“ಹಂತ-ಹಂತ ಲಾಕ್‌ಡೌನ್‌ ಹಿಂಪಡೆಯಲಿ’

ಅಂತಾರಾಜ್ಯ, ಜಿಲ್ಲಾ ಗಡಿಗಳ ತೆರವಿಗೆ ಶಾಸಕ ಸತೀಶ ಜಾರಕಿಹೊಳಿ ಸಲಹೆ

Team Udayavani, Apr 9, 2020, 1:37 PM IST

09-April-16

ಗೋಕಾಕ: ನಗರದ ಹಿಲ್‌ ಗಾರ್ಡನ್‌ನಲ್ಲಿ ಪತ್ರಕರ್ತರಿಗೆ ಸ್ಯಾನಿಟೈಸರ್‌ ವಿತರಿಸಿದ ಶಾಸಕ ಸತೀಶ ಜಾರಕಿಹೊಳಿ

ಗೋಕಾಕ: ದೇಶದ ಇಂದಿನ ಪರಿಸ್ಥಿತಿ ಅವಲೋಕಿಸಿದಾಗ ಏ.14ರ ನಂತರ ಲಾಕ್‌ ಡೌನ್‌ವನ್ನು ಒಮ್ಮೆಲೆ ತೆರವುಗೊಳಿಸಬಾರದು. ಹಂತ-ಹಂತವಾಗಿ ತೆರವುಗೊಳಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅಭಿಪ್ರಾಯ ಪಟ್ಟರು.

ಬುಧವಾರ ನಗರದಲ್ಲಿ ತಮ್ಮ ಗೃಹ ಕಚೇರಿ ಹಿಲ್‌ ಗಾರ್ಡನ್‌ನಲ್ಲಿ ನಗರಸಭೆ ಸದಸ್ಯರಿಗೆ ಮತ್ತು ಪತ್ರಕರ್ತರಿಗೆ ಸ್ಯಾನಿಟೈಸರ್‌ ವಿತರಿಸಿ ಅವರು ಮಾತನಾಡಿದರು. ಈವರೆಗೆ ರಾಜ್ಯಗಳಲ್ಲಿ ದಾಸ್ತಾನು ಇದ್ದ ಜೀವನಾಶ್ಯಕ ಅಗತ್ಯ ವಸ್ತುಗಳಿಂದ ಜನರಿಗೆ ಯಾವುದೇ ತೊಂದರೆ ಆಗಲಿಲ್ಲ. ಆದರೆ ಏ.14ರ ನಂತರ ಪ್ರಥಮ ಹಂತವಾಗಿ ಅಂತರ್‌ ರಾಜ್ಯ ಮತ್ತು ಜಿಲ್ಲಾ ಗಡಿಗಳನ್ನು ತೆರವುಗೊಳಿಸಿ ಅಗತ್ಯ ವಸ್ತುಗಳ ಪೂರೈಕೆಗೆ ಮಾತ್ರ ಅವಕಾಶ ನೀಡಬೇಕು. ನಂತರ ಹಂತ-ಹಂತವಾಗಿ ಲಾಕ್‌ಡೌನ್‌ ತೆರವುಗೊಳಿಸಲು ಕೇಂದ್ರ ಸರಕಾರ ಕ್ರಮ ಕೈಗೊಳ್ಳಬೇಕು ಎಂದರು.

ಕೊರೊನಾ ಸೋಂಕು ತಡೆಯಲು ಮುಂಜಾಗ್ರತಾ ಕ್ರಮವಾಗಿ ಲಾಕ್‌ಡೌನ್‌ ಜಾರಿಗೊಳಿಸಬೇಕಾಗಿತ್ತು. ಆದರೆ ಒಮ್ಮೆಲೆ ಲಾಕ್‌ಡೌನ್‌ ಘೋಷಣೆ ಮಾಡಿದ್ದು ಸರಿಯಲ್ಲ. ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಮಾಲೋಚನೆ ನಡೆಸಿ ಒಂದೆರಡು ದಿನದ ಅವಕಾಶ ನೀಡಿ ನಂತರ ಲಾಕ್‌ಡೌನ್‌ ಘೋಷಿಸಿದ್ದರೆ ಈಗ ಉದ್ಭವಿಸಿರುವ ಸಮಸ್ಯೆಗಳು ಹುಟ್ಟುತ್ತಿರಲಿಲ್ಲ ಎಂದ ಸತೀಶ ಜಾರಕಿಹೊಳಿ, ಒಮ್ಮೆಲೆ ಲಾಕ್‌ ಡೌನ್‌ ಘೋಷಿಸಿದ್ದರಿಂದ ಬೇರೆ ರಾಜ್ಯ ಹಾಗೂ ಜಿಲ್ಲೆಗಳಿಂದ ಬಂದ ಕೂಲಿ ಕಾರ್ಮಿಕರು ತೊಂದರೆ ಅನುಭವಿಸುವಂತಾಯಿಗಿದೆ ಎಂದರು.

ಕೊರೊನಾ ವೈರಸ್‌ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಲಾಕ್‌ಡೌನ್‌ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಅದನ್ನು ಬಿಟ್ಟು ಅವೈಜ್ಞಾನಿಕವಾಗಿ ಚಪ್ಪಾಳೆ ಮತ್ತು ದೀಪ ಬೆಳಗಿಸುವದು ಸರಿಯಾದ ಕ್ರಮವಲ್ಲ. ಇದು ವೈಜ್ಞಾನಿಕ ಕ್ರಮವಾಗಿದ್ದರೆ ಖಂಡಿತ ಅದನ್ನು ಸ್ವಾಗತಿಸಬಹುದು ಎಂದು ಸತೀಶ ಜಾರಕಿಹೊಳಿ ಹೇಳಿದರು. ನಗರಸಭೆ ಸದಸ್ಯರು, ಮುಖಂಡರು ಇದ್ದರು.

ಟಾಪ್ ನ್ಯೂಸ್

4-uv-fusion

Childhood Times: ಕಳೆದು ಹೋದ ಸಮಯ

Ekanath Shindhe

Maharashtra;ಏಕನಾಥ್ ಶಿಂಧೆ ಡಿಸಿಎಂ ಹುದ್ದೆ ಸ್ವೀಕರಿಸುವುದಿಲ್ಲ ಎಂದ ಶಿವಸೇನೆ!

Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ:‌ ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ

Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ:‌ ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ

8

Keerthy Suresh: ಮದುವೆ ಸುದ್ದಿ ಬೆನ್ನಲ್ಲೇ ಆಂಟೋನಿ ಜತೆ ಫೋಟೋ ಹಂಚಿಕೊಂಡ ಕೀರ್ತಿ ಸುರೇಶ್

arrested

Punjab; ಗುಂಡಿನ ಚಕಮಕಿ ಬಳಿಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರ ಬಂಧನ

2-ai

Artificial Intelligence: ಎಐ ಯುಗದಲ್ಲಿ ನಾವು ನೀವು?

Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್‌ ಟೈಮ್‌ ಎಷ್ಟು?

Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್‌ ಟೈಮ್‌ ಎಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

4

Perla: ರಸ್ತೆ ವಿಸ್ತರಣೆ, ನೇತ್ರಾವತಿ ನದಿ ತಡೆಗೋಡೆ ದುರಸ್ತಿಗೆ ಆಗ್ರಹ

5-uv-fusion

Childhood: ಬಾಲ್ಯವೆಂಬ ನೆನೆದಷ್ಟು ಮುಗಿಯದ ಪಯಣ

3

Aranthodu: ಪ್ರಯಾಣಿಕ ತಂಗುದಾಣದ ದಾರಿ ಮಾಯ!

2

Vitla: ಅಭಿವೃದ್ಧಿಗೆ ಆಗ್ರಹಿಸಿ ರಸ್ತೆ ತಡೆದು ಪ್ರತಿಭಟನೆ

4-uv-fusion

Childhood Times: ಕಳೆದು ಹೋದ ಸಮಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.