ಕೇರಳದ ರೋಗಿಗಳಿಗೆ ದ.ಕ. ಆಸ್ಪತ್ರೆಗಳಲ್ಲಿ ಅವಕಾಶವಿಲ್ಲ

8 ಖಾಸಗಿ ಆಸ್ಪತ್ರೆಗಳಿಗೆ ಜಿಲ್ಲಾ ಆರೋಗ್ಯ ಇಲಾಖೆ ಸೂಚನೆ

Team Udayavani, Apr 3, 2020, 11:44 AM IST

ಕೇರಳದ ರೋಗಿಗಳಿಗೆ ದ.ಕ. ಆಸ್ಪತ್ರೆಗಳಲ್ಲಿ ಅವಕಾಶವಿಲ್ಲ

ಮಂಗಳೂರು: ಕೋವಿಡ್‌- 19 ಖಚಿತ ಪ್ರಕರಣಗಳು ಕೇರಳ ರಾಜ್ಯ/ಕಾಸರಗೋಡು ಜಿಲ್ಲೆಯಲ್ಲಿ ವ್ಯಾಪಕ ವಾಗುತ್ತಿರುವ ಹಿನ್ನೆಲೆಯಲ್ಲಿ ತತ್‌ಕ್ಷಣ ದಿಂದಲೇ ಕೇರಳ ರಾಜ್ಯದಿಂದ ಬರುವ ಯಾವುದೇ ರೋಗಿಗಳನ್ನು ದಾಖಲು ಮಾಡಿಕೊಳ್ಳಬಾರದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ದ.ಕ. ಜಿಲ್ಲೆಯ 8 ಖಾಸಗಿ ಆಸ್ಪತ್ರೆಗಳ ಡೀನ್‌ ಮತ್ತು ಮುಖ್ಯಸ್ಥರಿಗೆ ಆದೇಶಿಸಿದ್ದಾರೆ.

ಇನ್ನೊಂದೆಡೆ ಮಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಗೆ ಹೊರ ರಾಜ್ಯಗಳ ಶಂಕಿತ ಕೋವಿಡ್‌- 19 ರೋಗಿಗಳನ್ನು ಅಥವಾ ಇತರ ಯಾವುದೇ ಸಾಂಕ್ರಾಮಿಕ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳನ್ನು ಚಿಕಿತ್ಸೆಗಾಗಿ ವಾಹನಗಳ ಮೂಲಕ ಕರೆತರುವುದನ್ನು ನಿಷೇಧಿಸಿ /ಮಹಾನಗರ ಪಾಲಿಕೆಯ ಆಯುಕ್ತರಾದ ಅಜಿತ್‌ ಕುಮಾರ್‌ ಹೆಗ್ಡೆ ಶಾನಾಡಿ ಆದೇಶ ಹೊರಡಿಸಿದ್ದಾರೆ.

ನೆರೆಯ ಕೇರಳದಲ್ಲಿ ಕೋವಿಡ್‌- 19 ರೋಗಿಗಳ ಸಂಖ್ಯೆ ಹೆಚ್ಚುತ್ತಿದ್ದು, ಇಂತಹ ಸಂದರ್ಭದಲ್ಲಿ ಕಾಸರಗೋಡಿನಿಂದ ಮಂಗಳೂರಿಗೆ ಆ್ಯಂಬುಲೆನ್ಸ್‌ಗಳ ಸಂಚಾರಕ್ಕೆ ಅನುವು ಮಾಡಿ ಕೊಡಬೇಕು ಎಂಬ ಒತ್ತಡ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಪೌರಾಡಳಿತ ಕಾಯ್ದೆ 1976ರ ಸೆಕ್ಷನ್‌ 64ರ ಅಡಿಯಲ್ಲಿ ದತ್ತವಾದ ಅಧಿಕಾರದನ್ವಯ ಈ ಆದೇಶ ಹೊರಡಿಸಲಾಗಿದೆ ಎಂದವರು ತಿಳಿಸಿದ್ದಾರೆ.

52 ಫ್ಲೆ$çಯಿಂಗ್‌ ಸ್ಕ್ವಾಡ್‌ ರಚನೆ
ಜಿಲ್ಲಾದ್ಯಂತ ಸೆಕ್ಷನ್‌ 144ನ್ನು ಮುಂದು ವರಿಸಲಾಗಿದೆ. ಖಾಸಗಿ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ನಿಷೇಧಾಜ್ಞೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಜಿಲ್ಲೆಗೆ 52 ಫ್ಲೆ$çಯಿಂಗ್‌ ಸ್ಕ್ವಾಡ್‌ಗಳನ್ನು ರಚನೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ ಅವರು ತಿಳಿಸಿದ್ದಾರೆ.

ಆರೋಗ್ಯ ಮಾಹಿತಿ ನೀಡದ ಜಿಲ್ಲಾಡಳಿತ
ಕೋವಿಡ್‌- 19 ದೃಢಪಟ್ಟು ನಗರದ ವೆನ್ಲಾಕ್  ಜಿಲ್ಲಾಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಬಗ್ಗೆ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಯಾವುದೇ ರೀತಿಯ ಮಾಹಿತಿ ನೀಡುತ್ತಿಲ್ಲ. ಜಿಲ್ಲಾಡಳಿತದಿಂದ ಬಿಡುಗಡೆಗೊಳ್ಳುವ ಹೆಲ್ತ್‌ ಬುಲೆಟಿನ್‌ನಲ್ಲಿ ಒಂದು ಬಾರಿಯಷ್ಟೇ ಸೋಂಕಿತರ ಆರೋಗ್ಯ ಸುಧಾರಿಸುತ್ತಿದೆ ಎಂದು ಮಾಹಿತಿ ನೀಡಲಾಗಿತ್ತು. ಈ ನಡುವೆ, ಕೋವಿಡ್‌- 19 ಪಾಸಿಟಿವ್‌ ಕಂಡುಬಂದ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 10 ತಿಂಗಳ ಶಿಶುವಿನ ಆರೋಗ್ಯ ಸುಧಾರಿಸುತ್ತಿರುವುದಾಗಿ ಮಗುವಿನ ಸಂಬಂಧಿಕರು ಹೇಳಿಕೊಂಡಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಸಜಿಪನಡುವಿನ 10 ತಿಂಗಳ ಶಿಶುವಿನಲ್ಲಿ ಮಾ. 27ರಂದು ಕೋವಿಡ್‌- 19 ಪತ್ತೆಯಾಗಿತ್ತು. ಶಿಶುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿಶುವಿನ ಆರೋಗ್ಯದಲ್ಲಿ ಚೇತರಿಕೆ ಇದೆ ಎನ್ನಲಾಗುತ್ತಿದೆ.

ಟಾಪ್ ನ್ಯೂಸ್

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-5

Mangaluru: ಗಾಂಜಾ ಸೇವನೆ; ಯುವಕನ ಬಂಧನ

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Untitled-5

Mangaluru: ಗಾಂಜಾ ಸೇವನೆ; ಯುವಕನ ಬಂಧನ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.