ವಿಶ್ವ ಆರೋಗ್ಯ ಸಂಸ್ಥೆಯ ಜಾಗತಿಕ ಅಭಿಯಾನಕ್ಕೆ ಭಾರತದ ಎರಡು ಫುಟ್ ಬಾಲ್ ಕ್ಲಬ್
Team Udayavani, Apr 8, 2020, 11:58 AM IST
ನವದೆಹಲಿ: ಭಾರತದ ಎರಡು ಪ್ರಮುಖ ಫುಟ್ ಬಾಲ್ ಕ್ಲಬ್‌ಗಳಾದ ಮೋಹನ್ ಬಗಾನ್ ಮತ್ತು ಈಸ್ಟ್ ಬೆಂಗಾಲ್ ಯುನೈಟೆಡ್ ನೇಶನ್ಸ್ ಮತ್ತು ವಿಶ್ವ ಆರೋಗ್ಯ ಸಂಸ್ಥೆಯು ಆಯೋಜಿಸುತ್ತಿರುವ ಜಾಗತಿಕ ಅಭಿಯಾನದಲ್ಲಿ ಸೇರಿಕೊಳ್ಳಲಿವೆ.
ವಿಶ್ವದೆಲ್ಲೆಡೆ ಕೋವಿಡ್-19 ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಜನರು ಮನೆಯಲ್ಲಿ ಉಳಿದುಕೊಂಡಿದ್ದಾರೆ. ಈ ವೇಳೆ ಜನರು ಮನೆಯಲ್ಲಿಯೂ ಸಕ್ರಿಯರಾಗಿ ಇರುವಂತೆ ಪೋತ್ಸಾಹಿಸುವುದು ಜಾಗತಿಕ ಅಭಿಯಾನದ ಪ್ರಮುಖ ಉದ್ದೇಶವಾಗಿದೆ.
ಇಂದು ಮಾತ್ರವಲ್ಲದೇ ಪ್ರತಿದಿನ ನಾವು ಕೋವಿಡ್-19 ವಿರುದ್ಧ ಹೋರಾಡಬೇಕಾಗುತ್ತದೆ. ಇದಕ್ಕೆ ಇಡೀ ಜಗತ್ತು ಒಂದಾಗಿದೆ. ಈ ಹಿನ್ನೆಲೆಯಲ್ಲಿ ನೀವೆಲ್ಲ ಮನೆಯಲ್ಲಿ ಆರೋಗ್ಯವಾಗಿರಿ ಎಂಬ ಸಂದೇಶವನ್ನು ಈ ಅಭಿಯಾನದ ವೇಳೆ ಜನರಿಗೆ ತಿಳಿಸಲಾಗುತ್ತದೆ.
ಆರೋಗ್ಯವಂತ ವಯಸ್ಕರು ಕಡಿಮೆ ಪಕ್ಷ 30ನಿಮಿಷ ಮತ್ತು ಮಕ್ಕಳು 60 ನಿಮಿಷ ಪ್ರತಿದಿನ ದೈಹಿಕ ವ್ಯಾಯಾಮ ನಡೆಸಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. ಈ ವಿಷಯವನ್ನು ಕೂಡ ಅಭಿಯಾನದ ವೇಳೆ ತಿಳಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.