ಬಿಜೆಪಿ ಸಂಸ್ಥಾಪನಾ ದಿನ ಆಚರಿಸಲು ಕೋವಿಡ್ ಸಂಕಷ್ಟವನ್ನು ಉಪಯೋಗಿಸಿತೆ ಬಿಜೆಪಿ: ಎಚ್ ಡಿಕೆ
Team Udayavani, Apr 5, 2020, 9:51 AM IST
ಬೆಂಗಳೂರು: ಕೋವಿಡ್-19 ವಿರುದ್ಧ ಒಗ್ಗಟ್ಟು ಪ್ರದರ್ಶಿಸಲು ಪ್ರಧಾನಿ ನರೇಂದ್ರ ಮೋದಿ ರವಿವಾರ ರಾತ್ರಿ ದೀಪ ಬೆಳಗಿಸಲು ಕರೆ ನೀಡಿದ್ದು, ಆದರೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ಸಂಸ್ಥಾಪನಾ ದಿನ ಆಚರಿಸಲು ಬಿಜೆಪಿಯು ಕೋವಿಡ್-19 ಸಂಕಷ್ಟವನ್ನು ಪ್ರಧಾನಿ ದುರುಪಯೋಗ ಮಾಡಿಕೊಂಡರೇ ಎಂದು ಪ್ರಶ್ನಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, 1980 ಎಪ್ರಿಲ್ 6 ಬಿಜೆಒಪಿ ಸಂಸ್ಥಾಪನಾ ದಿನ. ಇಂದು ( ಎ.5 ರಂದು) ಬಿಜೆಪಿಗೆ ನಲವತ್ತು ವರ್ಷ ತುಂಬಲಿದೆ. ತನ್ನ ಸಂಸ್ಥಾಪನಾ ದಿನದ ಸಂಭ್ರಮವನ್ನು ಕೋವಿಡ್ ಸಂಕಷ್ಟದ ದಿನಗಳಲ್ಲಿ ನೇರಾ ನೇರ ಆಚರಿಸಲು ಹಿಂಜರಿದ ಬಿಜೆಪಿ ಪರೋಕ್ಷವಾಗಿ ಇಡೀ ದೇಶದ ಜನತೆಯ ಕೈಯಲ್ಲಿ ದೀಪ ಬೆಳಗಿಸಿ ಭಂಡತನ ಮೆರೆಯುತ್ತಿದೆಯೇ ಎಂದು ಎಚ್ ಡಿ ಕುಮಾರಸ್ವಾಮಿ ಅನುಮಾನ ವ್ಯಕ್ತಪಡಿಸಿದ್ದಾರೆ.
ದೀಪ ಬೆಳಗಸುವ ಮೋದಿ ಕರೆ ನೀಡಿದ ಹಿಂದಿನ ವೈಜ್ಞಾನಿಕ ಕಾರಣ ಏನೆಂದು ಪ್ರಧಾನಿ ಮೋದಿ ಸ್ಪಷ್ಟಪಡಿಸಬೇಕು ಎಂದು ಟ್ವೀಟ್ ನಲ್ಲಿ ಎಚ್ ಡಿಕೆ ಆಗ್ರಹಿಸಿದ್ದಾರೆ.
ಬಿಜೆಪಿಯ ಸಂಸ್ಥಾಪನಾ ದಿನ ಆಚರಿಸಲು ಕೊರೋನ ಸಂಕಷ್ಟವನ್ನು ಪ್ರಧಾನಿ ದುರುಪಯೋಗ ಮಾಡಿಕೊಂಡರೇ?
6 ಎಪ್ರಿಲ್ 1980 ಬಿಜೆಪಿ ಸಂಸ್ಥಾಪನಾ ದಿನ. ಇಂದಿನ ದಿನ 5-04-2020ಕ್ಕೆ ಬಿಜೆಪಿಗೆ ನಲವತ್ತು ವರ್ಷ ತುಂಬುತ್ತವೆ.
1/4— H D Kumaraswamy (@hd_kumaraswamy) April 5, 2020
ತನ್ನ ಸಂಸ್ಥಾಪನಾ ದಿನದ ಸಂಭ್ರಮೋತ್ಸವವನ್ನು ಕೊರೋನ ಸಂಕಷ್ಟದ ದಿನಗಳಲ್ಲಿ ನೇರಾ ನೇರ ಆಚರಿಸಲು ಹಿಂಜರಿದ ಬಿಜೆಪಿ ಪರೋಕ್ಷವಾಗಿ ಇಡೀ ದೇಶದ ಜನತೆಯ ಕೈಯಲ್ಲಿ ದೀಪ ಬೆಳಗಿಸಿ ತನ್ನ ಭಂಡತನವನ್ನು ಮೆರೆಯುತ್ತಿದೆಯೇ?
2/4— H D Kumaraswamy (@hd_kumaraswamy) April 5, 2020
ದೇಶದ ಸಂಕಟವನ್ನು ಬಗೆ ಹರಿಸುವ ಯಾವುದೇ ಮಾರ್ಗೋಪಾಯಗಳನ್ನು ದೇಶಕ್ಕೆ ಹೇಳದೇ ಪ್ರಧಾನಿ ಏಪ್ರಿಲ್ 5 ನ್ನೇ ಆಯ್ದುಕೊಂಡದ್ದಕ್ಕೆ ಬೇರೆ ಏನು ವೈಜ್ಞಾನಿಕ, ವೈಚಾರಿಕ ಕಾರಣ ಎಂಬುದನ್ನು ಸ್ಪಷ್ಟ ಪಡಿಸಬೇಕು.
ದೇಶ ಹಿಂದೆಂದೂ ಕಂಡರಿಯದ ಕಷ್ಟದ ದಿನಗಳಲ್ಲಿ ಇರುವಾಗ ದೀಪ ಬೆಳಗಿಸಿ ಒಗ್ಗಟ್ಟು ಪ್ರದರ್ಶಿಸುವ ನೆಪದಲ್ಲಿ ಈ ತರದ ತೋರಿಕೆಯ ಸಂಭ್ರಮ ಬೇಕೇ?
3/4— H D Kumaraswamy (@hd_kumaraswamy) April 5, 2020
ಜಗತ್ತು ಕೊರೋನಾ ಮಹಾಮಾರಿಯಿಂದ ತತ್ತರಿಸುವ ಸಂದರ್ಭದಲ್ಲಿ ಇಂತಹ ರಹಸ್ಯ ಕಾರ್ಯಸೂಚಿ ಅರ್ಥಾತ್ ಪರದೆ ಹಿಂದಿನ ಸತ್ಯ ಮರೆಮಾಚಿ ಅಕಾಲಿಕ ದೀಪಾವಳಿ ಮಾಡಬೇಕೆ?
ಕರುಣಾಳು ಬಾ ಬೆಳಕೆ
ಮುಸುಕಿದೀ ಮಬ್ಬಿನಲಿ..
ಕೈ ಹಿಡಿದು
ನಡೆಸೆನ್ನನು…..4/4
— H D Kumaraswamy (@hd_kumaraswamy) April 5, 2020
It is shameful to convert the national crisis into an event of self aggrandizement & it is beyond shameful to push the hidden agenda of his party in the face of global calamity. May sense prevail upon the PM;
ಕರುಣಾಳು ಬಾ ಬೆಳಕೆ
ಮುಸುಕಿದೀ ಮಬ್ಬಿನಲಿ..
ಕೈ ಹಿಡಿದು
ನಡೆಸೆನ್ನನು…..3/3
— H D Kumaraswamy (@hd_kumaraswamy) April 5, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.