ದೊಡ್ಡಬಳ್ಳಾಪುರ ಕೃಷಿ ಮಾರುಕಟ್ಟೆಗೆ ಸಚಿವ ಎಸ್ ಟಿ ಸೋಮಶೇಖರ್ ಭೇಟಿ
Team Udayavani, Apr 8, 2020, 10:27 AM IST
ಬೆಂಗಳೂರು: ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಕೃಷಿ ಉತ್ಪನ್ನ ಮಾರುಕಟ್ಟೆಗೆ ಸಚಿವ ಎಸ್.ಟಿ. ಸೋಮಶೇಖರ್ ಅವರು ಬುಧವಾರ ಮುಂಜಾನೆ ಭೇಟಿ ನೀಡಿ ಪರಿಶೀಲಿಸಿದರು. ಕೆಲವು ತುರ್ತು ಕ್ರಮಗಳನ್ನು ತಕ್ಷಣದಿಂದಲೇ ಕೈಗೊಳ್ಳುವಂತೆ ಎಪಿಎಂಸಿ ಅಧಿಕಾರಿಗಳಿಗೆ ಸೂಚಿಸಿದರು.
ಎಪಿಎಂಸಿ ಆವರಣದಲ್ಲಿ ಸ್ವಚ್ಛತೆಗೆ ಆದ್ಯತೆ ಕೊಡಬೇಕು. ಆವರಣದಲ್ಲಿ ಪ್ರತಿದಿನ ಫಾಗಿಂಗ್ ವ್ಯವಸ್ಥೆಯನ್ನು ಮಾಡಬೇಕು. ಶುದ್ಧ ಕುಡಿಯುವ ನೀರಿಗೆ ಆದ್ಯತೆ ಕೊಡಬೇಕು. ಕೋವಿಡ್-19 ವೈರಸ್ ಸಾಂಕ್ರಾಮಿಕ ರೋಗವಾದ್ದರಿಂದ ಜಾಗೃತಿಯ ಅಗತ್ಯವಿದ್ದು, ಧ್ವನಿವರ್ಧಕಗಳ ಮೂಲಕ ರೈತರಿಗೆ ಜಾಗೃತಿ ಮೂಡಿಸುವಂತೆ ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಎಲ್ಲ ಎಪಿಎಂಸಿಯಲ್ಲೂ ಉಚಿತ ಮಾಸ್ಕ್
ಎಲ್ಲ 162 ಎಪಿಎಂಸಿ ವತಿಯಿಂದ ಉಚಿತ ಸ್ಯಾನಿಟೇಸೇಶನ್ ಹಾಗೂ ಮಾಸ್ಕ್ ಗಳನ್ನು ವಿತರಣೆ ಮಾಡಬೇಕು. ಈ ಕ್ಷಣದಿಂದಲೇ ಇದು ಜಾರಿಗೆ ಬರಬೇಕು ಎಂದು ಸಚಿವರು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ರೈತರು, ಎಪಿಎಂಸಿ ವರ್ತಕರ ಜೊತೆ ಸಮಾಲೋಚನೆ ನಡೆಸಿದ ಸಚಿವರು, ಅವರ ಅಹವಾಲುಗಳನ್ನು ಆಲಿಸಿದರು.
ಬೆಂಗಳೂರು ಎರ್ ಪೋರ್ಟ್ ರಸ್ತೇಲಿ ಹೂವಿನ ಮಾರ್ಕೆಟ್
ಹೂವಿನ ಮಾರುಕಟ್ಟೆ ಸಮಸ್ಯೆ ಬಗ್ಗೆ ಸಚಿವರ ಗಮನಕ್ಕೆ ತಂದಾಗ ಸ್ಪಂದಿಸಿದ ಸಚಿವರು, ಬೆಂಗಳೂರು ಎರ್ ಪೋರ್ಟ್ ರಸ್ತೆಯಲ್ಲಿ ನಿರ್ಮಾಣಕ್ಕೆ ಸರ್ಕಾರ ಕ್ರಮ ವಹಿಸಿದೆ ಎಂದು ತಿಳಿಸಿದರು. ಅಲ್ಲದೆ, ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸರ್ಕಾರ ಮತ್ತು ಮುಖ್ಯಮಂತ್ರಿಗಳು ಸದಾ ಸಿದ್ಧ ಎಂದು ಮಾನ್ಯ ಸಚಿವರು ಭರವಸೆ ನೀಡಿದರು.
ಯಾರೂ ಸಹ ಹಸಿವಿನಿಂದ ಇರಬಾರದು ಎಂಬುದು ಸರ್ಕಾರದ ಉದ್ದೇಶವಾಗಿದ್ದು, ಮುಖ್ಯಮಂತ್ರಿಗಳು ಈ ಬಗ್ಗೆ ಸಚಿವರಿಗೆ ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪ್ರತಿ ಜಿಲ್ಲೆಗಳಿಗೆ 20ರಿಂದ 25 ಸಾವಿರ ಆಹಾರ ಕಿಟ್ ಗಳನ್ನು ಕೂಲಿಕಾರ್ಮಿಕರಿಗೆ ಒದಗಿಸಲು ಮುಖ್ಯಮಂತ್ರಿಗಳು ಮತ್ತು ಕಾರ್ಮಿಕ ಸಚಿವರು ಈಗಾಗಲೇ ಕ್ರಮ ಕೈಗೊಂಡಿದ್ದಾರೆ ಎಂದು ಸಚಿವರು ತಿಳಿಸಿದರು. ಇದೇ ವೇಳೆ ರೈತರು, ವರ್ತಕರು ಹಾಗೂ ಅಧಿಕಾರಿಗಳಿಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಪ್ರಮಾಣವನ್ನು ಮಾಡಿಸಿದರು.
ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ಶಾಸಕರಾದ ಟಿ. ವೆಂಕಟರಮಣಯ್ಯ, ಎಪಿಎಂಸಿ ನಿರ್ದೇಶಕರಾದ ಕರೀಗೌಡ, ಜಿಲ್ಲಾಧಿಕಾರಿಗಳಾದ ಡಾ.ರವೀಂದ್ರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.