ಉಡುಪಿ ಪ್ರಥಮ, ದ.ಕ. ಜಿಲ್ಲೆ ತೃತೀಯ ಪಡಿತರ ಸಾಮಗ್ರಿ ವಿತರಣೆ


Team Udayavani, Apr 4, 2020, 11:19 AM IST

ಉಡುಪಿ ಪ್ರಥಮ, ದ.ಕ. ಜಿಲ್ಲೆ ತೃತೀಯ ಪಡಿತರ ಸಾಮಗ್ರಿ ವಿತರಣೆ

ಉಡುಪಿ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ಹಾಗೂ ಸರಕಾರದ ಆದೇಶಾನುಸಾರ ಎಪ್ರಿಲ್‌, ಮೇ ತಿಂಗಳ ಪಡಿತರ ವಿತರಣೆ ಪ್ರಾರಂಭವಾದ ಎರಡು ದಿನದಲ್ಲಿ ಅಧಿಕ ಕುಟುಂಬಗಳಿಗೆ ಆಹಾರ ಸಾಮಗ್ರಿ ವಿತರಣೆ ಮಾಡುವ ಮೂಲಕ ರಾಜ್ಯ ಮಟ್ಟದಲ್ಲಿ ಉಡುಪಿ ಪ್ರಥಮ, ದ.ಕ. ತೃತೀಯ ಸ್ಥಾನ ಪಡೆದುಕೊಂಡಿದೆ.

ಉಡುಪಿ ಜಿಲ್ಲೆಯಲ್ಲಿ 2,29,508 ಪಡಿತರ ಚೀಟಿದಾರರಿದ್ದು, ಮೊದಲ ಎರಡು ದಿನಗಳಲ್ಲಿಯೇ 26,500 ಕುಟುಂಬಗಳಿಗೆ ಪಡಿತರ ವಿತರಿಸುವ ಮೂಲಕ 10ರಲ್ಲಿ 9 ಅಂಕ ಪಡೆದು ರಾಜ್ಯ ಮಟ್ಟದಲ್ಲಿ ಮೊದಲ ಸ್ಥಾನದಲ್ಲಿದೆ. ಕೊಡಗು ಜಿಲ್ಲೆಯು 10,000 ಕುಟುಂಬಗಳಿಗೆ ಹಾಗೂ ದ.ಕ. ಜಿಲ್ಲೆಯಲ್ಲಿ 4,30,665 ಪಡಿತರ ಚೀಟಿದಾರರಿದ್ದು, 31,600 ಕುಟುಂಬಗಳಿಗೆ ಪಡಿತರ ವಿತರಿಸುವ ಮೂಲಕ ಕ್ರಮವಾಗಿ ಶೇ. 7.6 ಹಾಗೂ 7.28ರಷ್ಟು ಪ್ರಗತಿ ಸಾಧಿಸಿ ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದುಕೊಂಡಿವೆ.

ಗೋಧಿ ಪ್ರಸ್ತಾವನೆ
ಉಡುಪಿ ಜಿಲ್ಲೆಗೆ ತಿಂಗಳಿಗೆ 45,000 ಕ್ವಿಂಟಾಲ್‌ ಅಗತ್ಯವಿದೆ. ಈ ಬಾರಿ ಎರಡು ತಿಂಗಳ ರೇಷನ್‌ ನೀಡುತ್ತಿರುವುದರಿಂದ 90,000 ಕ್ವಿಂಟಲ್‌ ಹಾಗೂ ದ.ಕ. ಜಿಲ್ಲೆಯಲ್ಲಿ 99,500 ಕ್ವಿಂಟಲ್‌ ಅಕ್ಕಿ ಅಗತ್ಯವಿದೆ. ಪ್ರಸ್ತುತ ದ.ಕ. ಜಿಲ್ಲೆಯಿಂದ 10,030 ಕ್ವಿ. ಹಾಗೂ ಉಡುಪಿಯಿಂದ 6,500 ಕ್ವಿ. ಗೋಧಿ ಪ್ರಸ್ತಾವನೆಯನ್ನು ಇಲಾಖೆಗೆ ಕಳುಹಿಸಲಾಗಿದೆ.

1,192 ಪಡಿತರ ವಿತರಣಾ ಕೇಂದ್ರ
ಉಡುಪಿ ಜಿಲ್ಲೆಯಲ್ಲಿ 292 ಹಾಗೂ ದ.ಕ. ಜಿಲ್ಲೆಯಲ್ಲಿ 900 ಪಡಿತರ ವಿತರಣಾ ಕೇಂದ್ರಗಳಿವೆ. ಈ ಹಿಂದೆಲ್ಲ ತಿಂಗಳ ಕೊನೆಯ ವರೆಗೂ ಗ್ರಾಹಕರು ಪಡಿತರ ಒಯ್ಯುತ್ತಿದ್ದರೆ ಈ ಬಾರಿ ಆರಂಭದಲ್ಲೇ ಹೆಚ್ಚಿನವರೂ ಧಾವಿಸಿ ಬಂದಿರುವ ಕಾರಣ ಮೊದಲ ಎರಡು ದಿನಗಳಲ್ಲಿಯೇ ಕೆಲವು ಕೇಂದ್ರಗಳಲ್ಲಿ ಬಹುತೇಕ ದಾಸ್ತಾನು ವಿತರಣೆಯಾಗಿದೆ. ಗೋದಾಮುಗಳಲ್ಲಿ ಸಾಕಷ್ಟು ದಾಸ್ತಾನು ಇದ್ದು ಆವಶ್ಯಕತೆಗನುಗುಣವಾಗಿ ಶೀಘ್ರದಲ್ಲೇ ಪೂರೈಸಲಾಗುವುದು ಎಂದು ಇಲಾಖಾ ಆಧಿಕಾರಿಗಳು ತಿಳಿಸಿದ್ದಾರೆ.

ಗೊಂದಲ ಬೇಡ
ನಮ್ಮಲ್ಲಿ ಆಹಾರ ಸಾಮಗ್ರಿ ಕೊರತೆ ಇಲ್ಲ. ವಿತರಣೆ ಸಹ ನಿರಂತವಾಗಿರಲಿದೆ. ಎಪ್ರಿಲ್‌ ತಿಂಗಳ ಕೊನೆಯ ವರೆಗೆ ಆಹಾರ ಸಾಮಗ್ರಿ ವಿತರಣೆ ಮಾಡಲು ಅವಕಾಶವಿದೆ. ಸಾರ್ವಜನಿಕರು ಗೊಂದಲಕ್ಕೆ ಒಳಗಾಗುವ ಅಗತ್ಯವಿಲ್ಲ.
-ಡಾ| ಮಂಜುನಾಥನ್‌, ಜಂಟಿ ನಿರ್ದೇಶಕ, ಆಹಾರ ಮತ್ತು ನಾಗರಿಕ ಇಲಾಖೆ, ದ.ಕ. ಮತ್ತು ಉಡುಪಿ ಜಿಲ್ಲೆ

ದ.ಕ. ಜಿಲ್ಲೆಗೆ 20 ಸಾವಿರ
ಕ್ವಿಂಟಾಲ್‌ ಕುಚ್ಚಲಕ್ಕಿ
ಮಂಗಳೂರು/ಉಡುಪಿ: ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಕಾರ್ಡ್‌ದಾರರಿಗೆ ವಿತರಣೆ ಮಾಡಲು ದಕ್ಷಿಣ ಕನ್ನಡ ಜಿಲ್ಲೆಗೆ 20 ಸಾವಿರ ಕ್ವಿಂಟಾಲ್‌ ಕುಚ್ಚಲಕ್ಕಿ ಬಿಡುಗಡೆಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಕುಚ್ಚಲಕ್ಕಿ ನೀಡಬೇಕೆಂದು ವ್ಯಾಪಕ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಸರಕಾರ ಇದಕ್ಕೆ ಒಪ್ಪಿಗೆ ನೀಡಿದೆ. ಮುಂದಿನ ತಿಂಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಕುಚ್ಚಲಕ್ಕಿ ಜಿಲ್ಲೆಗೆ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಬಿಳಿ ಕುಚ್ಚಲಕ್ಕಿ ವಿತರಣೆ ಕೆಲವೆಡೆಗಳಲ್ಲಿ ನಡೆಯುತ್ತಿದೆ ಎಂದು ಆಹಾರ ಇಲಾಖೆ ಮೂಲಗಳು ತಿಳಿಸಿವೆ.

– ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.