ನಿಮ್ಮ ಸಹಾಯವನ್ನೂ ಎಂದಿಗೂ ಮರೆಯುವುದಿಲ್ಲ, ಧನ್ಯವಾದ ಭಾರತ: ಡೊನಾಲ್ಡ್ ಟ್ರಂಪ್
Team Udayavani, Apr 9, 2020, 7:59 AM IST
ವಾಷಿಂಗ್ಟನ್: ಮಲೇರಿಯಾ ವಿರೋಧಿ ಔಷಧ ಹೈಡ್ರಾಕ್ಸಿಕ್ಲೋರೋಕ್ವಿನ್ ರಫ್ತು ಮೇಲಿನ ನಿರ್ಬಂಧಗಳನ್ನು ಸಡಿಲಿಸಿರುವ ಭಾರತ ಸರ್ಕಾರಕ್ಕೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಧನ್ಯವಾದ ತಿಳಿಸಿದ್ದಾರೆ. ಈ ಔಷಧ ಸಾಂಕ್ರಮಿಕ ರೋಗ ತಡೆಗಟ್ಟವಲ್ಲಿನ ಯುದ್ಧದ ನೀತಿ ಬದಲಾವಣೆಗೆ ಪ್ರಮುಖ ಕಾರಣವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತೀಯ ಜನರ ಬಗ್ಗೆ ಟ್ವಿಟ್ಟರ್ ನಲ್ಲಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಗಮನಿಸಬೇಕಾದ ಅಂಶವೆಂದರೇ ಔಷಧ ರಪ್ತು ಮೇಲಿನ ನಿರ್ಬಂಧ ಸಡಿಲಿಸಿದಕ್ಕಾಗಿ 24 ಗಂಟೆಗಳ ಅವಧಿಯಲ್ಲಿ ಪಿಎಂ ಮೋದಿಯವರ ನಿರ್ಧಾರಕ್ಕೆ ಟ್ರಂಪ್ ಎರಡನೇ ಬಾರಿಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳ ಹಿಂದಷ್ಟೆ ‘ನಿರ್ಬಂಧಗಳನ್ನು ತೆಗೆದುಹಾಕದಿದ್ದರೆ ಪ್ರತೀಕಾರ ತೀರಿಸಿಕೊಳ್ಳುತ್ತೇವೆ’ ಎಂದಿದ್ದ ಟ್ರಂಪ್ ಮಾತನ್ನೂ ಕೂಡ ಈ ಸಂದರ್ಭದಲ್ಲಿ ನೆನಪಿಸಿಕೊಳ್ಳಬೇಕಾಗಿದೆ ಎಂದು ಹಿಂದೂಸ್ಥಾನ್ ಟೈಮ್ಸ್ ವರದಿ ಮಾಡಿದೆ.
ಅಗತ್ಯ ಸಂದರ್ಭಗಳಲ್ಲಿ ಸ್ನೇಹಿತರ ನಡುವೆ ಇನ್ನೂ ಹೆಚ್ಚಿನ ಸಹಕಾರದ ಅಗತ್ಯವಿದೆ. ಭಾರತದ ನಿರ್ಧಾರವನ್ನು ಎಂದಿಗೂ ಮರೆಯಲಾಗುವುದಿಲ್ಲ! ಈ ಹೋರಾಟದಲ್ಲಿ ಭಾರತದ ಜನರಿಗೆ ಮಾತ್ರವಲ್ಲ, ಮಾನವೀಯತೆಗೂ ಸಹಾಯ ಮಾಡುವ ಮೂಲಕ ಪ್ರಬಲ ನಾಯಕತ್ವ ವಹಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಅವರಿಗೆ ಧನ್ಯವಾದಗಳು! ”ಎಂದು ಅಧ್ಯಕ್ಷ ಟ್ರಂಪ್ ಟ್ವೀಟ್ ಮಾಡಿದ್ದಾರೆ.
Extraordinary times require even closer cooperation between friends. Thank you India and the Indian people for the decision on HCQ. Will not be forgotten! Thank you Prime Minister @NarendraModi for your strong leadership in helping not just India, but humanity, in this fight!
— Donald J. Trump (@realDonaldTrump) April 8, 2020
ಕೋವಿಡ್-19 ರೋಗಿಗಳ ಚಿಕಿತ್ಸೆಯಲ್ಲಿ ಬಳಸುವ ಮಲೇರಿಯಾ ವಿರೋಧಿ ಔಷಧವಾದ ಹೈಡ್ರಾಕ್ಸಿಕ್ಲೋರೋಕ್ವಿನ್ ರಫ್ತು ಮೇಲಿನ ನಿಷೇಧವನ್ನು ಹಿಂಪಡೆಯದಿದ್ದರೆ ಪ್ರತೀಕಾರದ ಸಾಧ್ಯತೆಯಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೆಲ ದಿನಗಳ ಹಿಂದೆ ತಿಳಿಸಿದ್ದರು.
ಇದೀಗ ಗುಜರಾತ್ ನ ಮೂರು ಕಾರ್ಖಾನೆಗಳಿಂದ ಒಟ್ಟು 29 ಮಿಲಿಯನ್ ಡೋಸ್ ಹೈಡ್ರೋಕ್ಸಿಕ್ಲೋರೋಕ್ವಿನ್ ಔಷಧ ತುಂಬಿದ ಹಡಗು ಅಮೆರಿಕದತ್ತ ತೆರಳುತ್ತಿದೆ ಎಂಬ ಮಾಹಿತಿ ಪಡೆದ ನಂತರ ಅಮೆರಿಕ ಅಧ್ಯಕ್ಷ ಟ್ರಂಪ್ ತನ್ನ ವರಸೆಯನ್ನು ಬದಲಿಸಿ ಮೋದಿ ಗ್ರೇಟ್ ಬುಧವಾರ ಹೊಗಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Appoint: ಲಾಕ್‌ಡೌನ್ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ
Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
ಪ್ರಯಾಣಿಕರಿಗೆ ಟಿಕೆಟ್ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.