“ಖಾಸಗಿ ಆಸ್ಪತ್ರೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ
Team Udayavani, Apr 9, 2020, 5:58 AM IST
ಬೆಂಗಳೂರು: ಕಲಬುರಗಿಯಲ್ಲಿ ಮಂಗಳವಾರ ಕೋವಿಡ್ 19ದಿಂದ ಸಾವಿಗೀಡಾಗಿದ್ದ ವ್ಯಕ್ತಿಯ ಚಿಕಿತ್ಸೆಯಲ್ಲಿ ನಿರ್ಲಕ್ಷ್ಯ ವಹಿಸಿದ ಖಾಸಗಿ ಆಸ್ಪತ್ರೆಗೆ ನೋಟಿಸ್ ಜಾರಿ ಮಾಡಿದ್ದು ಕ್ರಿಮಿನಲ್ ಆರೋಪದಡಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದರು.
ರೋಗಿಗೆ ಸೋಂಕಿನ ಲಕ್ಷಣಗಳಿದ್ದರೂ ಕೊನೆ ಕ್ಷಣದವರೆಗೂ ಖಾಸಗಿ ಆಸ್ಪತ್ರೆಯವರು ಸರಕಾರಿ ಆಸ್ಪತ್ರೆಗೆ ಶಿಫಾರಸು ಮಾಡಿರಲಿಲ್ಲ. ಪ್ರಕರಣದಲ್ಲಿ ನಿರ್ಲಕ್ಷ್ಯ ವಹಿಸಿದ ಖಾಸಗಿ ಆಸ್ಪತ್ರೆಗೆ ನೋಟಿಸ್ ಜಾರಿ ಮಾಡಿದ್ದು ಕ್ರಿಮಿನಲ್ ಆರೋಪದಡಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುತ್ತಿದೆ. ಅಲ್ಲದೆ ಎರಡು ದಿನಗಳು ಆಸ್ಪತ್ರೆ ಬಂದ್ ಮಾಡಿ ಎಲ್ಲ ಸಿಬಂದಿಗೆ 14 ದಿನಗಳ ಕ್ವಾರಂಟೈನ್ ವಿಧಿಸಲಾಗಿದೆ ಎಂದು ತಿಳಿಸಿದರು. ಇನ್ನಾದರೂ ಖಾಸಗಿ ಆಸ್ಪತ್ರೆಗಳು ರೋಗಿಯಲ್ಲಿ ಕೊರೊನಾ ಲಕ್ಷಣ ಇದ್ದರೆ ಕೂಡಲೇ ಸರಕಾರಿ ಆಸ್ಪತ್ರೆಗೆ ಸೂಚಿಸಿ. ಇನ್ನು ಮೃತ ವೃದ್ಧ ಬಸ್ ನಿಲ್ದಾಣದಲ್ಲಿ ಹಣ್ಣಿನ ವ್ಯಾಪಾರಿಯಾಗಿದ್ದರು. ಹೀಗಾಗಿ ನೂರಾರು ಮಂದಿಯೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿರುತ್ತಾರೆ. ಅವರೆಲ್ಲರ ಪತ್ತೆಗೆ ಆರೋಗ್ಯ ಇಲಾಖೆ ಮುಂದಾಗಿದೆ ಎಂದರು.
ತಜ್ಞರ ಸಮಿತಿಯಿಂದ ವರದಿ
ಲಾಕ್‌ಡೌನ್ ಮುಂದುವರಿಸಲು ಮತ್ತು ಇನ್ನಷ್ಟು ಅಗತ್ಯ ಕ್ರಮ ಕೈಗೊಳ್ಳಲು ಸರಕಾರ ರಚಿಸಿದ್ದ ಆರೋಗ್ಯ ತಜ್ಞರ ಸಮಿತಿ ವರದಿ ಬಂದಿದ್ದು, ಅಲ್ಲಿನ ಸಲಹೆ ಸೂಚನೆ ಪರಿಶೀಲನೆ ಮಾಡಿ ನಿರ್ಧರಿಸಲಾಗುತ್ತದೆ. ಇಂದಿಗೂ ಕೋವಿಡ್ 19 ಸೋಂಕು ಹೇಗೆ ತಗಲಿದೆ ಎಂದು ಪತ್ತೆಯಾದ ಪ್ರಕರಣಗಳನ್ನು ಆರೋಗ್ಯ ಇಲಾಖೆ ತನಿಖೆ ನಡೆಸುತ್ತಿದೆ ಎಂದು ತಿಳಿಸಿದರು.
ಶಂಕಿತರ ಸೋಂಕು ಪರೀಕ್ಷೆ
ನಿಜಾಮುದ್ದೀನ್ ಧಾರ್ಮಿಕ ಸಮಾವೇಶ ಸಂಬಂಧಿಸಿದಂತೆ ಕರ್ನಾಟಕದ 808 ಮಂದಿಯ ಸೋಂಕು ಪರೀಕ್ಷೆ ಮಾಡಿದ್ದೇವೆ. ಇವರನ್ನು ಸರಕಾರಿ ಕ್ವಾರಂಟೈನ್‌ನಲ್ಲಿ ಇರಿಸ ಲಾಗಿದೆ. ರಾಜ್ಯದ 581 ಮಂದಿಯನ್ನು ಹೊರರಾಜ್ಯಗಳಿಗೆ ತೆರಳಿದ್ದು, ಇಂದಿಗೂ ವಾಸಸ್ಥಳಕ್ಕೆ ಮರಳಿಲ್ಲ. ಹೀಗಾಗಿ ಅಲ್ಲಿನ ರಾಜ್ಯಗಳಿಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಇನ್ನು ರಾಜ್ಯ 181ಕೋವಿಡ್ 19 ಸೋಂಕಿತರಲ್ಲಿ 71 ಮಂದಿ ವಿದೇಶಿ ಪ್ರಯಾಣಿಕರು, 110 ಮಂದಿ ಇತರ ಸಂಪರ್ಕಿತರು ಎಂದು ಸುರೇಶ್ ಕುಮಾರ್ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.