ಕೋವಿಡ್ 19 ವೈರಸ್ : 14 ರಾಜ್ಯಗಳಲ್ಲಿ ತಬ್ಲೀಘಿ ಸೋಂಕಿತರು
Team Udayavani, Apr 4, 2020, 6:20 AM IST
ದೆಹಲಿಯ ನಿಜಾಮುದ್ದೀನ್ ಧಾರ್ಮಿಕ ಸಮಾವೇಶದಲ್ಲಿ ಭಾಗಿಯಾದವರನ್ನು ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಗೆ ಕರೆದೊಯ್ಯುತ್ತಿರುವುದು.
ತಬ್ಲೀಘಿ ಸಂಘಟನೆಯ ಸಮಾವೇಶದಿಂದ ಕೋವಿಡ್ 19 ವೈರಸ್ ಸೋಂಕಿಗೆ ಒಳಗಾಗಿರುವವರು ದೇಶದ 14 ರಾಜ್ಯಗಳಲ್ಲಿ ಹರಡಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.
ಕರ್ನಾಟಕ, ದೆಹಲಿ, ಅಂಡಮಾನ್ ಮತ್ತು ನಿಕೋಬಾರ್, ಅಸ್ಸಾಂ, ಹಿಮಾಚಲ ಪ್ರದೇಶ, ಹರ್ಯಾಣ, ಜಮ್ಮು ಮತ್ತು ಕಾಶ್ಮೀರ, ಜಾರ್ಖಂಡ್, ಮಹಾರಾಷ್ಟ್ರ, ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಉತ್ತರಾಖಾಂಡ ಮತ್ತು ಉತ್ತರ ಪ್ರದೇಶದಲ್ಲಿ ಸೋಂಕಿತರು ಹರಡಿದ್ದಾರೆ ಎಂದು ಆರೋಗ್ಯ ಇಲಾಖೆಯ ಜಂಟಿ ಕಾರ್ಯದರ್ಶಿ ಲವ ಅಗರ್ವಾಲ್ ಹೇಳಿದ್ದಾರೆ.
ಶುಕ್ರವಾರ ಮಾತನಾಡಿದ ಅವರು, ಸಮಾವೇಶದಿಂದಾಗಿ ಸೋಂಕು ಮತ್ತಷ್ಟು ಹರಡಿದೆ. ಭಾರತದಲ್ಲಿ ಶುಕ್ರವಾರದ ಹೊತ್ತಿಗೆ 2,301 ಪ್ರಕರಣಗಳು ಕಂಡುಬಂದಿದ್ದು ಇವರಲ್ಲಿ 56 ಜನರು ಸಾವನ್ನಪ್ಪಿದ್ದಾರೆ ಎಂದಿದ್ದಾರೆ.
ಒಟ್ಟು ಸೋಂಕಿತರ ಪೈಕಿ 157 ಮಂದಿ ಗುಣಮುಖರಾಗಿದ್ದಾರೆ. ಕೊರೊನಾ ಪರೀಕ್ಷೆಗೆಂದು ದೇಶದಲ್ಲಿ ಒಟ್ಟು 182 ಪ್ರಯೋಗಾಲಯಗಳನ್ನು ನಿಗದಿಪಡಿಸಲಾಗಿದೆ. ಆ ಪೈಕಿ 130 ಸರ್ಕಾರಿ ಲ್ಯಾಬ್ ಗಳು. ಗುರುವಾರ ಒಟ್ಟು 8 ಸಾವಿರ ಸ್ಯಾಂಪಲ್ ಗಳನ್ನು ಪರೀಕ್ಷಿಸಲಾಗಿದೆ ಎಂದು ತಿಳಿಸಿದ್ದಾರೆ. ಆರೋಗ್ಯ ಸೇತು ಮೊಬೈಲ್ ಆಪ್ ಅನ್ನು ಸುಮಾರು 30 ಲಕ್ಷ ಮಂದಿ ಡೌನ್ ಲೋಡ್ ಮಾಡಿಕೊಂಡಿದ್ದಾರೆ ಎಂದಿದ್ದಾರೆ.
102 ಮಂದಿಗೆ ಸೋಂಕು
ಮಹಾರಾಷ್ಟ್ರದಲ್ಲಿ ಶುಕ್ರವಾರ ಹೊಸ ಪ್ರಕರಣ ಪತ್ತೆಯಾಗಿಲ್ಲವಾದರೂ, 423 ಪ್ರಕರಣಗಳ ಮೂಲಕ ದೇಶದಲ್ಲೇ ಅತೀ ಹೆಚ್ಚು ಸೋಂಕಿತರಿರುವ ರಾಜ್ಯ ಎನಿಸಿಕೊಂಡಿದೆ. ತಮಿಳುನಾಡಿನಲ್ಲಿ ಶುಕ್ರವಾರ ಹೊಸದಾಗಿ 102 ಮಂದಿಗೆ ಸೋಂಕು ದೃಢಪಟ್ಟಿದ್ದು, ಒಟ್ಟು ಸಂಖ್ಯೆ 411ಕ್ಕೇರಿದೆ.
ದೆಹಲಿಯಲ್ಲಿ 91 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಒಟ್ಟಾರೆ 384 ಪ್ರಕರಣಗಳು ವರದಿಯಾಗಿವೆ. ಅದೇ ರೀತಿ, ಒಂದೇ ದಿನದಲ್ಲಿ ಕೇರಳ 9 (ಒಟ್ಟು 295), ಉತ್ತರಪ್ರದೇಶ 44 (172), ರಾಜಸ್ಥಾನ 33 (166), ಆಂಧ್ರಪ್ರದೇಶ 12 (161), ಮಧ್ಯಪ್ರದೇಶ 22 (129), ಕರ್ನಾಟಕ 4 (128), ಗುಜರಾತ್ 7 (95), ಹರ್ಯಾಣ 8 (57) ಕೋವಿಡ್ 19 ವೈರಸ್ ಪ್ರಕರಣಗಳನ್ನು ಕಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
MUST WATCH
ಹೊಸ ಸೇರ್ಪಡೆ
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.