ಕೋವಿಡ್-19: ನಿರಾಶ್ರಿತರಿಗೆ ಪಡಿತರ ವಿತರಿಸಿದ ಡಿಸಿಎಂ ಡಾ. ಅಶ್ವತ್ಥನಾರಾಯಣ
Team Udayavani, Apr 2, 2020, 3:01 PM IST
ಬೆಂಗಳೂರು: ಕೊವಿಡ್-19 ಲಾಕ್ ಡೌನ್ ಹಿನ್ನೆಲೆಯಲ್ಲಿ ದಿನಗೂಲಿ ನೌಕರರು, ವಲಸೆ ಕಾರ್ಮಿಕರು ಹಾಗೂ ನಿರಾಶ್ರಿತರಿಗೆ ರಾಜ್ಯ ಸರ್ಕಾರದ ಕಡೆಯಿಂದ ಕಲ್ಪಿಸಿರುವ ಸೌಲಭ್ಯಗಳನ್ನು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಗುರುವಾರ ಪರಿಶೀಲನೆ ನಡೆಸಿದ್ದಾರೆ.
ನಗರದ ಯಲಹಂಕ, ಬ್ಯಾಟರಾಯನಪುರ, ಅಮೃತಹಳ್ಳಿ ಕಾಲೋನಿ, ಥಣೀಸಂದ್ರ, ರಾಚೇನಹಳ್ಳಿ, ಚೊಕ್ಕನಹಳ್ಳಿ ಸೇರಿದಂತೆ ನಗರದ ಹಲವು ಭಾಗಗಳಿಗೆ ಭೇಟಿ ನೀಡಿದ ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ, ಸ್ಥಳೀಯರಿಂದಲೂ ಅಭಿಪ್ರಾಯ ಪಡೆದುಕೊಂಡರು. ಅಲ್ಲದೆ, ಅಗತ್ಯ ಸೌಲಭ್ಯ ಕಲ್ಪಿಸುವಂತೆ ಅಧಿಕಾರಿಗಳಿಗೂ ಸೂಚಿಸಿದರು.
ವಿವಿಧ ಪ್ರದೇಶಗಳಿಗೆ ಭೇಟಿ ನೀಡುವ ಮೊದಲು ಅಧಿಕಾರಿಗಳ ಸಭೆ ನಡೆಸಿದ ಅವರು,ಕೋವಿಡ್-19 ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳು ಹಾಗೂ ನಿರಾಶ್ರಿತರಿಗೆ ಊಟ ವಸತಿ ಮತ್ತು ಇನ್ನಿತರ ವ್ಯವಸ್ಥೆ ಬಗ್ಗೆ ಚರ್ಚಿಸಿದರು.
“ದಿನಗೂಲಿ ನೌಕರರು, ಕಟ್ಟಡ ಕಾರ್ಮಿಕರು, ಕೂಲಿ ಕಾರ್ಮಿಕರು ಹಾಗೂ ನಿರಾಶ್ರಿತರಿಗೆ ಕಾರ್ಮಿಕ ಇಲಾಖೆ, ಬಿಬಿಎಂಪಿ ಹಾಗೂ ರಾಜ್ಯ ಸರ್ಕಾರದ ವತಿಯಿಂದ ಊಟದ ವ್ಯವಸ್ಥೆ ಮಾಡಲಾಗಿದೆ. ಇರುವ ಸ್ಥಳದಲ್ಲೇ ಊಟ/ಪಡಿತರ ಕೊಡಲಾಗುತ್ತಿದೆ. ಸಿದ್ಧ ಆಹಾರ ಹಾಗೂ ಪಡಿತರವನ್ನು ಒದಗಿಸಲಾಗುತ್ತಿದೆ. ಎಲ್ಲ ಪ್ರದೇಶಗಳಲ್ಲಿ ಸೋಂಕು ನಿವಾರಕ ಸ್ಪ್ರೇ ಮಾಡಲಾಗುತ್ತಿದೆ. ಮುಖ್ಯವಾಗಿ ಸೋಂಕಿನ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ,”ಎಂದು ಸಚಿವರು ತಿಳಿಸಿದರು.
“ಯಲಹಂಕ, ಬ್ಯಾಟರಾಯನಪುರ ವ್ಯಾಪ್ತಿಯ 42 ಕಡೆ 10,000 ಜನರಿಗೆ ಆಹಾರ, ಪಡಿತರ, ಆರೋಗ್ಯ ಸೇವೆಯ ವ್ಯವಸ್ಥೆ ಮಾಡಲಾಗಿದೆ. ನಿರಾಶ್ರಿತರು ಇದ್ದಲ್ಲಿಗೇ ತೆರಳಿ ಆಹಾರ ನೀಡಲಾಗುತ್ತಿದೆ. ಹಿರಿಯ ನಾಗರಿಕರಿಗೂ ಆಹಾರದ ಸಮಸ್ಯೆ ಇದ್ದು, ಅಂಥವರನ್ನು ಗುರುತಿಸಿ ಅವರೊಂದಿಗೆ ಮನೆಗಳಿಗೆ ಊಟ ತಲುಪಿಸುವ ಕೆಲಸ ಮಾಡಲಾಗುತ್ತಿದೆ,” ಎಂದರು.
ಸಹಾಯವಾಣಿ
“ರಾಜ್ಯಮಟ್ಟದ ಸಹಾಯವಾಣಿ 104, ಕಾರ್ಮಿಕ ಇಲಾಖೆಯ ಸಹಾಯವಾಣಿ, ಬಿಬಿಎಂಪಿಯ ಸಹಾಯವಾಣಿಗೂ ಕರೆ ಮಾಡಿ ಜನ ನೆರವು ಪಡೆಯಬಹುದು. ಊಟ ವಸತಿ ಅಷ್ಟೇ ಅಲ್ಲ ಇರುವ ಸ್ಥಳದಿಂದಲೇ ದೂರವಾಣಿ ಮೂಲಕ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ‘ಟೆಲಿ ಕನ್ಸಲ್ಟೇಷನ್’ ಸಹ ಮಾಡಲಾಗುತ್ತಿದೆ. ಫೋನ್ ವ್ಯವಸ್ಥೆ ಬಳಕೆ ತಿಳಿಯದವರ ಬಳಿಗೆ ಬಿಬಿಎಂಪಿ ಅಧಿಕಾರಿಗಳೇ ತೆರಳಿ, ಅಗತ್ಯ ಸೌಲಭ್ಯ ಕಲ್ಪಿಸುತ್ತಿದ್ದಾರೆ,”ಎಂದು ವಿವರಿಸಿದರು.
ಅಟ್ಟೂರಿನಲ್ಲಿ ತಾತ್ಕಾಲಿಕ ಮಾರುಕಟ್ಟೆ
ತೋಟಗಾರಿಕೆ ಇಲಾಖೆ ವತಿಯಿಂದ ಯಲಹಂಕದ ಅಟ್ಟೂರಿನ ಪೂರ್ವಂಕರ ಅಪಾರ್ಟ್‌ಮೆಂಟ್ ಬಳಿ ನಿರ್ಮಿಸಿರುವ ಹಣ್ಣು- ತರಕಾರಿಯ ತಾತ್ಕಾಲಿಕ ಮಾರುಕಟ್ಟೆ ವ್ಯವಸ್ಥೆಯನ್ನು ಉಪಮುಖ್ಯಮಂತ್ರಿ ಪರಿಶೀಲಿಸಿದರು. ಯಲಹಂಕ ಶಾಸಕರೂ ಆಗಿರುವ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್. ಆರ್. ವಿಶ್ವನಾಥ್ ಜತೆ ಇದ್ದರು.
ಆಹಾರ/ಪಡಿತರ ಪೂರೈಕೆ ಆಗುತ್ತಿರುವುದನ್ನು ಖಚಿತಪಡಿಸಿಕೊಂಡರು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡ ಮುನೇಂದ್ರ ಅವರು ಸ್ವಂತ ಹಣದಿಂದ ಒದಗಿಸಿರುವ 10,000 ಪಡಿತರ ಕಿಟ್‌ಗಳನ್ನು ವಿತರಿಸುವ ಕಾರ್ಯಕ್ರಮ ಅಶ್ವತ್ಥನಾರಾಯಣ ಚಾಲನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Illegal immigrants; ಬಂಧಿತ ಪಾಕ್ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?
Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್ ಪದವಿ ಕೊಡಲಿದೆ ವಿಟಿಯು!
MUST WATCH
ಹೊಸ ಸೇರ್ಪಡೆ
Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೆ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
Kannada Cinema: ‘ನಾ ನಿನ್ನ ಬಿಡಲಾರೆ’ ಟ್ರೇಲರ್ ಬಂತು: ನ.29ಕ್ಕೆ ಸಿನಿಮಾ ತೆರೆಗೆ
Sagara: ಕರವೇ ತಾಲೂಕು ಅಧ್ಯಕ್ಷರ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ
BGT Series: ವಿರಾಟ್ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್ ಜಾನ್ಸನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.