ಚೆನ್ನೈ: ತರಕಾರಿ ಮಾರುಕಟ್ಟೆಯಲ್ಲಿ ಸೋಂಕು ನಿವಾರಕ ಸುರಂಗ ಸ್ಥಾಪನೆ
Team Udayavani, Apr 4, 2020, 5:11 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಚೆನ್ನೈ: ತಮಿಳುನಾಡಿನ ತಿರುಪ್ಪುರ್ ಜಿಲ್ಲೆಯ ತೆನ್ನಮ್‌ಪಾಲ್ಯಂ ತರಕಾರಿ ಮಾರುಕಟ್ಟೆಯಲ್ಲಿ ಕೊರೊನಾ ತಡೆಗೆ ‘ಸೋಂಕು ನಿವಾರಕ ಸುರಂಗ’ ಸ್ಥಾಪಿಸಲಾಗಿದ್ದು, ಪ್ರತಿಯೊಬ್ಬರೂ ಈ ಸುರಂಗದ ಮೂಲಕವೇ ಮಾರುಕಟ್ಟೆಯನ್ನು ಪ್ರವೇಶಿಸಬೇಕಾಗಿದೆ. ಇಲ್ಲಿ ಹಾದು ಹೋಗುವ ಜನರಿಗೆ ನೀರಿನೊಂದಿಗೆ ಮಿಶ್ರಣ ಮಾಡಿರುವ ರಾಸಾಯನಿಕ ದ್ರಾವಣವನ್ನು ಸಿಂಪಡಿಸಲಾಗುತ್ತಿದೆ.
19 ಅಡಿ ಉದ್ದ ಹಾಗೂ 5 ಅಡಿ ಅಗಲದ ಸುರಂಗವನ್ನು ತೆರೆಯಲಾಗಿದ್ದು, ಪ್ರತಿಯೊಬ್ಬರಿಗೂ ಕನಿಷ್ಠ 5 ಸೆಕೆಂಡ್‌ಗಳ ಕಾಲ ಸೋಂಕು ನಿವಾರಕ ದ್ರಾವಣವನ್ನು ಸಿಂಪಡಿಸಿದ ಬಳಿಕವೇ ಮಾರುಕಟ್ಟೆಗೆ ಬಿಡಲಾಗುತ್ತಿದೆ. ಸಮೀಪದಲ್ಲಿ ರಾಸಾಯನಿಕ ದ್ರಾವಣ ಮಿಶ್ರಿತ ನೀರು ಇರುವ ಟ್ಯಾಂಕರ್ ನಿಲ್ಲಿಸಲಾಗಿದೆ.
ಇದರಿಂದ ಜನರಿಗೆ ಯಾವುದೇ ವ್ಯತಿರಿಕ್ತ ಪರಿಣಾಮ ಬೀರುವುದಿಲ್ಲ. ವೈದ್ಯರಿಂದ ಪರೀಕ್ಷಿಸಿದ ಬಳಿಕವೇ ಈ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ. ಒಂದು ಸುರಂಗಕ್ಕೆ ಲಕ್ಷ ರೂ. ಖರ್ಚು ಬರುತ್ತದೆ. ಜನನಿಬಿಡ 10 ಸ್ಥಳಗಳಲ್ಲಿ ಇದನ್ನು ಅಳವಡಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.