ಸೂಕ್ತ ಮಾರುಕಟ್ಟೆ ಅಲಭ್ಯ; ಕೊಳೆತ ಎಲೆಕೋಸು!
ಕೈ ಸುಟ್ಟುಕೊಂಡ ಬೆಳೆಗಾರರುರೈತರಿಗೆ ಬೇಕಿದೆ ಸರ್ಕಾರದ ಸಹಾಯಹಸ್ತ
Team Udayavani, Apr 8, 2020, 4:30 PM IST
ಬೈಲಹೊಂಗಲ: ಯರಗುದ್ದಿ ಗ್ರಾಮದ ರೈತ ನಾಗಪ್ಪ ಬೆಳೆದ ಎಲೆಕೋಸು ಕೊಳೆತಿರುವುದು.
ಬೈಲಹೊಂಗಲ: ತಾಲೂಕಿನ ವಿವಿಧ ಗ್ರಾಮದಲ್ಲಿ ರೈತರು ಬೆಳೆದ ಎಲೆಕೋಸು (ಕೋಬಿಜ್) ಸೂಕ್ತ ಮಾರುಕಟ್ಟೆ ವ್ಯವಸ್ಥೆ ಇಲ್ಲದ ಕಾರಣ ಕೊಳೆತು ಹೋಗುವ ಸ್ಥಿತಿ ತಲುಪಿದ್ದು, ಅನ್ನದಾತನ ಬೆಳೆಹಾನಿಗೆ ಕೊನೆಯೇ ಇಲ್ಲದಂತಾಗಿದೆ. ತಾಲೂಕಿನಲ್ಲಿ ಸುಮಾರು 268 ಹೆಕ್ಟೇರ್ ಪ್ರದೇಶದಲ್ಲಿ ಎಲೆಕೋಸು ಬೆಳೆಯಲಾಗುತ್ತಿದೆ.
ಸಮೀಪದ ಯರಗುದ್ದಿ ಗ್ರಾಮದ ರೈತ ನಾಗಪ್ಪ ಉಳವಪ್ಪ ಸುಣದೊಳ್ಳಿ ಅವರು ತಮ್ಮ ಒಂದೂವರೆ ಎಕರೆಯಲ್ಲಿ ಎಲೆಕೋಸು ಬೆಳೆದಿದ್ದು, ಇನ್ನೇನು ಮಾರುಕಟ್ಟೆಗೆ ಸಾಗಿಸಬೇಕು ಎನ್ನುವ ಹಂತದಲ್ಲಿದ್ದಾಗ ಮಹಾಮಾರಿ ಕೊರೊನಾ ರೋಗದ ಭೀತಿಯಿಂದ ಲಾಕ್‌ಡೌನ್ ಮಾಡಿದ್ದರಿಂದ ಸೂಕ್ತ ಮಾರುಕಟ್ಟೆ ಸಿಗಲಿಲ್ಲ. ಇದರಿಂದ ಫಸಲು ಬಿಡಿಸಲು ಆಳುಗಳು ಇಲ್ಲ. ಜೊತೆಗೆ ಸಾಗಾಣಿಕೆಗೆ ಸಾರಿಗೆ ಸೌಕರ್ಯಗಳಿಲ್ಲದ ಕಾರಣ ಎಲೆಕೋಸು ಜಮೀನಿನಲ್ಲೇ ಕೊಳೆಯುತ್ತಿದೆ.
ಸುಮಾರು ಐದು ಲಕ್ಷ ರೂ. ಹಾನಿಯಾಗುತ್ತದೆ ಎನ್ನಲಾಗಿದೆ. ಒಂದೆಡೆ ಕೃಷಿ ಸಚಿವ ಬಿ.ಸಿ. ಪಾಟೀಲರು ರೈತರು ಬೆಳೆದ ಬೆಳೆಗೆ ಸೂಕ್ತ ಮಾರುಕಟ್ಟೆ ಒದಗಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇನ್ನೊಂದೆಡೆ ಸೂಕ್ತ ಮಾರುಕಟ್ಟೆ ಇಲ್ಲದ ಕಾರಣ ಬೈಲಹೊಂಗಲ ತಾಲೂಕಿನ ಅನೇಕ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಕಷ್ಟ ಪಟ್ಟು ಬೆಳೆದ ಬೆಳೆಯನ್ನು ರೈತರು ನಾಶಪಡಿಸುವ ಮುನ್ನ ಸರ್ಕಾರ ರೈತರ ಸಹಾಯಕ್ಕೆ ಬರಬೇಕಿದೆ.
ಕಾಯಿಪಲ್ಲೆ, ತರಕಾರಿ ಎಲ್ಲಿಯಾದರೂ ಮಾರುಕಟ್ಟೆ ಸಿಗದೆ ಹಾನಿಯಾಗುತ್ತಿದ್ದಲ್ಲಿ ಅದಕ್ಕೆ ಮಾರುಕಟ್ಟೆ ಒದಗಿಸಲು ಸರಕಾರ ವ್ಯವಸ್ಥೆ ಮಾಡುತ್ತದೆ. ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಿದರೆ ಮಾರುಕಟ್ಟೆ ಒದಗಿಸಲಾಗುವುದು. ತರಕಾರಿ ರೋಗದಿಂದ ಹಾನಿಯಾದಲ್ಲಿ ಸದ್ಯಕ್ಕೆ ಸರಕಾರದಿಂದ ಪರಿಹಾರದ ಬಗ್ಗೆ ಆದೇಶ ಬಂದಿಲ್ಲ.
ನವೀನ ಬಡಿಗೇರ, ತೋಟಗಾರಿಕೆ ಇಲಾಖೆ
ಸಹಾಯಕ ನಿರ್ದೇಶಕ, ಬೈಲಹೊಂಗಲ
ಸಿ.ವೈ. ಮೆಣಶಿನಕಾಯಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.