ಅಗತ್ಯ ರಾಷ್ಟ್ರಗಳಿಗೆ ಮಲೇರಿಯಾ ಔಷಧ ; ಸಂಕಷ್ಟದಲ್ಲಿರುವ ದೇಶಗಳ ಕೈಹಿಡಿದ ಭಾರತ

Team Udayavani, Apr 8, 2020, 5:25 AM IST

ಅಗತ್ಯ ರಾಷ್ಟ್ರಗಳಿಗೆ ಮಲೇರಿಯಾ ಔಷಧ ; ಸಂಕಷ್ಟದಲ್ಲಿರುವ ದೇಶಗಳ ಕೈಹಿಡಿದ ಭಾರತ

ಮಲೇರಿಯಾ ಔಷಧ ಸೇರಿದಂತೆ 14 ಔಷಧಗಳ ಮೇಲೆ ಭಾರತ, ರಫ್ತು ನಿರ್ಬಂಧವನ್ನು ತೆರವುಗೊಳಿಸಿದೆ. ಕೋವಿಡ್ ನಿಂದ ಸಂಕಷ್ಟದಲ್ಲಿರುವ ದೇಶಗಳ ಕೈಹಿಡಿಯಲು, ಆದ್ಯತೆಯ ಮೇರೆಗೆ ಮಲೇರಿಯಾ ಔಷಧ ಹೈಡ್ರೋಕ್ಸಿಕ್ಲೋರೋಕ್ವಿನ್‌ ಮಾತ್ರೆಗಳನ್ನು ಪೂರೈಸಲು ನಿರ್ಧರಿಸಿದೆ.

ಕೋವಿಡ್ ಗೆ ಮಲೇರಿಯಾಕ್ಕೆ ನೀಡುವ ಹೈಡ್ರೋಕ್ಸಿಕ್ಲೋರೋಕ್ವಿನ್‌ ಮಾತ್ರೆಗಳೇ ಮದ್ದು ಎಂದು ಸಂಶೋಧನೆಯಿಂದ ಗೊತ್ತಾದ ತಕ್ಷಣ, ಭಾರತ ಮಾರ್ಚ್‌ ಮೂರನೇ ವಾರದಲ್ಲಿಯೇ ಅದರ ಅಂತಾರಾಷ್ಟ್ರೀಯ ರಫ್ತಿಗೆ ನಿರ್ಬಂಧ ಹೇರಿತ್ತು.

ಇನ್ನೊಂದೆಡೆ ಸೋಂಕು ತೀವ್ರಗೊಂಡಾಗ, ಸ್ವತಃ ಅಮೆರಿಕವೇ ಈ ಔಷಧ ಕಳುಹಿಸಿಕೊಡುವಂತೆ ಭಾರತಕ್ಕೆ ದುಂಬಾಲು ಬಿದ್ದಿತ್ತು. ಕೇಂದ್ರ ಸರಕಾರ ರಫ್ತು ನಿರ್ಬಂಧ ತೆರವುಗೊಳಿಸದೇ ಇದ್ದಿದ್ದು ಅಮೆರಿಕ ಅಧ್ಯಕ್ಷ ಟ್ರಂಪ್‌ ಅವರ ಅಸಮಾಧಾನಕ್ಕೆ ಕಾರಣವಾಗಿತ್ತು. ಭಾರತದ ಮೇಲೆ ಪ್ರತೀಕಾರ ತೀರಿಸಿಕೊಳ್ಳುವುದಾಗಿಯೂ ಟ್ರಂಪ್‌ ಬೆದರಿಕೆ ಒಡ್ಡಿದ್ದರು.

30 ರಾಷ್ಟ್ರಗಳಿಗೆ ರಫ್ತು: ಆದರೆ, ಭಾರತ ಕೇವಲ ಅಮೆರಿಕವನ್ನು ಮಾತ್ರವೇ ಗಣನೆಗೆ ತೆಗೆದುಕೊಳ್ಳದೆ, ಇಡೀ ವಿಶ್ವ ಸಮುದಾಯಕ್ಕೆ ಸಿಹಿಸುದ್ದಿ ನೀಡಿದೆ. ಆರಂಭದಲ್ಲಿ ಭಾರತವು ಕೋವಿಡ್ ನಿಂದ ತತ್ತರಿಸಿರುವ 30 ರಾಷ್ಟ್ರಗಳಿಗೆ ಮಲೇರಿಯಾ ಔಷಧವನ್ನು ರಫ್ತು ಮಾಡಲು ಮುಂದಾಗಿದೆ.

ಭಾರತವೇ ಬಾಸ್‌: ಭಾರತವು ಮಲೇರಿಯಾಕ್ಕೆ ನೀಡುವ ಹೈಡ್ರೋಕ್ಸಿಕ್ಲೋರೋಕ್ವಿನ್‌ ಔಷಧಗಳ ಬಹುದೊಡ್ಡ ಉತ್ಪಾದಕ ರಾಷ್ಟ್ರ. ದೇಶೀಯ ಬೇಡಿಕೆಗಳಲ್ಲದೆ, ಜಾಗತಿಕ ಬೇಡಿಕೆಗಳಿಗೂ ಸ್ಪಂದಿಸುವಷ್ಟು ಸಾಮರ್ಥ್ಯ ಭಾರತಕ್ಕಿದೆ.

‘ಮಾನವೀಯತೆಯ ಆಧಾರದ ಮೇಲೆ, ಅಗತ್ಯ ರಾಷ್ಟ್ರಗಳಿಗೆ ಮಾತ್ರವೇ ಈ ರಫ್ತುನೀತಿ ಅನ್ವಯಗೊಳ್ಳಲಿದೆ. ಬೇಡಿಕೆಯ ಪರಿಶೀಲನೆಯನ್ನೂ ಸರಕಾರವೇ ಮಾಡುತ್ತದೆ’ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್‌ ಶ್ರೀವಾಸ್ತವ್‌ ಹೇಳಿದ್ದಾರೆ.

ಔಷಧ ಪೂರೈಸುವಂತೆ ಟ್ರಂಪ್‌ ಅಲ್ಲದೆ, ಬ್ರೆಜಿಲ್‌ ಅಧ್ಯಕ್ಷ ಜೈರ್‌ ಬೊಲ್ಸೊನಾರೋ ಅವರಿಂದಲೂ ಮೋದಿ ಅವರಿಗೆ ಕರೆಬಂದಿತ್ತು.

ರಫ್ತಾಗುತ್ತಿರುವ ಔಷಧ
ಹೈಡ್ರೋಕ್ಸಿಕ್ಲೋರೋಕ್ವಿನ್‌, ಪ್ಯಾರಾಸೆಟಮಾಲ್‌, ನಿಯೋಮೈಸಿನ್‌, ಎರಿಥ್ರೋಮೈಸಿನ್‌, ಟಿನಿಡಾಝೋಲ್‌, ಮೆಟ್ರೋನಿಡಝೋಲ್‌, ಅಸಿಕ್ಲೋವಿರ್‌, ವಿಟಮಿನ್‌ ಬಿಎಸ್‌, ಪ್ರೊಜೆಸ್ಟ್ರೋನ್‌- ಮುಂತಾದ ಪ್ರಮುಖ ಔಷಧಗಳು.

ಟಾಪ್ ನ್ಯೂಸ್

Explained: ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

Belagavi: ವರ್ಷದ ಹಿಂದೆ ಪಕ್ಷಕ್ಕೆ ಬರುವಂತೆ ಬಿಜೆಪಿ ಆಹ್ವಾನಿಸಿತ್ತು: ಬಾಬಾಸಾಹೇಬ ಪಾಟೀಲ್

Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

BGT 2024: Gill Injured: Lucky for Kannadiga in third position

BGT 2024: ಗಾಯಗೊಂಡ ಗಿಲ್:‌ ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Putturu-Police

Putturu: ಠಾಣೆ ಮುಂಭಾಗದಲ್ಲಿ ಜನರ ಆಕ್ರೋಶ; ಶಾಸಕ ಅಶೋಕ್‌ ಕುಮಾರ್‌ ರೈ ಭೇಟಿ

Explained: ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

8

Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್

Belagavi: ವರ್ಷದ ಹಿಂದೆ ಪಕ್ಷಕ್ಕೆ ಬರುವಂತೆ ಬಿಜೆಪಿ ಆಹ್ವಾನಿಸಿತ್ತು: ಬಾಬಾಸಾಹೇಬ ಪಾಟೀಲ್

Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.