ಪ್ರಶ್ನೆಯಾಗಿಯೇ ಉಳಿದ ಕೋವಿಡ್ 19 ಪ್ರಕರಣಗಳಿವು!
Team Udayavani, Apr 5, 2020, 6:00 AM IST
ಬೆಂಗಳೂರು: ರಾಜ್ಯದಲ್ಲಿ ಪತ್ತೆಯಾದ ಹಲವಾರು ಕೋವಿಡ್ 19 ಸೋಂಕು ಪ್ರಕರಣಗಳು ಪ್ರಶ್ನೆಯಾಗಿ ಉಳಿದಿದ್ದು ರಾಜ್ಯ ಸರಕಾರದ ನಿದ್ದೆಗೆಡಿಸಿವೆ. ಆರೋಗ್ಯ ಇಲಾಖೆ ಅಧಿಕಾರಿಗಳು ಇವುಗಳ ಹಿಂದೆ ಬಿದ್ದಿದ್ದಾರೆ. ಆದರೆ ಉತ್ತರ ಮಾತ್ರ ಸಿಗುತ್ತಿಲ್ಲ.
ರಾಜ್ಯದಲ್ಲಿ ಕೋವಿಡ್ 19 ಸೋಂಕು ದೃಢಪಟ್ಟವರ ಸಂಖ್ಯೆ 128 ಇದ್ದು, ಈ ಪೈಕಿ 19 ಸೋಂಕಿತರಿಗೆ ವಿದೇಶಿ ಪ್ರವಾಸದ ಹಿನ್ನೆಲೆ ಇಲ್ಲ. ಯಾರಿಂದ, ಎಲ್ಲಿ, ಯಾವಾಗ ಸೋಂಕು ಸೋಂಕು ತಗಲಿದೆ ಎಂಬ ನಿಖರ ಮಾಹಿತಿ ಲಭ್ಯವಾಗಿಲ್ಲ. ಇಂದಿಗೂ ಆರೋಗ್ಯ ಇಲಾಖೆ ಈ ಕುರಿತು ವೈದ್ಯಕೀಯ ತನಿಖೆ ನಡೆಸುತ್ತಲಿದೆ. ಇನ್ನು ಪ್ರಶ್ನೆಯಾಗಿಯೇ ಉಳಿದಿರುವ ಈ ಸೋಂಕಿತರು ಈಗಾಗಲೇ ಏಳು ಮಂದಿಗೆ ಸೋಂಕು ಹರಡಿಸಿದ್ದಾರೆ.
ನೂರಾರು ಮಂದಿ ಶಂಕಿತರಾಗಿದ್ದಾರೆ. ಇನ್ನೊಂದೆಡೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಇಂಥ ಪ್ರಶ್ನೆಯಾಗಿ ಉಳಿಯುತ್ತಿರುವ ಸೋಂಕು (ಯಾವ ಸೋಂಕಿತರ ನಿಖರ ಸಂಪರ್ಕ ಇಲ್ಲದ) ಪ್ರಕರಣಗಳು ಹೆಚ್ಚಳವಾಗುತ್ತಲೇ ಇರುವುದು ಆತಂಕ ಮೂಡಿಸಿದೆ.
ಪ್ರಶ್ನೆಯಾಗಿರುವ ಪ್ರಕರಣಗಳು
– ಮೈಸೂರಿನ ನಂಜನಗೂಡು ಔಷಧಿ ಕಾರ್ಖಾನೆ ಸಿಬಂದಿಯೊಬ್ಬರಲ್ಲಿ ಈ ವೈರಸ್ ಕಾಣಿಸಿಕೊಂಡಿತ್ತು. ಬಳಿಕ ಅದೇ ಕಂಪೆನಿಯ ಇತರ 14 ಸಿಬಂದಿಯಲ್ಲಿ ಸೋಂಕು ದೃಢಪಟ್ಟಿದೆ.
– ಮಾ. 10ರಂದು ದಕ್ಷಿಣ ಕನ್ನಡ ಜಿಲ್ಲೆಯ ನಿವಾಸಿಯ ಹತ್ತು ತಿಂಗಳ ಮಗುವಿನಲ್ಲಿ ಸೋಂಕು ದೃಢಪಟ್ಟಿತು. ಈ ಮಗುವಿಗೆ ವಿದೇಶ ಪ್ರಯಾಣ ಮಾಡಿದ ಮತ್ತು ವಿದೇಶದಿಂದ ಬಂದ ವ್ಯಕ್ತಿಗಳ ನೇರ ಸಂಪರ್ಕವೇ ಇರಲಿಲ್ಲ.
– ಮಾ. 31ರಂದು ಬಳ್ಳಾರಿ ಜಿಲ್ಲೆಯ ಹೊಸಪೇಟೆಯ ಒಂದೇ ಕುಟುಂಬದ ಮೂರು ಮಂದಿಗೆ ಸೋಂಕು ದೃಢಪಟ್ಟಿತು. ಇವರು ದಾವಣಗೆರೆ ಮೂಲಕ ರೈಲಿನಲ್ಲಿ ಬೆಂಗಳೂರಿಗೆ ಭೇಟಿ ನೀಡಿ ಹಿಂದಿರುಗಿದ ಕೆಲವು ದಿನಗಳಲ್ಲಿಯೇ ಸೋಂಕು ಕಾಣಿಸಿಕೊಂಡಿದೆ.
– ಮಾ. 31ರಂದು ಬೆಂಗಳೂರಿನ 62 ವರ್ಷದ ಮಹಿಳೆಗೆ ಸೋಂಕು ದೃಢ.
– ಎ. 2ರಂದು 24 ವರ್ಷದ ಬೆಂಗಳೂರು ಯುವಕನಲ್ಲಿ ಸೋಂಕು ದೃಢ.
– ಎ. 2ರಂದು ಕಿರಾಣಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಬಾಗಲ ಕೋಟೆಯ 75 ವರ್ಷದ ವೃದ್ಧನಿಗೆ ಸೋಂಕು ದೃಢಪಟ್ಟದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.