ಹಾಪ್‌ಕಾಮ್ಸ್‌ ಮಳಿಗೆ ತೆರೆಯಲು ಸೂಚನೆ


Team Udayavani, Apr 5, 2020, 6:31 PM IST

sm-tdy-1

ಶಿವಮೊಗ್ಗ: ನಗರ ಪಾಲಿಕೆ ವ್ಯಾಪ್ತಿಯ 35 ವಾರ್ಡ್‌ಗಳಲ್ಲಿ ಹಾಪ್‌ಕಾಮ್ಸ್ ವತಿಯಿಂದ ತರಕಾರಿ ಹಾಗೂ ಹಣ್ಣು ಮಾರಾಟ ಮಳಿಗೆ ಆರಂಭಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು.

ನಗರದ ಬಾಲರಾಜ್‌ ಅರಸ್‌ ರಸ್ತೆಯಲ್ಲಿನ ಹಾಪ್‌ ಕಾಮ್ಸ್‌ ಕಚೇರಿಯಲ್ಲಿ ಶನಿವಾರ ಹಾಪ್‌ಕಾಮ್ಸ್‌ ಮತ್ತುಎಪಿಎಂಸಿ ಸದಸ್ಯರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈಗ ನಗರದ ವಿವಿಧ ಬಡಾವಣೆಗಳಲ್ಲಿ 15 ಹಾಪ್‌ ಕಾಮ್ಸ್‌ ಮಳಿಗೆಗಳು ಕಾರ್ಯ ನಿರ್ವಹಿಸುತ್ತಿವೆ. ಇನ್ನು 20 ವಾರ್ಡುಗಳಲ್ಲಿ ಹಾಪ್‌ಕಾಮ್ಸ್‌ ಮಳಿಗೆ ತೆರೆಯಲು ಚಿಂತನೆ ನಡೆಸಲಾಗಿದೆ. ಹಾಪ್‌ಕಾಮ್ಸ್ ಮಳಿಗೆ ತೆರೆಯಲು ಸಾಕಷ್ಟು ಜನ ಮುಂದೆ ಬಂದಿದ್ದಾರೆ. ಆದರೆ ಅವರಿಗೆ ಸ್ಥಳದ ಅವಶ್ಯಕತೆ ಇದೆ. ಹೀಗಾಗಿ ಸೂಕ್ತ ಸ್ಥಳ ನೀಡುವಂತೆ ನಗರ ಪಾಲಿಕೆಗೆ ತಿಳಿಸಲಾಗಿದೆ ಎಂದರು.

ನಗರ ಪಾಲಿಕೆ ವ್ಯಾಪ್ತಿಯಲ್ಲಿನ ಎಲ್ಲಾ ವಾರ್ಡ್‌ಗಳಲ್ಲಿ ಹಾಪ್‌ಕಾಮ್ಸ್‌ ತರಕಾರಿ ಮತ್ತು ಹಣ್ಣು ಮಾರಾಟ ಮಳಿಗೆ ಆರಂಭಗೊಂಡರೆ ನಾಗರಿಕರಿಗೆ ಗುಣಮಟ್ಟದ ತರಕಾರಿ ಹಾಗೂ ಹಣ್ಣು ಲಭ್ಯವಾಗಲಿದೆ. ಅಲ್ಲದೆ ನಿಗದಿಪಡಿಸಿದ ದರಕ್ಕೆ ಹಣ್ಣು ಮತ್ತು ತರಕಾರಿ ದೊರಕಲಿದೆ. ಈ ನಿಟ್ಟಿನಲ್ಲಿ ಕ್ರಮ ವಹಿಸಲಾಗಿದೆ. ಕೊರೊನಾ ವೈರಸ್‌ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರ ಲಾಕ್‌ಡೌನ್‌ ಘೋಷಿಸಿರುವುದರಿಂದ ನಾಗರಿಕರಿಗೆ ತರಕಾರಿ ಹಾಗೂ ಹಣ್ಣು ಕೊಳ್ಳುವುದಕ್ಕೆ ತೊಂದರೆ ಆಗದಂತೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಹಾಪ್‌ಕಾಮ್ಸ್‌ ವತಿಯಿಂದ ತರಕಾರಿ ಹಾಗೂ ಹಣ್ಣು ಮಾರಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ತಿಳಿಸಿದರು.

ಹಾಪ್‌ಕಾಮ್ಸ್‌ ವತಿಯಿಂದ 20 ವಾಹನಗಳಲ್ಲಿ ತರಕಾರಿ ಮಾರಾಟ ನಡೆಯುತ್ತಿದೆ. ಅಲ್ಲದೇ ಪಾಲಿಕೆ ವತಿಯಿಂದಲೂ 32ಕ್ಕೂ ಹೆಚ್ಚು ತಳ್ಳುಗಾಡಿಗಳಿಗೆ ತರಕಾರಿ ಮಾರಾಟ ಮಾಡುವುದಕ್ಕೆ ಅವಕಾಶ ನೀಡಲಾಗಿದೆ. ಇನ್ನಷ್ಟು ವಾಹನಗಳಲ್ಲಿ ತರಕಾರಿ ಮಾರಾಟ ಮಾಡಬೇಕೆಂಬ ಬೇಡಿಕೆ ಬಂದಿರುವ ಹಿನ್ನೆಲೆಯಲ್ಲಿ ಅದನ್ನು ಪರಿಶೀಲಿಸುವಂತೆ ಸೂಚನೆ ನೀಡಲಾಗಿದೆ ಎಂದರು.

ಈಗ ತರಕಾರಿ ಮತ್ತು ಹಣ್ಣು ಮಾರಾಟ ಮಾಡುತ್ತಿರುವ ವಾಹನ ಹಾಗೂ ತಳ್ಳುಗಾಡಿಗಳಲ್ಲಿ ವ್ಯವಹಾರ ಮಾಡುವ ನಾಗರಿಕರು ನಗದು ರೂಪದಲ್ಲಿ ವ್ಯವಹಾರ ಮಾಡಬೇಕಿದೆ. ಹಾಗಾಗಿ ಪೇಟಿಎಂ, ಫೋನ್‌ ಪೇ, ಗೂಗಲ್‌ ಪೇ ಮುಂತಾದ ಆ್ಯಪ್‌ ಮೂಲಕ ನಗದು ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು ಸಲಹೆ ಕೇಳಿಬಂದಿದೆ. ಮುಂದಿನ ದಿನದಲ್ಲಿ ಈ ಸಲಹೆಯನ್ನು ಪರಿಗಣಿಸಲಾಗುವುದು ಎಂದರು.

ಕೂಲಿ ಕಾರ್ಮಿಕರಿಗೆ, ಬಡಜನರಿಗೆ ತೊಂದರೆ ಉಂಟಾಗಬಾರದು ಎಂಬ ಉದ್ದೇಶದಿಂದ ಎರಡು ತಿಂಗಳಿಗಾಗುವಷ್ಟು ದವಸ ಧಾನ್ಯಗಳನ್ನು ಕೊಡುವ ತೀರ್ಮಾನ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಬಿಸಿ ಊಟದ ಬದಲು ಅವರ ಮನೆಗೆ ದವಸ ಧಾನ್ಯ ತಲುಪಿಸುವ ವ್ಯವಸ್ಥೆ ಕೈಗೊಳ್ಳಲಾಗುತ್ತಿದೆ ಎಂದರು

ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್‌, ಮಹಾನಗರ ಪಾಲಿಕೆ ಆಡಳಿತ ಪಕ್ಷ ನಾಯಕ ಎಸ್‌.ಎನ್‌. ಚನ್ನಬಸಪ್ಪ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.