ಪಡಿತರ ಚೀಟಿ ಇಲ್ಲದವರಿಗೂ ಪಡಿತರ?
Team Udayavani, Apr 9, 2020, 1:04 PM IST
ಬೆಂಗಳೂರು: ರಾಜ್ಯದಲ್ಲಿ ಶೇ. 25ಕ್ಕೂ ಹೆಚ್ಚು ನಾಗರಿಕರ ಬಳಿ ಇನ್ನೂ ರೇಷನ್ ಕಾರ್ಡ್ ಇಲ್ಲ. ಹೀಗಾಗಿ ಅಂತಹ ಬಡವರಿಗೂ ಪಡಿತರ ಕೊಡುವ ಉದ್ದೇಶ ಇದೆ. ಈ ಕುರಿತು ಮುಖ್ಯಮಂತ್ರಿಗಳ ಜತೆ ಮಾತನಾಡಿ ಬಡವರಿಗೂ ಪಡಿತರ ಕೊಡುವ ವ್ಯವಸ್ಥೆ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.
ಮಲ್ಲೇಶ್ವರ ವಿಧಾನಸಭೆ ಕ್ಷೇತ್ರದಲ್ಲಿ ಕೋವಿಡ್ 19 ದಿಂದ ಕಂಗಾಲಾಗಿರುವ ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣರಿಗೆ ಬುಧವಾರ ಆಹಾರ ಕಿಟ್‌ಗಳನ್ನು ವಿತರಿಸಿ ಮಾತನಾಡಿದರು. ಆಹಾರ ಪದಾರ್ಥಗಳ ಕೊರತೆಯಾಗದಂತೆ ಸರ್ಕಾರ ಎಲ್ಲ ಕ್ರಮಗಳನ್ನು ಕೈಗೊಂಡಿದೆ. ಮುಖ್ಯವಾಗಿ ಪಡಿತರ ವಿತರಣೆಯಲ್ಲಿ ಲೋಪವಾಗದಂತೆ ನಿಗಾ ವಹಿಸಲಾಗಿದೆ ಎಂದರು.
ಯಾರಿಗೂ ಹಸಿವಿನಿಂದ ಸಾಯುವಂಥ ಪರಿಸ್ಥಿತಿ ನಿರ್ಮಾಣವಾಗಬಾರದು. ಈ ನಿಟ್ಟಿನಲ್ಲಿ ಈ ಆಹಾರ ಕಿಟ್‌ಗಳ ವಿತರಣೆಗೆ ಕಾರಣರಾಗಿರುವ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಅವರನ್ನು ಮನಸಾರೆ ಅಭಿನಂದಿಸುತ್ತೇನೆ. ಉಳ್ಳವರು ಇಲ್ಲದವರಿಗೆ ಅನ್ನದಾನ ಮಾಡಲು ಇದು ಸರಿಯಾದ ಸಮಯ ಎಂದು ಡಿಸಿಎಂ ತಿಳಿಸಿದರು.
ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಗೋಪಾಲಯ್ಯ, ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ, ಮಲ್ಲೇಶ್ವರಂ ಬ್ರಾಹ್ಮಣ ಸಂಘ ಅಧ್ಯಕ್ಷ ಪ್ರಕಾಶ ಅಯ್ಯಂಗಾರ್ ಸೇರಿದಂತೆ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.