ದ.ಕ: ಇಂದೂ ವಾಹನ ಸಂಚಾರ ಇಲ್ಲ ; ದಿನಸಿ ಖರೀದಿ ವೇಳೆ ಬದಲಿಲ್ಲ
Team Udayavani, Apr 4, 2020, 10:59 AM IST
ಮಂಗಳೂರು: ಕೋವಿಡ್ 19 ತಡೆ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಎ. 14ರ ವರೆಗೆ ವಿಧಿ ಸಿರುವ ಸೆ.144(3)ಕ್ಕೆ ಪೂರಕವಾಗಿ ಹೆಚ್ಚುವರಿ ಕೆಲವು ನಿರ್ಬಂಧವನ್ನು ವಿಧಿಸಿ ಗುರುವಾರ ದಕ್ಷಿಣ ಕನ್ನಡ ಜಿಲ್ಲಾಡಳಿತ ಹೊರಡಿಸಿದ ಆದೇಶದ ಪ್ರಕಾರ ಜಿಲ್ಲೆಯಲ್ಲಿ ಖಾಸಗಿ ವಾಹನಗಳ ಸಂಚಾರವನ್ನು ಶನಿವಾರವೂ ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಶುಕ್ರವಾರ ನಗರದಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಶುಕ್ರವಾರದಿಂದ ಖಾಸಗಿ ವಾಹನಗಳ ಸಂಚಾರವನ್ನು ಜಿಲ್ಲೆಯಾದ್ಯಂತ ಸಂಪೂರ್ಣ ನಿಷೇಧಿಸಲಾಗಿದೆ. ಅನುಮತಿ ಇಲ್ಲದಿರುವ ಎಲ್ಲ ವಾಹನಗಳಿಗೆ ಇದು ಅನ್ವಯಿಸುತ್ತದೆ. ದಿನಸಿ ಖರೀದಿಗಾಗಿ ಮೀಸಲಿಟ್ಟಿರುವ ಬೆಳಗ್ಗೆ 7ರಿಂದ 12ರ ವರೆಗಿನ ಸಮಯದಲ್ಲಿ ಬದಲಾವಣೆ ಇಲ್ಲ. ಸಾಮಾಜಿಕ ಅಂತರವನ್ನು ಕಾಯ್ದುಕೊಂಡು, ಮನೆ ಸಮೀಪದ ಅಂಗಡಿಗಳಿಂದ ಖರೀದಿ ಮಾಡಬಹುದು ಎಂದರು.
ಪಡಿತರ ಅಂಗಡಿಯಿಂದಲೇ ವಾಹನ!
2.71 ಲಕ್ಷ ಬಿಪಿಎಲ್ ಕುಟುಂಬಗಳಿಗೆ ಗುರುವಾರದಿಂದ ಪಡಿತರ ವಿತರಣೆ ನಡೆಯುತ್ತಿದೆ. ಪಡಿತರ ಕೇಂದ್ರದಿಂದ ದೂರವಾಣಿ ಕರೆ ಬರುವ ಗ್ರಾಹಕರು ಆಗಮಿಸಿ ಪಡಿತರ ಪಡೆಯಲು ಅವಕಾಶ ವಿದೆ. ಈ ಸಂದರ್ಭ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಒಬ್ಬ ವ್ಯಕ್ತಿಗೆ 10 ಕೆಜಿಯಂತೆ ಅಕ್ಕಿ ವಿತರಿಸಲಾಗುತ್ತದೆ. ಸುಮಾರು 80 ಕೆಜಿಗಿಂತ ಅಧಿಕ ಅಕ್ಕಿ ಪಡೆಯುವವರಿಗೆ ಪಡಿತರ ಅಂಗಡಿಯವರಿಂದಲೇ ವಾಹನದ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ. ಈ ಬಗ್ಗೆ ಯಾವುದೇ ಗೊಂದಲಗಳಿದ್ದರೆ 1077 ನಂಬರಿಗೆ ಕರೆ ಮಾಡಿ ಸಂಪರ್ಕಿಸಬಹುದು ಎಂದು ಸಚಿವರು ತಿಳಿಸಿದರು.
ಕೋವಿಡ್ 19 ವಿರುದ್ಧ ಹೋರಾಟಕ್ಕಾಗಿ ಎ. 5ರಂದು ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ
ಮೋಂಬತ್ತಿ, ಹಣತೆ ಬೆಳಗುವಂತೆ ಪ್ರಧಾನಿ ಕರೆ ನೀಡಿದ್ದು ಜಿಲ್ಲೆಯ ಜನತೆ ಸಂಪೂರ್ಣ ಬೆಂಬಲ ನೀಡುವಂತೆ ಕೋರಿದರು.
ತಲಪಾಡಿ ಗಡಿ ತೆರೆಯುವುದಿಲ್ಲ
ತಲಪಾಡಿ ಗಡಿಯಲ್ಲಿ ರಸ್ತೆಯನ್ನು ಈಗಾಗಲೇ ಬಂದ್ ಮಾಡಲಾಗಿದೆ. ಇದನ್ನು ತೆರವು
ಮಾಡುವಂತೆ ಕೇರಳದ ಕೆಲವು ಜನಪ್ರತಿನಿಧಿಗಳು ಸುಪ್ರೀಂ ಕೋರ್ಟ್‌ನಲ್ಲಿ ದಾವೆ ಹೂಡಿದ್ದಾರೆ. ದ.ಕ. ಜಿಲ್ಲಾಡಳಿತದ ಪರವಾಗಿಯೂ ಅನುಭವಿ ವಕೀಲರನ್ನು ಈ ಕುರಿತಂತೆವಾದ ನಡೆಸಲು ನೇಮಿಸಲಾಗಿದೆ. ಜಿಲ್ಲೆಯ ಹಿತರಕ್ಷಣೆಯಿಂದ ಗಡಿ ತೆರೆಯವುದು ಬೇಡ ಎಂದು ಮುಖ್ಯಮಂತ್ರಿಗಳೂ ತಿಳಿಸಿದ್ದಾರೆ. ಹೀಗಾಗಿ ದ.ಕ. ಜಿಲ್ಲೆಯ ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಸಚಿವ ಶ್ರೀನಿವಾಸ ಪೂಜಾರಿ ತಿಳಿಸಿದರು.
ಆಶಾ ಕಾರ್ಯಕರ್ತೆಯರಿಗೆ ರಕ್ಷಣೆ
ಕೇವಲ ಗೌರವಧನ ಪಡೆದು, ಜನರ ಆರೋಗ್ಯದ ದೃಷ್ಟಿಯಿಂದ ಮನೆಮನೆಗೆ ಬರುವ ಆಶಾ ಕಾರ್ಯಕರ್ತೆಯರನ್ನು ಗೌರವದಿಂದ ಕಾಣಬೇಕು. ಆಶಾ ಕಾರ್ಯಕರ್ತೆಯರ ವಿರುದ್ಧ ಕಾನೂನು ಕೈಗೆತ್ತಿಕೊಳ್ಳುವ ಪ್ರಕರಣ ಎಲ್ಲಿಯಾದರು ಕಂಡುಬಂದರೆ, ಅಂತವರ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಈಗಾಗಲೇ ಸೂಚಿಸಲಾಗಿದೆ. ನಮ್ಮ ಪ್ರಾಣ ರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು, ನರ್ಸ್‌ಗಳು, ಅಂಗನವಾಡಿ ಕಾರ್ಯಕರ್ತೆಯರು, ಪೊಲೀಸರ ಬಗ್ಗೆ ಜನರು ಸಹಾನುಭೂತಿಯಿಂದ ವರ್ತಿಸಬೇಕು ಎಂದು ಕೋಟ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ
Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.