ಭಾರತದಿಂದ ಔಷಧ ಕೋರಿದ ಅಮೆರಿಕ
Team Udayavani, Apr 6, 2020, 1:40 AM IST
ಕೋವಿಡ್ 19 ವೈರಸ್ ಮೇಲೆ ಯುದ್ಧ ಸಾರಲು ಅಮೆರಿಕದ ಬತ್ತಳಿಕೆಯಲ್ಲಿ ಅಸ್ತ್ರಗಳೇ ಉಳಿದಿಲ್ಲ. ಬೇರೆ ದಾರಿ ಇಲ್ಲದೆ ಇದೀಗ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತದಿಂದ ಹೈಡ್ರೋಕ್ಸಿಕ್ಲೋರೋಕ್ವಿನ್ ಔಷಧವನ್ನು ಆಮದು ಮಾಡಿಕೊಳ್ಳಲು ಮುಂದಾಗಿದ್ದಾರೆ.
ಹೈಡ್ರೋಕ್ಸಿಕ್ಲೋರೋಕ್ವಿನ್ ಎನ್ನುವುದು ಮಲೇರಿಯಾಕ್ಕೆ ನೀಡಲಾಗುವ ಔಷಧಿ. ಆದರೆ, ಈಗ ತಾತ್ಕಾಲಿಕವಾಗಿ ಕೋವಿಡ್ 19 ವೈರಸ್ ನಿಯಂತ್ರಣಕ್ಕೆ, ಸೋಂಕಿತನಿಗೆ ಹೈಡ್ರೋಕ್ಸಿಕ್ಲೋರೋಕ್ವಿನ್ ಅನ್ನೇ ನೀಡಲಾಗುತ್ತಿದೆ. ಇದು ತಕ್ಕಮಟ್ಟಿಗೆ ಯಶಸ್ಸು ಕೂಡ ಕಂಡಿದೆ. ಇತ್ತೀಚೆಗೆ ಭಾರತ, ಅಮೆರಿಕಕ್ಕೆ ಈ ಔಷಧ ರಫ್ತನ್ನು ನಿಲ್ಲಿಸಿತ್ತು. ಈಗ ಸ್ವತಃ ಟ್ರಂಪ್ ಅವರೇ, ಹೈಡ್ರೋಕ್ಸಿಕ್ಲೋರೋಕ್ವಿನ್ ಅನ್ನು ಕೂಡಲೇ ಕಳಿಸಿಕೊಡುವ ಬಗ್ಗೆ ಪ್ರಧಾನಿ ಮೋದಿ ಅವರಲ್ಲಿ ಮನವಿ ಮಾಡಿದ್ದಾರೆ.
ಕೋವಿಡ್ 19 ಮಹಾಮಾರಿಗೆ ಔಷಧಿ ಕಂಡುಹಿಡಿಯುವ ಪ್ರಯತ್ನಗಳು ಯಶಸ್ಸು ಕಾಣುತ್ತಿಲ್ಲ. ಸದ್ಯ ನಮಗೆ ಹೈಡ್ರೋಕ್ಸಿ ಕ್ಲೋರೋಕ್ವಿನ್ ಒಂದೇ ದಾರಿ. ಈ ಬಗ್ಗೆ ವೈದ್ಯರಲ್ಲಿಯೂ ಚರ್ಚಿಸಿದ್ದೇನೆ. ಭಾರತದ ಬಳಿ ಹೈಡ್ರೋಕ್ಸಿಕ್ಲೋರೋಕ್ವಿನ್ ಔಷಧ ಸಂಗ್ರಹ ಸಾಕಷ್ಟಿದೆ. ಭಾರತದಿಂದ ಮಾನವೀಯ ನೆರವನ್ನು ಬಯಸಿದ್ದೇವೆ’ ಎಂದಿದ್ದಾರೆ. ಜತೆಗೆ, ಆರೋಗ್ಯ ಬಿಕ್ಕಟ್ಟಿನ ಈ ಸಂದರ್ಭದಲ್ಲಿ ಯೋಗ ಮತ್ತು ಆಯುರ್ವೇದವು ಜನರ ಶಾರೀರಿಕ ಮತ್ತು ಮಾನಸಿಕ ಕ್ಷೇಮಾಭಿವೃದ್ಧಿಗೆ ಹೇಗೆ ಉಪಕಾರಿ ಎಂಬ ಕುರಿತೂ ಚರ್ಚಿಸಿದ್ದಾರೆ ಎಂದು ಶ್ವೇತ ಭವನ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
New York: ಅಮೆರಿಕದಲ್ಲಿ ಶೂಟೌಟ್: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ
Moscow: ಕೆಮಿಕಲ್ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.