ಏ.14ರ ನಂತರ Lockdown ಮುಂದುವರಿಯಲ್ಲ; ಏ.15ರಿಂದ ರೈಲ್ವೆ, ವಿಮಾನ ಟಿಕೆಟ್ ಬುಕ್ಕಿಂಗ್ ಶುರು?
ರೈಲ್ವೆ, ವಿಮಾನ ಟಿಕೆಟ್ ಬುಕಿಂಗ್ ಮಾಡಿಕೊಳ್ಳುತ್ತಿರುವುದರಿಂದ ಕೇಂದ್ರ 21 ದಿನಗಳ ನಂತರ ಲಾಕ್ ಡೌನ್ ಮತ್ತೆ ಮುಂದುವರಿಸುವುದಿಲ್ಲ ಎಂಬುದರ ಸ್ಪಷ್ಟ ಸೂಚನೆ
Team Udayavani, Apr 2, 2020, 3:36 PM IST
Representative Image
ನವದೆಹಲಿ: ಕೋವಿಡ್ 19 ಮಾರಣಾಂತಿಕ ವೈರಸ್ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ದೇಶಾದ್ಯಂತ 21 ದಿನಗಳ ಕಾಲ ಲಾಕ್ ಡೌನ್ ಘೋಷಿಸಲಾಗಿತ್ತು. ಏತನ್ಮಧ್ಯೆ ಈ ಪರಿಸ್ಥಿತಿ ಇನ್ನೂ ಮೂರು ತಿಂಗಳ ಕಾಲ ಮುಂದುವರಿಯಲಿದೆ ಎಂಬ ಊಹಾಪೋಹ ಹಬ್ಬಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೂಡಾ ಸ್ಪಷ್ಟನೆ ನೀಡಿತ್ತು. ಇದೀಗ ಅದಕ್ಕೆ ಪೂರಕ ಎಂಬಂತೆ ರೈಲ್ವೆ, ವಿಮಾನ ಪ್ರಯಾಣದ ಟಿಕೆಟ್ ಬುಕ್ಕಿಂಗ್ ಆರಂಭಗೊಂಡಿದೆ ಎಂದು ಎಬಿಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ.
ರೈಲ್ವೆ, ವಿಮಾನ ಟಿಕೆಟ್ ಬುಕಿಂಗ್ ಮಾಡಿಕೊಳ್ಳುತ್ತಿರುವುದರಿಂದ ಕೇಂದ್ರ ಸರ್ಕಾರ 21 ದಿನಗಳ ನಂತರ ಲಾಕ್ ಡೌನ್ ಮತ್ತೆ ಮುಂದುವರಿಸುವುದಿಲ್ಲ ಎಂಬುದರ ಸ್ಪಷ್ಟ ಸೂಚನೆಯಾಗಿದೆ ಎಂದು ವರದಿ ಹೇಳಿದೆ. ಏಪ್ರಿಲ್ 15ರಿಂದ ಪ್ರಯಾಣಿಕರ ಸೀಟುಗಳನ್ನು ಕಾಯ್ದಿರಿಸಿಕೊಳ್ಳಲು ಭಾರತೀಯ ರೈಲ್ವೆ ಇಲಾಖೆ ಆರಂಭಿಸಿದೆ. ಏಪ್ರಿಲ್ 15ರಿಂದ ದೇಶಾದ್ಯಂತ ಸಂಚರಿಲು ಅನುಕೂಲವಾಗಲಿದೆ ಎಂದು ವರದಿ ವಿವರಿಸಿದೆ.
ಅತೀ ದೊಡ್ಡ ಸಾರಿಗೆ ವ್ಯವಸ್ಥೆ ಭಾರತೀಯ ರೈಲ್ವೆ ಸಾರಿಗೆ. ಬಹುತೇಕ ಕೂಡಲೇ ಸಂಚಾರ ಆರಂಭವಾಗಲಿಕ್ಕಿಲ್ಲ. ಹಂತ, ಹಂತವಾಗಿ ರೈಲ್ವೆ ಸಂಚಾರ ಆರಂಭಿಸುವ ಸಾಧ್ಯತೆ ಇದ್ದಿರಬಹುದು ಎಂದು ವರದಿ ತಿಳಿಸಿದೆ. ಐಆರ್ ಸಿಟಿಸಿ ವೆಬ್ ಸೈಟ್ ನ ರಿಸರ್ವೇಶನ್ ಆನ್ ಲೈನ್ ಟಿಕೆಟ್ ಬುಕ್ಕಿಂಗ್ ಈಗಾಗಲೇ ಆರಂಭಗೊಂಡಿದೆ.
ಮಾರ್ಚ್ 22ರಿಂದ ಮಾರ್ಚ್ 31ರವರೆಗೆ ಪ್ರಯಾಣಿಕರ ರೈಲು ಸೇವೆ ಸ್ಥಗಿತಗೊಳ್ಳಲಿದ್ದು, 9000 ಸರಕು ಸಾಗಣೆ ರೈಲುಗಳು ದಿನಂಪ್ರತಿ ಸಂಚರಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿತ್ತು. ಸರ್ಕಾರಿ ಅಧಿಕಾರಿಗಳ ಹೇಳಿಕೆ ಪ್ರಕಾರ, ಏಪ್ರಿಲ್ 15ರಿಂದ ಟಿಕೆಟ್ ಬುಕ್ಕಿಂಗ್ ಅನ್ನು ಐಆರ್ ಸಿಟಿಸಿ ಆರಂಭಿಸಿದೆ. ಏಪ್ರಿಲ್ 14ರವರೆಗೆ ಲಾಕ್ ಡೌನ್ ಇದ್ದು, ಏ.15ರಿಂದ ರೈಲು ಸಂಚಾರ ಆರಂಭಗೊಳ್ಳಲಿದೆ ಎಂದು ತಿಳಿಸಿದ್ದಾರೆ.
Certain media reports have claimed that Railways has started reservation for post-lockdown period.
It is to clarify that reservation for journeys post 14th April was never stopped and is not related to any new announcement. pic.twitter.com/oJ7ZqxIx3q
— Ministry of Railways (@RailMinIndia) April 2, 2020
ರೈಲ್ವೆ ಇಲಾಖೆ ಸ್ಪಷ್ಟನೆ:
ಕೆಲವು ಮಾಧ್ಯಮಗಳಲ್ಲಿ ಈಗಾಗಲೇ ಏಪ್ರಿಲ್ 14ರ ಲಾಕ್ ಡೌನ್ ಮುಗಿದ ಬಳಿಕ ಏಪ್ರಿಲ್ 15ರಿಂದ ರೈಲ್ವೆ ಟಿಕೆಟ್ ಬುಕ್ಕಿಂಗ್ ಆರಂಭಿಸಿದೆ ಎಂದು ವರದಿ ಮಾಡಿದೆ. ಆದರೆ ಇದು ತಪ್ಪು ಗ್ರಹಿಕೆ ಎಂದು ಭಾರತೀಯ ರೈಲ್ವೆ ಇಲಾಖೆ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದೆ. ಮುಂಗಡ ಟಿಕೆಟ್ ಬುಕ್ಕಿಂಗ್ ಗೆ 120 ದಿನಗಳ ಕಾಲಾವಧಿ ಇರುತ್ತದೆ. ಹೀಗಾಗಿ ಏಪ್ರಿಲ್ 15ರಂದು ಟಿಕೆಟ್ ಬುಕ್ಕಿಂಗ್ ಆರಂಭಿಸಿರುವುದು ಲಾಕ್ ಡೌನ್ ಘೋಷಿಸುವ ಮೊದಲಿನ ಸಮಯದ್ದಾಗಿದೆ ಎಂದು ತಿಳಿಸಿದೆ.
ಲಾಕ್ ಡೌನ್ ಸಮಯದಲ್ಲಿ ಯಾರು ಟಿಕೆಟ್ ಬುಕ್ಕಿಂಗ್ ಮಾಡಿದ್ದಾರೋ ಅವರಿಗೆ ರಿಫಂಡ್(ಹಣ ಹಿಂತಿರುಗಿಸುವ) ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಮುಂಗಡ ಟಿಕೆಟ್ ಬುಕ್ಕಿಂಗ್ ಅನ್ನು ನಾವು ಯಾವತ್ತೂ ನಿಲ್ಲಿಸಿಲ್ಲ. ಇದು ಯಾವುದೇ ಹೊಸ ಘೋಷಣೆಗೆ ಸಂಬಂಧಿಸಿದ್ದಲ್ಲ ಎಂದು ರೈಲ್ವೆ ಇಲಾಖೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ
Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.