ತರಕಾರಿ-ಕಲ್ಲಂಗಡಿ ಬೆಳೆದ ರೈತನಿಗೆ ಆರ್ಥಿಕ ಸಂಕಷ್ಟ


Team Udayavani, Apr 5, 2020, 5:37 PM IST

ತರಕಾರಿ-ಕಲ್ಲಂಗಡಿ ಬೆಳೆದ ರೈತನಿಗೆ ಆರ್ಥಿಕ ಸಂಕಷ್ಟ

ಯಾದಗಿರಿ: ವಿಶ್ವದೆಲ್ಲೆಡೆ ತಲ್ಲಣ ಸೃಷ್ಟಿಸಿರುವ ಕೋವಿಡ್ 19 ರೈತರನ್ನು ಆತಂಕಕ್ಕೆ ದೂಡಿದೆ. ಜಿಲ್ಲೆಯ ಹಲವೆಡೆ ರೈತರು ತೋಟಗಾರಿಕೆ ಬೆಳೆ, ಹಣ್ಣುಗಳನ್ನು ಬೆಳೆದಿದ್ದು, ಇಡೀ ದೇಶವೇ ಲಾಕ್‌ ಡೌನ್‌ ಆಗಿರುವುದರಿಂದ ಬೆಳೆಯನ್ನು ಸಾರಿಗೆ  ಸೌಕರ್ಯವಿಲ್ಲದೇ ಸಾಗಿಸಲಾಗದೇ ತೀವ್ರ ಹಾನಿ ಅನುಭವಿಸುವಂತಾಗಿದೆ.

ರೈತರು ಬೆಳೆದ ಬೆಳೆ ಕಟಾವಿಗೆ ಬಂದಿದ್ದರೂ ಅದಕ್ಕೆ ಮಾರುಕಟ್ಟೆ ವ್ಯವಸ್ಥೆ ಇಲ್ಲದ್ದರಿಂದ ಸಮಸ್ಯೆಯಾಗಿದೆ. ಅದರಲ್ಲೂ ವಿಶೇಷವಾಗಿ ತರಕಾರಿ, ಕಾಯಿಪಲ್ಲೆಗಳಾದ ಬೆಂಡೆ, ಚವಳಿಕಾಯಿ, ಪಾಲಕ, ಬದನೆಕಾಯಿ, ಹೀರೆಕಾಯಿ, ಸವತೆಕಾಯಿ, ಟೊಮೊಟೊ ಸೇರಿದಂತೆ ಎಲ್ಲವೂ ಕೊಳೆತು ಹೋಗಿ ಹಾಳಾಗಿವೆ. ಮಾರಾಟ ಮಾಡಲೂ ಆಗದೇ ತಿಪ್ಪೆಗೆ ಚೆಲ್ಲುವಪರಿಸ್ಥಿತಿ ನಿರ್ಮಾಣವಾಗಿದೆ. ಗುರುಮಠಕಲ್‌ ತಾಲೂಕಿನ ಅರಕೇರಾ ಕೆ. ಗ್ರಾಮದ ತಾಯಪ್ಪ ಸಿದ್ದಣ್ಣ ಪೂಜಾರಿ ತಮ್ಮ 6 ಎಕರೆ ತೋಟದಲ್ಲಿ ತೋಟಗಾರಿಕೆ ಹಾಗೂ ತರಕಾರಿ ಬೆಳೆ ಬೆಳೆದಿದ್ದು, ಎಲ್ಲ ಅರ್ಧ ತರಕಾರಿ ಕೊಳೆತು ಹೋಗಿದೆ. ಇನ್ನರ್ಧ ಕೇಳುವವರಿಲ್ಲ. ಸುಮಾರು 3.5 ಲಕ್ಷ ರೂ. ಖರ್ಚು ಮಾಡಿದ ರೈತ ಕಂಗಾಲಾಗುವಂತಾಗಿದೆ.

ಇನ್ನೊಂದೆಡೆ ಕಲ್ಲಂಗಡಿ ಬೆಳೆದ ರೈತರಿಗೂ ಈ ಆತಂಕದಿಂದ ಹೊರತಾಗಿಲ್ಲ. ವಡಗೇರಾ ತಾಲೂಕಿನ ಕಾಡಂಗೇರಾ(ಬಿ) ಗ್ರಾಮದ ಶಂಕರ ಬಂಡಿ ಸೀಮೆಯಲ್ಲಿ ಸರ್ವೇ ನಂ.25ರಲ್ಲಿ ಮಲ್ಲಪ್ಪ ಪುರಿ ತನ್ನ 2.32 ಎಕರೆಯಲ್ಲಿ ಬೆಳೆದಿದ್ದ ಕಲ್ಲಂಗಡಿ ಕಟಾವಿಗೆ ಬಂದು ರೈತನಿಗೆ ಕೈ ತುಂಬ ಹಣ ನೀಡಬೇಕಿತ್ತು. ಆದರೆ ಕೈ ಖಾಲಿ ಮಾಡಿ ಚಿಂತೆಗೀಡು ಮಾಡಿದೆ.

ಬೆಳೆಯನ್ನು ಮಾರುಕಟ್ಟೆಗೆ ಸಾಗಿಸಲಾರದೆ ಹೊಲದಲ್ಲಿ ಬಿಸಿಲಿಗೆ ಬಿದ್ದು ಸುಟ್ಟು ಹೋಗಿದ್ದು, ಲಕ್ಷಾಂತರ ರೂ. ಖರ್ಚು ಮಾಡಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರು ನಷ್ಟದಿಂದ ಸಾಲದ ಸುಳಿಗೆ ಸಿಕ್ಕಿ ಬದುಕು ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ಬೆಳೆದ ಫಸಲು ಮಾರಾಟಕ್ಕೆ ತೆಗೆದುಕೊಂಡು ಹೋಗುವುದಕ್ಕೆ ವ್ಯಾಪಾರಿಗಳು ಬರುತ್ತಿಲ್ಲ. ರೈತರಾದರೂ ತೆಗೆದುಕೊಂಡು ಹೋಗಬೇಕೆಂದರೆ ವಾಹನಗಳೂ ಸಂಚರಿಸುತ್ತಿಲ್ಲ. ಹಾಗಾಗಿ ದಿಕ್ಕು ತೋಚದೇ ರೈತರು ಕಂಗಾಲಾಗಿದ್ದಾರೆ. ಇಂಥ ಕಠಿಣ ಪರಿಸ್ಥಿತಿಯಲ್ಲಿ ಸರ್ಕಾರ ರೈತರ ನೆರವಿಗೆ ಬರಬೇಕಾಗಿದೆ ಎಂದು ರೈತ ಮಹಿಳಾ ಮುಖಂಡರಾದ ನಾಗರತ್ನ ಪಾಟೀಲ ಒತ್ತಾಯಿಸಿದ್ದಾರೆ.

ರೈತರಿಗೆ ಪರಿಹಾರ ನೀಡಲು ಸರ್ಕಾರ ಮುಂದಾಗಬೇಕು ಎಂದು ಜಯ ಕರ್ನಾಟಕ ಸಂಘಟನೆಯ ಗುರುಮಠಕಲ್‌ ತಾಲೂಕು ಸಮಿತಿ ಒತ್ತಾಯಿಸಿದೆ. ತೋಟಗಾರಿಕೆ ಸಹಾಯಕ ನಿರ್ದೇಶಕರಿಗೆ ಮನವಿ ಸಲ್ಲಿಸಿದ ಕಾರ್ಯಕರ್ತರು ದೇಶಾದ್ಯಂತ ಬೀಗಮುದ್ರ ಸ್ಥಿತಿ ಇರುವ ಹಿನ್ನೆಲೆಯಲ್ಲಿ ದೇಶದ ಜನತೆಗೆ ಸಂಕಷ್ಟ ಎದುರಾಗಿದ್ದು ಅದರಲ್ಲೂ ರೈತರಿಗೆ ಇನ್ನಿಲ್ಲದ ಸಮಸ್ಯೆಯಾಗಿದೆ. ಕೊನೆಗೆ ವಿಧಿಯಿಲ್ಲದೇ ತಮ್ಮ ಹೊಲದಲ್ಲಿ ಬೆಳೆದ ಬೆಳೆಯನ್ನು ಟ್ರ್ಯಾಕ್ಟರ್‌ನಿಂದ ಅರಗುತ್ತಿರುವ ರೈತನ ನೆರವಿಗೆ ಸರ್ಕಾರ ತಕ್ಷಣ ಬರಬೇಕು. ರೈತರಿಗೆ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ತಾಲೂಕು ಅಧ್ಯಕ್ಷ ನಾಗೇಂದ್ರ ಗದ್ದಿಗಿ ಆಗ್ರಹಿಸಿದ್ದಾರೆ.

ಬೆಳೆಗೆ ಪ್ರತಿ ಎಕರೆಗೆ 20 ರಿಂದ 30 ಸಾವಿರ ರೂ. ಖರ್ಚು ಮಾಡಿದ್ದೇವೆ. ಎಕರೆಗೆ ಒಂದೂವರೆ ಲಕ್ಷ ರೂ. ಲಾಭದ ನಿರೀಕ್ಷೆಯಿತ್ತು. ಮಹಾಮಾರಿ ಕೊರೊನಾ ನಮ್ಮ ಬದುಕು ದುಸ್ಥರಗೊಳಿಸಿದೆ. ಕೈಯಿಂದ ಖರ್ಚು ಮಾಡಿದ್ದಕ್ಕೆ ಒಂದು ರೂಪಾಯಿಯೂ ಕೈಗೆ ಬಾರದಿರುವುದು ಸಾಕಷ್ಟು ಆರ್ಥಿಕ ಹೊರ ಮಾಡಿದೆ. ಸರ್ಕಾರ ನಮಗೆ ಸೂಕ್ತ ಪರಿಹಾರ ನೀಡಬೇಕು. -ಹುಚ್ಚಪ್ಪ ಪುರಿಲಿಂಗಪ್ಪನೋರ್‌, ರೈತ.

 

-ಅನೀಲ ಬಸೂದೆ.

ಟಾಪ್ ನ್ಯೂಸ್

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.