ಬೈಕಂಪಾಡಿಗೆ ತೆರಳಲು ವ್ಯಾಪಾರಸ್ಥರ ನಕಾರ
ಬದಲಿ 3 ಸ್ಥಳಗಳಲ್ಲಿ ಅವಕಾಶಕ್ಕೆ ಮನವಿ
Team Udayavani, Apr 5, 2020, 12:43 PM IST
ಮಂಗಳೂರು: ನಗರದ ಸೆಂಟ್ರಲ್ ಮಾರುಕಟ್ಟೆಯ ತರಕಾರಿ ಹಾಗೂ ಹಣ್ಣುಹಂಪಲು ಸಗಟು ವ್ಯಾಪಾರವನ್ನು ನಗರದ ಹೊರ ವಲಯದ ಬೈಕಂಪಾಡಿಯ ಎಪಿಎಂಸಿ ಪ್ರಾಂಗಣಕ್ಕೆ ಸ್ಥಳಾಂತರಿಸಲು ಸಗಟು ವ್ಯಾಪಾರಸ್ಥರು ನಿರಾಕರಿಸಿದ್ದು, ಪರ್ಯಾಯವಾಗಿ ನೆಹರೂ ಮೈದಾನ, ಸರ್ವಿಸ್ ಬಸ್ ನಿಲ್ದಾಣ ಮತ್ತು ಕರಾವಳಿ ಉತ್ಸವ ಮೈದಾನದಲ್ಲಿ ಅನುಮತಿ ಕೊಡಿ ಎಂದು ಜಿಲ್ಲಾಡಳಿತದ ಮುಂದೆ ಬೇಡಿಕೆ ಮಂಡಿಸಿದ್ದಾರೆ.
ಈ ಕುರಿತು ಶನಿವಾರ ಜಿಲ್ಲಾಧಿ ಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದು ಸೆಂಟ್ರಲ್ ಮಾರ್ಕೆಟ್ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಮೊಹಮದ್ ಮುಸ್ತಫಾ ತಿಳಿಸಿದ್ದಾರೆ.
ಬೈಕಂಪಾಡಿ ಎಪಿಎಂಸಿ ಪ್ರಾಂಗಣಕ್ಕೆ ಸ್ಥಳಾಂತರಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿ ಎರಡು ದಿನ ಕಳೆದರೂ ವ್ಯಾಪಾರಸ್ಥರು ಇನ್ನೂ ಸ್ಥಳಾಂತರಗೊಂಡಿಲ್ಲ. ಶುಕ್ರವಾರ ರಾತ್ರಿ 11ರಿಂದ ನಸುಕಿನ ಜಾವ 4 ಗಂಟೆ ವರೆಗೆ ಸೆಂಟ್ರಲ್ ಮಾರ್ಕೆಟ್‌ನಲ್ಲಿ ಸಗಟು ವ್ಯಾಪಾರಕ್ಕೆ ಜಿಲ್ಲಾಡಳಿತ ಅವಕಾಶ ನೀಡಿರಲಿಲ್ಲ. ಹಾಗಾಗಿ ಸಗಟು ವ್ಯಾಪಾರಸ್ಥರು ಮಂಗಳೂರು ನಗರ ಪ್ರವೇಶಿಸುವ ಸ್ಥಳಗಳಲ್ಲಿ ಲಾರಿ ನಿಲ್ಲಿಸಿ ಅಲ್ಲಿಂದಲೇ ರಿಟೇಲ್ ವ್ಯಾಪಾರಿಗಳಿಗೆ ಮಾರಾಟ ಮಾಡಿದರು.
ಸ್ಥಳಾಂತರಕ್ಕೆ ನಿರಾಕರಣೆ
ಸಗಟು ವ್ಯಾಪಾರವನ್ನು ಬೈಕಂಪಾಡಿಗೆ ಸ್ಥಳಾಂತರಿಸಬಹುದೇ ಎನ್ನುವ ಕುರಿತು ಚರ್ಚಿಸಲು ಶನಿವಾರ ಸಗಟು ಮಾರಾಟಗಾರರ ಸಭೆ ನಡೆಸಿದ್ದು, ವ್ಯಾಪಾರಿಗಳು ಬೈಕಂಪಾಡಿ ನಗರದಿಂದ ಬಹಳಷ್ಟು ದೂರದಲ್ಲಿದೆ ಹಾಗೂ ಅಲ್ಲಿ ಸೂಕ್ತ ಸೌಲಭ್ಯಗಳಿಲ್ಲ ಎಂಬ ಕಾರಣ ನೀಡಿ ಸ್ಥಳಾಂತರಗೊಳ್ಳಲು ನಿರಾ ಕರಿಸಿದ್ದಾರೆ.
ಲಾಕ್‌ಡೌನ್ ಮುಗಿಯುವ ತಾತ್ಕಾಲಿಕ ಅವಧಿಗೆ ಮಾತ್ರ ಈ ವ್ಯವಸ್ಥೆ ಆಗಿರುವುದರಿಂದ ಬದಲಿ ಮೂರು ಜಾಗಗಳಲ್ಲಿ ಸಗಟು ವ್ಯಾಪಾರಕ್ಕೆ
ಅನುಮತಿ ನೀಡ ಬಹುದು. ಅಲ್ಲಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಲು ಸಾಧ್ಯವಾಗುವುದು. ಇದಲ್ಲದೆ ತರಕಾರಿ ಮತ್ತು ಹಣ್ಣು ಹಂಪಲುಗಳನ್ನು ಪ್ರತ್ಯೇಕವಾಗಿ ದಿನ ಬಿಟ್ಟು ದಿನ ಮಾರಾಟ ಮಾಡುವ ಬಗ್ಗೆಯೂ ಚಿಂತನೆ ನಡೆಸಬಹುದು ಎಂದು ಸಭೆಯಲ್ಲಿ ಅಭಿಪ್ರಾಯಪಡಲಾಗಿದೆ ಎಂದು ಸಂಘದ ಅಧ್ಯಕ್ಷರು ತಿಳಿಸಿದ್ದಾರೆ. ಆದರೆ ಜಿಲ್ಲಾಡಳಿತವು ಸಗಟು ವ್ಯಾಪಾರವನ್ನು ಬೈಕಂಪಾಡಿಯಲ್ಲೇ ನಡೆಸಬೇಕೆಂಬ ನಿಲುವನ್ನು ಹೊಂದಿದ್ದು, ವ್ಯಾಪಾರಸ್ಥರ ಮನವೊಲಿಸುವ ಯತ್ನ ಮುಂದು ವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.