧಿಕಾರಿಗಳ‌ ಹೃದಯದ ಭಾಷೆ ಆಗಲಿ

KSRTC

Transport: ಕೆಎಸ್ಸಾರ್ಟಿಸಿ ದಾಖಲೆ: ಒಂದೇ ದಿನ 1.23 ಕೋಟಿ ಮಂದಿ ಪ್ರಯಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yathnal-eshwarappa

Waqf: ಕಾಂಗ್ರೆಸ್‌ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್‌ ಆಸ್ತಿ ಕಬಳಿಕೆ: ಯತ್ನಾಳ್‌

Surya—jagadmbika-Pal-(JPC)

Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Vijayapura-waqf

Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ

Vijayapura: Protest against Waqf led by many Seers

Vijayapura: ವಕ್ಫ್ ವಿರುದ್ಧ ಹಲವು ಮಠಾಧೀಶರ ನೇತೃತ್ವದಲ್ಲಿ ಹೋರಾಟ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.