ತ್ಯಾಜ್ಯ ಸಂಸ್ಕರಣ ಘಟಕ ಸ್ಥಳಾಂತರಕ್ಕೆ ಆಗ್ರಹ

Team Udayavani, Apr 7, 2020, 2:01 PM IST

ತ್ಯಾಜ್ಯ ಸಂಸ್ಕರಣ ಘಟಕ ಸ್ಥಳಾಂತರಕ್ಕೆ ಆಗ್ರಹ

ಶಿಡ್ಲಘಟ್ಟ: ತಾಲೂಕಿನ ಹಿತ್ತಲಹಳ್ಳಿಯ ಸಮೀಪದ ತ್ಯಾಜ್ಯ ಸಂಸ್ಕರಣ ಘಟಕದಲ್ಲಿ ಭಾನುವಾರ ರಾತ್ರಿ ಬೆಂಕಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಗ್ರಾಮಸ್ಥರು ತ್ಯಾಜ್ಯ ಘಟಕದ ಮುಂದೆ ಧರಣಿ ನಡೆಸಿ ಪ್ರತಿಭಟನೆ ನಡೆಸಿದರು.

ನಗರಸಭೆಯ ವ್ಯಾಪ್ತಿಯಲ್ಲಿರುವ ವಿವಿಧ ವಾರ್ಡ್‌ಗಳಲ್ಲಿ ಸಂಗ್ರಹಿಸುವ ತ್ಯಾಜ್ಯ ಮತ್ತು ಗಲೀಜು ವಸ್ತುಗಳನ್ನು ಇಲ್ಲಿ ಸುರಿಯುತ್ತಿರುವುದರಿಂದ ದುರ್ವಾಸನೆ ಮತ್ತು ನೊಣಗಳ ಹಾವಳಿಯಿಂದ ರೇಷ್ಮೆ ಬೆಳೆಗಾರರು ಸಂಕಷ್ಟದಲ್ಲಿ ಸಿಲುಕುವಂತಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರ ಈಗಾಗಲೇ ಹಿತ್ತಲಹಳ್ಳಿ ಗ್ರಾಮವನ್ನು ರೇಷ್ಮೆ ಬೆಳೆಗಾರರ ಗ್ರಾಮವೆಂದು ಘೋಷಣೆ ಮಾಡಿದೆ. ಆದರೆ ಉದ್ಯಾನವನ ಮಾಡುತ್ತೇವೆ ಎಂದು ಭರವಸೆ ನೀಡಿದ ನಗರಸಭೆ ಅಧಿಕಾರಿಗಳು ತ್ಯಾಜ್ಯ ಸಂಸ್ಕರಣ ಘಟಕ ಮಾಡಿ ಜನರ ಆರೋಗ್ಯದೊಂದಿಗೆ ಚೆಲ್ಲಾಟ ಆಡುತ್ತಿದ್ದಾರೆ. ಕೂಡಲೇ ಈ ಘಟಕವನ್ನು ಬೇರೆಡೆಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಶಾಸಕ ವಿ.ಮುನಿಯಪ್ಪ, ತಹಶೀಲ್ದಾರ್‌ ಕೆ.ಅರುಂಧತಿ ಹಾಗೂ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಣುಕಾ ತ್ಯಾಜ್ಯ ಸಂಸ್ಕರಣಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಶಾಸಕ ವಿ.ಮುನಿಯಪ್ಪ ಮಾತನಾಡಿ, ಜಿಲ್ಲಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದರು.

ಘಟಕದಲ್ಲಿ ಬೆಂಕಿ ಬಿದ್ದಿದೆ, ಘಟಕ ಸ್ಥಳಾಂತರಿಸಲು ಹೋರಾಟ ನಡೆಸುತ್ತಿದ್ದೇವೆ. ನೀವು ಯಾಕೆ ತ್ಯಾಜ್ಯ ತುಂಬಿಕೊಂಡು ಬಂದಿದ್ದೀರಿ ಎಂದು ನಗರಸಭೆಯ ಕಸ ತುಂಬಿಕೊಂಡು ಬಂದಿದ್ದ ಟ್ರ್ಯಾಕ್ಟರ್‌ಗಳನ್ನು ಗ್ರಾಮಸ್ಥರು ವಾಪಸ್ಸು ಕಳುಹಿಸಿದರು.

ನಗರಸಭೆಯ ಪೌರಾಯುಕ್ತ ತ್ಯಾಗರಾಜ್‌, ರೈತ ಸಂಘ ಹಾಗೂ ಹಸಿರುಸೇನೆಯ ರಾಜ್ಯ ಪ್ರಧಾನ ಕಾರ್ಯ ದರ್ಶಿ ಭಕ್ತರಹಳ್ಳಿ ಭೈರೇಗೌಡ, ಹಿತ್ತಲಹಳ್ಳಿ ಗೋಪಾಲ ಗೌಡ, ತಾಲೂಕು ಅಧ್ಯಕ್ಷ ತಾದೂರು ಮಂಜುನಾಥ್‌, ಬೆಳ್ಳೂಟಿ ಮುನಿಕೆಂಪಣ್ಣ, ಭಕ್ತರಹಳ್ಳಿ ಪ್ರತೀಶ್‌, ಯುವ ಮುಖಂಡ ಬೆಳ್ಳೂಟಿ ಸಂತೋಷ, ನಿರಂಜನ್‌, ಎಪಿಎಂಸಿ ಉಪಾಧ್ಯಕ್ಷ ಬೆಳ್ಳೂಟಿ ವೆಂಕಟೇಶ್‌ ಇದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.