ಮಾರಕ ವೈರಸ್ ಸೃಷ್ಟಿಸಿ ಚೀನಾಗೆ ಮಾರಿದರೇ ಹಾರ್ವರ್ಡ್ ವಿ.ವಿ. ಪ್ರೊಫೆಸರ್?
ಕೋವಿಡ್ ಸುಳ್ಳು
Team Udayavani, Apr 7, 2020, 11:45 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕೋವಿಡ್ 19 ವೈರಸ್ ವ್ಯಾಪಿಸುತ್ತಿರುವಷ್ಟೇ ವೇಗದಲ್ಲಿ ಅದರ ಕುರಿತಾದ ಸುಳ್ಳು ಸುದ್ದಿಗಳೂ ವ್ಯಾಪಿಸುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬುತ್ತಿರುವ ಸುದ್ದಿಗಳ ಸತ್ಯ ದರ್ಶನ ಇಲ್ಲಿದೆ.
ವಿಶ್ವವನ್ನೇ ತಲ್ಲಣಗೊಳಿಸುತ್ತಿರುವ ಕೋವಿಡ್ 19 ವೈರಸ್ ಅನ್ನು ಸೃಷ್ಟಿಸಿ, ಚೀನಗೆ ಮಾರಾಟ ಮಾಡಿದ್ದರು ಎಂಬ ಆರೋಪದ ಮೇರೆಗೆ ಹಾರ್ವರ್ಡ್ ವಿವಿ ಪ್ರೊಫೆಸರ್ ಪ್ರೊ. ಚಾರ್ಲ್ಸ್ ಲೀಬರ್ ಎಂಬುವರನ್ನು ಅಮೆರಿಕದ ಅಧಿಕಾರಿಗಳು ಬಂಧಿಸಿದ್ದಾರೆ ಎಂಬ ಸುದ್ದಿಯೊಂದು ಅಮೆರಿಕ ಸೇರಿದಂತೆ ಹಲವು ದೇಶಗಳಲ್ಲಿ ವೈರಲ್ ಆಗುತ್ತಿದೆ. ಆದರೆ, ಇದೊಂದು ಸುಳ್ಳು ಸುದ್ದಿ ಎಂಬುದನ್ನು ಪತ್ತೆ ಹಚ್ಚಲಾಗಿದೆ.
ಪ್ರೊ. ಚಾರ್ಲ್ಸ್ ರನ್ನು ಅಮೆರಿಕದ ಪೊಲೀಸರು ಬಂಧಿಸಿದ್ದು 2020ರ ಜನವರಿ ತಿಂಗಳಲ್ಲಿ. ಚೀನದಿಂದ ಅವರು ಹಣಕಾಸು ನೆರವು ಪಡೆದಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿ ಸುಳ್ಳು ಮಾಹಿತಿ ನೀಡಿದ್ದಕ್ಕಾಗಿ ಅವರನ್ನು ಬಂಧಿಸಲಾಗಿತ್ತು.
ಆದರೆ, ಅವರ ವಿರುದ್ಧ ಬೇಹುಗಾರಿಕೆಯಾಗಲೀ ಅಥವಾ ಚೀನಗೆ ಸೂಕ್ಷ್ಮಮಾಹಿತಿ ರವಾನಿಸಿದ ಆರೋಪವಾಗಲೀ ಇಲ್ಲ. ಅಷ್ಟೇ ಅಲ್ಲ, ಆ ಪ್ರೊಫೆಸರ್‌ಗೆ ಕೋವಿಡ್ 19 ವೈರಸ್ ಗೂ ಯಾವುದೇ ಸಂಬಂಧವೂ ಇಲ್ಲ.
ಚೀನದಿಂದ ಹಣ ಪಡೆದಿರುವ ವಿಚಾರವನ್ನು ಮುಚ್ಚಿಟ್ಟಿರುವುದು ಮಾತ್ರವೇ ಅವರ ವಿರುದ್ಧ ಇರುವ ಆರೋಪವಾಗಿದೆಯೇ ಹೊರತು, ಕೋವಿಡ್ 19ಗೂ ಅವರಿಗೂ ಲಿಂಕ್ ಇಲ್ಲ ಎಂದು ಸ್ವತಃ ಅಮೆರಿಕದ ಅಧಿಕಾರಿಗಳೇ ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.