ದುಬಾರಿ ಬೆಲೆಗೆ ಪೆಟ್ರೋಲ್ ಮಾರಾಟ
Team Udayavani, Apr 4, 2020, 1:16 PM IST
ಶ್ರೀರಂಗಪಟ್ಟಣ: ಜಿಲ್ಲೆಯ ಪೆಟ್ರೋಲ್ ಬಂಕ್‌ಗಳಲ್ಲಿ ಖಾಸಗಿ ದ್ವಿಚಕ್ರ ವಾಹನಗಳಿಗೆ ಕಳೆದ ಎರಡು ದಿನಗಳಿಂದ ಪೆಟ್ರೋಲ್ ಮಾರಾಟ ಸ್ಥಗಿತಗೊಳಿಸಿದ್ದರಿಂದ ದುಬಾರಿ ಬೆಲೆಗೆ ಅಕ್ರಮವಾಗಿ ಪೆಟ್ರೋಲ್ ಮಾರಾಟ ಮಾಡಲಾಗುತ್ತಿದೆ ಎಂದು ಸಾರ್ವಜನಿಕರು ಆರೋಪಿದ್ದಾರೆ.
ಕೋವಿಎ್ 19 ವೈರಸ್ ಹರಡದಂತೆ ತಡೆಗಟ್ಟಲು ಲಾಕ್‌ಡೌನ್ ನಿಯಮ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ದ್ವಿಚಕ್ರ ವಾಹನ ಸವಾರರು ಮನೆಯಲ್ಲಿರದೆ ದ್ವಿಚಕ್ರ ವಾಹನಗಳಲ್ಲಿ ಸುಖಾಸುಮ್ಮನೆ ರಸ್ತೆಯಲ್ಲಿ ಸಂಚರಿಸು ವುದನ್ನು ತಡೆಗಟ್ಟಲು ಜಿಲ್ಲಾಧಿಕಾರಿಗಳ ಆದೇಶದಂತೆ ದ್ವಿಚಕ್ರ ವಾಹನಗಳಿಗೆ ಪೆಟ್ರೋಲ್ ಸ್ಥಗಿತಗೊಳಿಸಲಾಗಿತ್ತು. ಅಗತ್ಯವಿದ್ದವರಿಗೆ ಆಯಾ ತಾಲೂಕು ಆಡಳಿತ ಪಾಸ್ ವಿತರಣೆ ಮಾಡಿ ಅವರಿಗೆ ಮಾತ್ರ ಪೆಟ್ರೋಲ್ ನೀಡುವಂತೆ ಸೂಚಿಸಲಾಗಿತ್ತು. ಕೆಲ ಬಂಕ್‌ಗಳಲ್ಲಿ ಇದನ್ನೇ ಬಂಡವಾಳ ಮಾಡಿಕೊಂಡು ಪೆಟ್ರೋಲ್ ಇಲ್ಲ ಎಂದು ಬಂಕ್ ಮುಂದೆ ಹಗ್ಗ ಕಟ್ಟಿ ಯಾರು ಬರದಂತೆ ಜಾಗ್ರತೆ ವಹಿಸಿ ಬಳಿಕ ರಾತ್ರಿ ಹೊತ್ತಿನಲ್ಲಿ ಒಂದು ಲೀಟರ್‌ಗೆ ನಿಗದಿತ ದರಕ್ಕಿಂತ ಹೆಚ್ಚಿನ ದರಕ್ಕೆ ದ್ವಿಚಕ್ರವಾಹನಗಳಿಗೆ ಪೆಟ್ರೋಲ್ ನೀಡಿರುವ ಬಗ್ಗೆ ಸಾರ್ವಜನಿಕರು ಆರೋಪಿಸಿದ್ದಾರೆ. ಪಂಪ್ ಹೌಸ್ – ಕೆಆರ್ ಎಸ್ ರಸ್ತೆಯಲ್ಲಿರುವ ಬಂಕ್ ಮಾಲೀಕರ ವಿರುದ್ಧ ಕೂಡಲೇ ತಾಲೂಕು ಆಡಳಿತ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ
Maddur; ಕೆಲಸದ ಒತ್ತಡ: ಎಂಜಿನಿಯರ್ ಆತ್ಮಹ*ತ್ಯೆ
Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
MUST WATCH
ಹೊಸ ಸೇರ್ಪಡೆ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ, ಏನು ಮಾರ್ಗಸೂಚಿ ಇಳಿದೆ ಮಾಹಿತಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.