ಜಿಲ್ಲೆಯಲ್ಲಿ ಅಕ್ಕಿ ಕೊರತೆ ಇಲ್ಲ


Team Udayavani, Apr 1, 2020, 5:41 PM IST

ಜಿಲ್ಲೆಯಲ್ಲಿ ಅಕ್ಕಿ ಕೊರತೆ ಇಲ್ಲ

ದಾವಣಗೆರೆ: ಮಹಾಮಾರಿ ಕೋವಿಡ್ 19 ವೈರಸ್‌ ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ, ರಾಜ್ಯ ಸರ್ಕಾರ ಘೋಷಿಸಿರುವ ಲಾಕ್‌ ಡೌನ್‌ ಒಂದೊಮ್ಮೆ ಮುಂದುವರೆದರೂ ದಾವಣಗೆರೆ ಜಿಲ್ಲೆಯಲ್ಲಿ ಅಕ್ಕಿಗೆ ಕೊರತೆ ಎದುರಾಗದು.

ಭತ್ತದ ಹಂಗಾಮು ನವೆಂಬರ್‌ನಿಂದ ಪ್ರಾರಂಭವಾಗಿ ಜನವರಿ ವೇಳೆಗೆ ಬಹುತೇಕ ಮುಕ್ತಾಯವಾಗಲಿದೆ. ಆ ಸಂದರ್ಭದಲ್ಲಿ ಅಕ್ಕಿ ಗಿರಣಿಗಳಿಗೆ ಅವಶ್ಯ ಇರುವಷ್ಟು ಭತ್ತ ಖರೀದಿ ಮಾಡಲಾಗುತ್ತದೆ. ದಾವಣಗೆರೆ ಜಿಲ್ಲೆಯ ಬಹುತೇಕ ಎಲ್ಲಾ ಅಕ್ಕಿ ಗಿರಣಿಗಳಲ್ಲಿ ಭತ್ತದ ದಾಸ್ತಾನು ಇರುವುದರಿಂದ ಅಕ್ಕಿಯ ಸಮಸ್ಯೆಯೇ ಉಂಟಾಗದು ಎಂದು ದಾವಣಗೆರೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಜೆ. ಪ್ರಭು ಮಾಹಿತಿ ನೀಡಿದ್ದಾರೆ.

ದಾವಣಗೆರೆ ತಾಲೂಕಿನಲ್ಲೇ 46 ಅಕ್ಕಿ ಗಿರಣಿ ಒಳಗೊಂಡಂತೆ ಜಿಲ್ಲೆಯಲ್ಲಿ 55 ರೈಸ್‌ಮಿಲ್‌ ಇವೆ. ದಾವಣಗೆರೆ ತಾಲೂಕಿನಲ್ಲಿ 32 ಒಳಗೊಂಡಂತೆ ಒಟ್ಟೂ 40ಕ್ಕೂ ಹೆಚ್ಚು ಅಕ್ಕಿ ಗಿರಣಿಗಳಲ್ಲಿ ಕೆಲಸ ಮಾಡುತ್ತಿವೆ. ಎಲ್ಲಾ ಮಿಲ್‌ಗ‌ಳಲ್ಲಿ ಭತ್ತದ ಸ್ಟಾಕ್‌ ಇದೆ.ಒಂದೊಮ್ಮೆ ಏ.14 ರ ನಂತರವೂ ಲಾಕ್‌ಡೌನ್‌ ಮುಂದುವರೆದರೂ ಜಿಲ್ಲೆಯಲ್ಲಿ ಅಕ್ಕಿ ಕೊರತೆ ಆಗುವುದೇ ಇಲ್ಲ ಎನ್ನುತ್ತಾರೆ ಪ್ರಭು.

ದಾವಣಗೆರೆಯಿಂದ ಗೋವಾ, ಕೇರಳಕ್ಕೆ ಅತೀ ಹೆಚ್ಚಿನ ಪ್ರಮಾಣದಲ್ಲಿ ಅಕ್ಕಿ ರಫ್ತಾಗುತ್ತದೆ. ಕೊರೊನಾ ವೈರಸ್‌ ತಡೆಗಟ್ಟುವ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಕಾರಣಕ್ಕೆ ಅಕ್ಕಿ ಸಾಗಿಸಲಾಗುತ್ತಿಲ್ಲ. ರಾಣೆಬೆನ್ನೂರು, ಹಾವೇರಿ ಭಾಗಕ್ಕೆ ಅಕ್ಕಿ ರವಾನೆ ಆಗಬೇಕಾಗಿದೆ. ಆ ಭಾಗದಿಂದ ಸಾಕಷ್ಟು ಬೇಡಿಕೆ ಬರುತ್ತಿದೆ. ಲಾಕ್‌ಡೌನ್‌ ನಡುವೆಯೂ ಅಗತ್ಯ ವಸ್ತುಗಳ ಸಾಗಾಣಿಕೆಗೆ ಅನುಮತಿ ದೊರೆತಲ್ಲಿ ಎಲ್ಲರಿಗೆ ಅನುಕೂಲ ಆಗಲಿದೆ ಎಂಬ ಅಭಿಪ್ರಾಯ ಕೆಲ ವರ್ತಕರದ್ದಾಗಿದೆ.

ಮಹಾಮಾರಿ ಕೋವಿಡ್ 19  ವೈರಸ್‌ ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ, ರಾಜ್ಯ ಸರ್ಕಾರ ಘೋಷಿಸಿರುವ ಲಾಕ್‌ಡೌನ್‌ ನಡುವೆ ರೈತರು ತಮ್ಮ ಬೆಳೆಗಳನ್ನು ಮಾರುಕಟ್ಟೆಗೆ ತಂದು, ಮಾರಾಟ ಮಾಡಲು ಅವಕಾಶ ನೀಡಿರುವ ಹಿನ್ನೆಲೆಯಲ್ಲಿ ದಾವಣಗೆರೆ ಎಪಿಎಂಸಿಯಲ್ಲಿ ಮತ್ತೆ ವಹಿವಾಟು ಪ್ರಾರಂಭವಾಗಿದೆ. ಆದರೆ, ಮಾಹಿತಿ ಕೊರತೆ ಇತರೆ ಕಾರಣಕ್ಕೆ ಮಂಗಳವಾರ ತರಕಾರಿ ಹೊರತುಪಡಿಸಿದರೆ ಇತರೆ ಧಾನ್ಯಗಳ ಅವಕ ಬಂದಿಲ್ಲ. ರೈತರು ತಮ್ಮ ಬೆಳೆಗಳನ್ನು ಮಾರುಕಟ್ಟೆಗೆ ತರಬಹುದು. ಅವರಿಗೆ ಪಾಸ್‌ ಅವಶ್ಯಕತೆ ಇಲ್ಲ ಎಂದು ಜೆ. ಪ್ರಭು ತಿಳಿಸಿದ್ದಾರೆ.

ದಾವಣಗೆರೆ ಮಾರುಕಟ್ಟೆಯಲ್ಲಿ 1,600 ಖರೀದಿ ಅಂಗಡಿಗಳಿವೆ. 800 ಅಂಗಡಿಗಳಲ್ಲಿ ಖರೀದಿ ನಡೆಯುತ್ತದೆ. 400 ದಲ್ಲಾಲರು ಇದ್ದಾರೆ. ಕೋವಿಡ್ 19  ತಡೆಗಟ್ಟಲು ಎಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

1-abaz-matr-11

Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್‌ ಇದ್ರು ಸಿಕ್ಕಿದ್ದು ಕೇವಲ 155 ಮತ!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

20-uv-fusion

UV Fusion: ಜೀವಂತಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.