ಮಂಗಳೂರು ವೆಂಕಟರಮಣ ದೇವಸ್ಥಾನ ಆವರಣದಲ್ಲಿ ಕೋವಿಡ್ ಸೋಂಕು ಹರಡದಂತೆ ಔಷಧ ಸಿಂಪಡಣೆ!
Team Udayavani, Apr 1, 2020, 3:48 PM IST
ಮಂಗಳೂರು: ಕೊವಿಡ್-19 ಸೋಂಕು ಹರಡದಂತೆ ತಡೆಯಲು ನಗರದ ಕಾರ್ ಸ್ಟ್ರೀಟ್ ಶ್ರೀ ವೆಂಕಟರಮಣ ದೇವಸ್ಥಾನದ ಆವರಣದಲ್ಲಿ ಔಷಧ ಸಿಂಪಡಣೆ ಮಾಡಲಾಯಿತು.
ಸೇವಂಜಾಲಿ ಚಾರಿಟೇಬಲ್ ಟ್ರಸ್ಟ್ ನೇತೃತ್ವದಲ್ಲಿ ವೆಂಕಟರಮಣ ದೇವಸ್ಥಾನದ ಆವರಣದಲ್ಲಿ ಟ್ರಸ್ಟ್ ಅಧ್ಯಕ್ಷ ಸದಸ್ಯರುಗಳು ಸೇರಿಕೊಂಡು, ಗ್ಲೌಸ್, ಮಾಸ್ಕ್ ಧರಿಸಿಕೊಂಡು, ಸೋಡಿಯಂ ಹೈಪೊಕ್ಲೋರೈಡ್, ಫಿನಾಯಿಲ್ ಮತ್ತು ಬ್ಲೀಚಿಂಗ್ ಮಿಶ್ರಣ ಔಷಧ ವಾಹನದ ಮೂಲಕ ದೇವಸ್ಥಾನ ಮತ್ತು ಅಂಗಡಿಗಳ ಮುಂದೆ ಔಷಧ ಸಿಂಪಡಣೆ ಮಾಡಿದರು.
ಪ್ರತಿನಿತ್ಯ ಸಾವಿರಾರು ಭಕ್ತರು ಆಗ ಮಿಸುತ್ತಿದ್ದ ದೇವಸ್ಥಾನದ ಆವರಣವಾದ ಕಾರಣ ಕೊವಿಡ್-19 ಸೋಂಕು ಹರಡದಂತೆ ಮುಂಜಾಗ್ರತ ಕ್ರಮವಾಗಿ ಟ್ರಸ್ಟ್ ವತಿಯಿಂದ ಔಷಧ ಸಿಂಪಡಣೆ ಮಾಡಿದರು.
ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಡಿ. ವೇದವ್ಯಾಸ ಕಾಮತ್ ಅವರ ಮಾರ್ಗದರ್ಶನದಂತೆ, ಔಷಧ ಸಿಂಪಡನೆಯಲ್ಲಿ ಕಾರ್ಯದರ್ಶಿ ಹನುಮಂತ ಕಾಮತ್, ಆಲ್ ಇಂಡಿಯಾ ಟೆಂಪಲ್ ಅಸೋಸಿಯೇಷನ್ ಅಧ್ಯಕ್ಷ ಜಗನ್ನಾಥ ಕಾಮತ್, ಪ್ರಶಾಂತ್ ರಾವ್, ಸದಸ್ಯರುಗಳಾದ ನರೇಶ್ ಶೆಣೈ, ವರದರಾಜ್ ಶೆಣೈ, ಸಂತೋಷ್ ಭಂಡಾರಿ, ನರೇಶ್ ಪ್ರಭು, ಚೇತನ್ ಕಾಮತ್, ಸಂತೋಷ್ ಶೆಣೈ, ದೀಪಕ್ ಮಲ್ಯ, ನರಹರಿ ಭಟ್ ಮತ್ತಿತರರು ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Court Judgement: ತಪ್ಪಿತಸ್ಥ ಎಂದಾದರೆ ಮಾತ್ರ ರಾಜೀನಾಮೆ ನೀಡಬೇಕು: ಜಿ.ಟಿ.ದೇವೇಗೌಡ
Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.