ಕಾರ್ಖಾನೆ ಆರಂಭಕ್ಕೆ ಅನುಮತಿ


Team Udayavani, Apr 5, 2020, 2:57 PM IST

ಕಾರ್ಖಾನೆ ಆರಂಭಕ್ಕೆ ಅನುಮತಿ

ಹಾವೇರಿ: ಕೋವಿಡ್ 19 ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಅವಧಿಯಲ್ಲಿ ಸ್ಥಗಿತಗೊಳಿಸಲಾದ ಅಗತ್ಯ ವಸ್ತುಗಳ ಕಾರ್ಖಾನೆಗಳನ್ನು ಆರೋಗ್ಯ ಇಲಾಖೆಯ ಮಾರ್ಗಸೂಚಿ ಪಾಲಿಸುವ ಷರತ್ತಿನೊಂದಿಗೆ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಪರವಾನಗಿ ನೀಡಲಿದ್ದು, ಕಾರ್ಖಾನೆಗಳನ್ನು ಆರಂಭಿಸುವಂತೆ ಜಿಲ್ಲೆಯ ಕೈಗಾರಿಕೋದ್ಯಮಗಳಿಗೆ ಜಿಪಂ ಸಿಇಒ ರಮೇಶ ದೇಸಾಯಿ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಜಿಲ್ಲೆಯ ಕೈಗಾರಿಕೋದ್ಯಮಿಗಳ ಸಭೆ ನಡೆಸಿದ ಅವರು, ರೈತರ ಸಾಮಗ್ರಿಗಳುಮಾರುಕಟ್ಟೆಗೆ ಹೋಗಬೇಕು. ಗ್ರಾಹಕರಿಗೆ ಅಗತ್ಯ ವಸ್ತುಗಳ ಕೊರತೆಯಾಗಬಾರದು. ಈ ಹಿನ್ನೆಲೆಯಲ್ಲಿ ಕೃಷಿಗೆ ಪೂರಕವಾದ ಕೈಗಾರಿಕೆಗಳು, ದಿನಸಿ ಪೂರಕ ಆಹಾರ ಸಂಸ್ಕರಣ ಘಟಕಗಳು, ಬೇಕರಿ ಸೇರಿದಂತೆ ನಿತ್ಯ ಬಳಕೆಯ ಉತ್ಪಾದನಾ ಘಟಕಗಳನ್ನು ಸುರಕ್ಷತಾ ಮಾನದಂಡವನ್ನು ಅನುಸರಿಸಿ ಆರಂಭಿಸಲು ಅನುಮತಿ ನೀಡಲಾಗುವುದು ಎಂದು ತಿಳಿಸಿದರು.

ಕೃಷಿ ಚಟುವಟಿಕೆಗೆ ಅನುಕೂಲಕರವಾಗುವ ಟ್ರ್ಯಾಕ್ಟರ್‌ ರಿಪೇರಿ, ಕೃಷಿ ಉಪಕರಣಗಳ ರಿಪೇರಿಗೆ ಯಾವುದೇ ನಿರ್ಬಂಧವಿಲ್ಲ. ಸರಕು ಸಾಗಾಣಿಕೆ ವಾಹನಗಳ ಗ್ಯಾರೇಜ್‌ಗಳಿಗೆ ಷರತ್ತುಬದ್ಧ ಅನುಮತಿ ನೀಡಲಾಗುವುದು. ಕಾರ್ಖಾನೆ ಮಾಲೀಕರು ತಮ್ಮ ಕಾರ್ಮಿಕರಿಗೆ ಬೇಕಾದ ಪಾಸ್‌ಗಳನ್ನು ಪಡೆಯಬೇಕು ಎಂದು ಸೂಚಿಸಿದರು.

ಕೃಷಿ ಸೇವಾ ವಲಯ, ಕೃಷಿ ಬೀಜ ಉತ್ಪಾದನೆ, ರೇಷ್ಮೆ ಮಾರಾಟ, ಹೈನುಗಾರಿಕೆ, ಜಿನ್ನಿಂಗ್‌, ರಸಗೊಬ್ಬರ, ಆಹಾರ ಸಾಮಗ್ರಿಗಳ ಸಂಸ್ಕರಣೆ, ಗಿರಣಿ, ಎಣ್ಣೆ ಮತ್ತು ಪ್ಯಾಕಿಂಗ್‌ ಇಂಡಸ್ಟ್ರೀಸ್‌, ಬೇಕರಿ, ಫಿಶ್‌, ಪೌಟ್ರಿ, ಕ್ಯಾಟಲ್‌ ಫೀಡ್‌, ವೈದ್ಯಕೀಯ ಸುರಕ್ಷಾ ಸಾಮಗ್ರಿಗಳಾದ ಮಾಸ್ಕ್, ಸ್ಯಾನಿಟೈಸರ್‌ ತಯಾರಿಕೆ ಸೇರಿದಂತೆ ಅಗತ್ಯ ವಸ್ತುಗಳ ಉತ್ಪಾದನೆ ಆರಂಭಿಸಲು ಯಾವುದೇ ಅಭ್ಯಂತರವಿಲ್ಲ ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಯೊಗೇಶ್ವರ ಮಾತನಾಡಿ, ಕಾರ್ಖಾನೆಗಳ ಆರಂಭಕ್ಕೆ ಸರ್ಕಾರದ ಅಧಿಸೂಚನೆಯಂತೆ ವಿನಾಯಿತಿ ಪಡೆದಿರಬೇಕು. ಕಾರ್ಖಾನೆಯ ಪ್ರವೇಶದಿಂದ ಹಿಡಿದು ಹೊರಗೆ ಬರುವವರೆಗೂ ಅವರಿಗೆ  ಕೋವಿಡ್ 19 ವೈರಸ್‌ ಹರಡದಂತೆ ಮುಂಜಾಗ್ರತೆ ಹಾಗೂ ಸುರಕ್ಷಾ ಮಾರ್ಗಸೂಚಿ ಅಳವಡಿಸಬೇಕು. ಪ್ರತಿ ಕಾರ್ಮಿಕರಿಗೂ ಉತ್ತಮ ಗುಣಮಟ್ಟ ಮಾಸ್ಕ್, ಸ್ಯಾನಿಟೈಸರ್‌, ಕೈಗವಸ್‌ ಒದಗಿಸಬೇಕು. ಪ್ರತಿ ಕಾರ್ಖಾನೆಯ ಒಳಗೆ ಹಾಗೂ ಕೆಲಸ ಮಾಡುವ ಜಾಗದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಪ್ರತಿನಿತ್ಯ ಕಾರ್ಮಿಕರಿಗೆ ಕೋವಿಡ್ 19 ಜಾಗೃತಿ ಮುನ್ನೆಚ್ಚರಿಕೆ ಕುರಿತಂತೆ ಜಾಗೃತಿ ಮೂಡಿಸಬೇಕು. ಕಾರ್ಮಿಕರಿಗೆ ಕೆಲಸ ಮಾಡುವ ಸ್ಥಳಕ್ಕೆ ಮನೆಯಿಂದ ಹೋಗಲು ಪಾಸ್‌ ನೀಡಲಾಗುವುದು. ಪಾಸ್‌ ವ್ಯವಸ್ಥೆಗಾಗಿ ಜಿಲ್ಲಾಡಳಿತ ಭವನದಲ್ಲಿ ಸ್ಪಂದನ ಕೇಂದ್ರ ತೆರೆಯಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಡಾ| ದಿಲೀಷ್‌, ಕೈಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ವಿನಾಯಕ ಜೋಶಿ, ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ವಿವಿಧ ಕೈಗಾರಿಕೋದ್ಯಮಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

ಸ್ಪೀಕರ್‌, ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಭಾಪತಿ ಹೊರಟ್ಟಿ

ಸ್ಪೀಕರ್‌, ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಭಾಪತಿ ಹೊರಟ್ಟಿ

ಕೆಕೆಆರ್‌ಡಿಬಿಯಲ್ಲಿ ಕಾಂಗ್ರೆಸ್‌ ಮುಖಂಡರಿಗೆ ಮಾತ್ರ ಅವಕಾಶ: ಪ್ರತಿಪಕ್ಷ ಸದಸ್ಯರ ಬೇಸರ

ಕೆಕೆಆರ್‌ಡಿಬಿಯಲ್ಲಿ ಕಾಂಗ್ರೆಸ್‌ ಮುಖಂಡರಿಗೆ ಮಾತ್ರ ಅವಕಾಶ: ಪ್ರತಿಪಕ್ಷ ಸದಸ್ಯರ ಬೇಸರ

Winter Session: ಸರ್ಕಾರದ ವರ್ತನೆಗೆ ವಿಪಕ್ಷ ಸದಸ್ಯರ ಆಕ್ರೋಶ: ಸಭಾಪತಿ ಹೊರಟ್ಟಿ ಎಚ್ಚರಿಕೆ

Winter Session: ಸರ್ಕಾರದ ವರ್ತನೆಗೆ ವಿಪಕ್ಷ ಸದಸ್ಯರ ಆಕ್ರೋಶ: ಸಭಾಪತಿ ಹೊರಟ್ಟಿ ಎಚ್ಚರಿಕೆ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

1-sonia

Nehru letters ಹಿಂತಿರುಗಿಸುವಂತೆ ಸೋನಿಯಾ ಗಾಂಧಿಗೆ ಬಿಜೆಪಿ ಒತ್ತಾಯ

13

Madikeri: ಸಹೋದರರ ಕಲಹ ಕೊಲೆಯಲ್ಲಿ ಅಂತ್ಯ – ಆರೋಪಿ ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

ಸ್ಪೀಕರ್‌, ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಭಾಪತಿ ಹೊರಟ್ಟಿ

ಸ್ಪೀಕರ್‌, ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಭಾಪತಿ ಹೊರಟ್ಟಿ

ಕೆಕೆಆರ್‌ಡಿಬಿಯಲ್ಲಿ ಕಾಂಗ್ರೆಸ್‌ ಮುಖಂಡರಿಗೆ ಮಾತ್ರ ಅವಕಾಶ: ಪ್ರತಿಪಕ್ಷ ಸದಸ್ಯರ ಬೇಸರ

ಕೆಕೆಆರ್‌ಡಿಬಿಯಲ್ಲಿ ಕಾಂಗ್ರೆಸ್‌ ಮುಖಂಡರಿಗೆ ಮಾತ್ರ ಅವಕಾಶ: ಪ್ರತಿಪಕ್ಷ ಸದಸ್ಯರ ಬೇಸರ

Rain: 5 ವಿದ್ಯುತ್‌ ನಿಗಮ ವ್ಯಾಪ್ತಿಯಲ್ಲಿ 156 ಕೋಟಿರೂ. ಸೌಕರ್ಯ ಹಾನಿ: ಕೆ.ಜೆ. ಜಾರ್ಜ್‌

Rain: 5 ವಿದ್ಯುತ್‌ ನಿಗಮ ವ್ಯಾಪ್ತಿಯಲ್ಲಿ 156 ಕೋಟಿರೂ. ಸೌಕರ್ಯ ಹಾನಿ: ಕೆ.ಜೆ. ಜಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.