ಪಡಿತರಕ್ಕೆ ಮುಗಿಬಿದ್ದ ಫಲಾನುಭವಿಗಳು-ಆತಂಕ
Team Udayavani, Apr 7, 2020, 3:58 PM IST
ಸೈದಾಪುರ: ಪಡಿತರಕ್ಕಾಗಿ ಮುಗಿಬಿದ್ದ ಫಲಾನುಭವಿಗಳು
ಸೈದಾಪುರ: ಕೊರೊನಾ ಸೋಂಕು ನಿಯಂತ್ರಿಣಕ್ಕೆ ಸರ್ಕಾರ ಲಾಕ್‌ಡೌನ್ ಜಾರಿಗೊಳಿಸಿದೆ. ಅದರಂತೆಯೇ ಸಾಮಾಜಿಕ
ಅಂತರ ಕಾಯ್ದುಕೊಳ್ಳುವಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದ್ದರೂ ಕೂಡ ಸಾಮಾಜಿಕ ಅಂತರ ಕಾಯುಕೊಳ್ಳದೇ ಪಡಿತರಕ್ಕೆ ಜನ ಮುಗಿ ಬಿದ್ದಿರುವುದು ಆತಂಕ ಸೃಷ್ಟಿಸಿದೆ. ಪಟ್ಟಣದ ನ್ಯಾಯಬೆಲೆ ಅಂಗಡಿಯಲ್ಲಿ ಫಲಾನುಭವಿಗಳು ಮುಗಿಬಿದ್ದು, ಆಹಾರ ಧಾನ್ಯ ಪಡೆಯುತ್ತಿದ್ದಾರೆ. ಹೀಗಾಗಿ ಇಲ್ಲಿನ ನ್ಯಾಯಬೆಲೆ ಅಂಗಡಿಗಳಲ್ಲಿ ಲಾಕ್‌ಡೌನ್ ಆದೇಶ, ಸಾಮಾಜಿಕ ಅಂತರ ಪಾಲನೆಯಾಗುತ್ತಿಲ್ಲ. ಹೀಗಾಗಿ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಕೊರೊನಾ ಭೀತಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬಿಪಿಎಲ್ ಪಡಿತರ ಪ್ರತಿ ಸದಸ್ಯರಿಗೆ ಎರಡು ತಿಂಗಳಿಗೆ 10 ಕೆ.ಜಿ ಅಕ್ಕಿ, ಕಾರ್ಡ್‌ಗೆ 4
ಕೆ.ಜಿ ಗೋ ದಿ, ಅಂತ್ಯೋದಯ ಪಡಿತರರಿಗೆ 70 ಕೆ.ಜಿ ಅಕ್ಕಿ ಉಚಿತವಾಗಿ ನೀಡಲು ಆದೇಶಿಸಿದೆ. ಆದರೆ ತಾಲೂಕಾಡಳಿತ ಫಲಾನುಭವಿಗಳಿಗೆ ಆಹಾರ ಧಾನ್ಯಗಳನ್ನು ಸಾಮಾಜಿಕ ಅಂತರ ಕಾಯ್ದುಗೊಂಡು ಪೂರೈಸುವಂತೆ ತಿಳಿಸಿದ್ದರೂ ಆದೇಶ ಪಾಲನೆಯಾಗುತ್ತಿಲ್ಲ. ಹೀಗಾಗಿ ಫಲಾನುಭವಿಗಳು ಮುಗಿಬಿದ್ದು ಆಹಾರ ಧಾನ್ಯಗಳನ್ನು ಪಡೆಯುತ್ತಿರುವುದು ಕಂಡುಬಂತು. ಈ ವೇಳೆ ಪೊಲೀಸರು ಸ್ಥಳಕ್ಕಾಗಮಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ತಿಳಿಸಿದರೂ ಜನ ಮಾತ್ರ ಕ್ಯಾರೆ ಎನ್ನುತ್ತಿಲ್ಲ. ಇದರಿಂದ ಪೊಲೀಸರು ಪಡಿತರ ವಿತರಣೆ ತಾತ್ಕಾಲಿಕವಾಗಿ ಬಂದ್ ಮಾಡಿ ದಿನಕ್ಕೆ ಇಂತಿಷ್ಟು ಜನ ಆಗಮಿಸಬೇಕೆಂದು ಆದೇಶಿಸಿದ ನಂತರ
ಜನರು ಸ್ಥಳದಿಂದ ತೆರಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.