ಕೊರೊನಾ ಭೀತಿಯಲ್ಲಿ ನೀರಿನ ಸಮಸ್ಯೆಯಾಗದಿರಲಿ
Team Udayavani, Apr 7, 2020, 3:07 PM IST
ಕುಷ್ಟಗಿ: ಶಾಸಕ ಅಮರೇಗೌಡ ಪಾಟೀಲ ಬಯ್ನಾಪೂರ ಅಧ್ಯಕ್ಷತೆಯಲ್ಲಿ ಕೊರೊನಾ ಜಾಗೃತಿ ಹಾಗೂ ನೀರಿನ ಸಮಸ್ಯೆ ನಿರ್ವಹಣೆ ಸಭೆ ನಡೆಯಿತು.
ಕುಷ್ಟಗಿ: ಕೊರೊನಾ ವೈರಸ್ ಭೀತಿಯ ಸಂಕಷ್ಟದ ಪರಿಸ್ಥಿತಿಯಲ್ಲಿ ಬೇಸಿಗೆಯ ಕುಡಿಯುವ ನೀರಿನ ಸಮಸ್ಯೆ ನಿಭಾಯಿಸಲು ಖಾಸಗಿ ಕೊಳವೆಬಾವಿಗಳಿಂದ ನೀರು
ಪೂರೈಸುವುದು ಮೊದಲಾದ್ಯತೆಯಾಗಿರಬೇಕು ಎಂದು ಶಾಸಕ ಅಮರೇಗೌಡ ಪಾಟೀಲ ಬಯ್ನಾಪೂರ ಹೇಳಿದರು.
ಇಲ್ಲಿನ ತಾಪಂ ಸಭಾಂಗಣದಲ್ಲಿ ಕೊರೊನಾ ವೈರಸ್ ಜಾಗೃತಿ ಹಾಗೂ ಬೇಸಿಗೆಯಲ್ಲಿ ಕುಡಿಯುವ ನೀರಿನ ಕುರಿತು ನಡೆದ ತುರ್ತುಸಭೆಯಲ್ಲಿ ಗ್ರಾಪಂ ಪಿಡಿಒಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಬೇಸಿಗೆ ಆರಂಭವಾಗಿದ್ದು, ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಿಕೊಂಡು ಸಮಸ್ಯೆ ನಿಭಾಯಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು.
ಸ್ವಯಂ ಸೇವೆ: ಕೊರೊನಾ ವೈರಸ್ ಸಮುದಾಯಿಕವಾಗಿ ಹರಡದಂತೆ ಗ್ರಾಪಂ ಪಿಡಿಒ ಸ್ವಯಂ ಸೇವೆ ಎಂದು ಕಾರ್ಯ
ನಿರ್ವಹಿಸಬೇಕಿದೆ. ಹೊರ ಜಿಲ್ಲೆ, ರಾಜ್ಯಗಳಿಂದ ವಲಸೆ ಹೋಗಿ ಸ್ವಗ್ರಾಮಕ್ಕೆ ವಾಪಸ್ಸಾದವರು, ವಿದೇಶದಿಂದ ಸ್ವಗ್ರಾಮಕ್ಕೆ ಬಂದವರು ಗ್ರಾಮಗಳಲ್ಲಿ ಅನಗತ್ಯವಾಗಿ ಸಂಚರಿಸದಂತೆ ನಿಗಾವಹಿಸಬೇಕು. ಪ್ರತಿ ಗ್ರಾಮಗಳಲ್ಲೂ ಸ್ವತ್ಛತೆ ಮುಖ್ಯವಾಗಿದ್ದು, ಚರಂಡಿಗಳಲ್ಲಿ ಕ್ರಿಮಿನಾಶಕವನ್ನು ರೈತರು ಬಳಸುವ
ಸ್ಪ್ರೆಯರ್‌ದಿಂದ ಬಳಸಿದರೆ ಪರಿಣಾಮಕಾರಿ. ಸದ್ಯದ ಕೊರೊನಾ ಪರಿಸ್ಥಿತಿಯಲ್ಲಿ ಸಭೆ ಜಿಪಂ ಸಿಇಒ ಸಭೆ ಕರೆಯುವುದು ಸಾದ್ಯತೆ ಕಡಿಮೆ. ಹೀಗಾಗಿ ಕುಡಿಯುವ ನಿರಿನ ಸಮಸ್ಯೆ ನಿರ್ವಹಣೆಗಾಗಿ ಪ್ರತ್ಯೇಕವಾಗಿ ತಾಲೂಕಿನ 7 ಜಿಪಂ ಸದಸ್ಯರ ಸಭೆ ಆಯೋಜಿಸಿ ಬಳಕೆಯಾಗದ ಅನುದಾನವನ್ನು ಬಳಸಿಕೊಂಡರೆ ಈಗಿನ ಪರಿಸ್ಥಿತಿಯಲ್ಲಿ ಪ್ರತಿ ಗ್ರಾಪಂಗೆ 50 ಸಾವಿರ ರೂ. ಹಂಚಿಕೆಯಾದರೂ ಎಷ್ಟೋ ಅನುಕೂಲವಾಗಲಿದೆ. ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಅಗತ್ಯ
ಕ್ರಮಗಳನ್ನು ಕೈಗೊಳ್ಳಲು ಸಾದ್ಯವಾಗುತ್ತದೆ ಎಂದರು.
ಜಿಪಂ ಸದಸ್ಯರಾದ ಕೆ. ಮಹೇಶ, ಭೀಮಣ್ಣ ಅಗಸಿಮುಂದಿನ, ಹನುಮಗೌಡ ಪಾಟೀಲ, ತಾಪಂ ಇಒ ಕೆ. ತಿಮ್ಮಪ್ಪ, ನರೇಗಾ ಸಹಾಯಕ ನಿರ್ದೇಶಕ ಅರುಣಕುಮಾರ ದಳವಾಯಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.