ನೆಗಡಿ, ಕೆಮ್ಮು, ಶೀತ ಇರುವವರಿಗೆ ಪ್ರತ್ಯೇಕ ಚಿಕಿತ್ಸೆ
Team Udayavani, Apr 9, 2020, 3:10 PM IST
ಶಿಡ್ಲಘಟ್ಟ: ಜಿಲ್ಲೆಯಲ್ಲಿ ಕೋವಿಡ್ 19 ಸೋಂಕು ಹರಡದಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವ್ಯಾಪಕವಾಗಿ ಜನಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಲಾಗಿದೆ. ನಾಗರಿಕರು ಮನೆಯಲ್ಲಿದ್ದು ಸಹಕರಿಸಬೇಕೆಂದು ಜಿಪಂ ಸಿಇಒ ಫೌಝೀಯಾ ತರುನ್ನುಮ್ ಮನವಿ ಮಾಡಿದರು.
ನಗರದ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿರುವ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಮತ್ತು ಗ್ರಾಮಗಳಲ್ಲಿ ಕೊರೊನಾ ಕಾರ್ಯಪಡೆ ರಚಿಸಿ ಜನರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸಲಾಗುತ್ತದೆ ಎಂದರು.
ಪ್ರತ್ಯೇಕ ಚಿಕಿತ್ಸೆಗೆ ಸೂಚನೆ: ಶಿಡ್ಲಘಟ್ಟ ತಾಲೂಕಿನಲ್ಲಿ ಜ್ವರ- ನೆಗಡಿ ಅಥವಾ ಕೆಮ್ಮು ಇರುವ ರೋಗಿಗಳಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡ ಬೇಕೆಂದು ಸೂಚಿಸಿದ ಅವರು, ಆಸ್ಪತ್ರೆ ಯನ್ನು ಸ್ವತ್ಛವಾಗಿಟ್ಟುಕೊಂಡು ರೋಗಿಗಳು ಹೊರತುಪಡಿಸಿ ಬೇರೆಯವರೆಗೆ ಆಸ್ಪತ್ರೆಯಲ್ಲಿ ಇರಲು ಅವಕಾಶ ಕಲ್ಪಿಸಬಾರದು. ಕೊರೊನಾ ಸೋಂಕು ಹೇಗೆ ಹರಡುತ್ತದೆ ಎಂಬು ದರ ಕುರಿತು ಅರಿವು ಮೂಡಿಸುವ ಫಲಕ ಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.
ಶಿಡ್ಲಘಟ್ಟ ಸಾರ್ವಜನಿಕ ಆಸ್ಪತ್ರೆಯಲ್ಲಿ ಸುಮಾರು 13 ಮಂದಿಗೆ ಡಯಾಲಿಸಿಸ್ ಮಾಡಲಾ ಗುತ್ತದೆ. ಆಸ್ಪತ್ರೆಯಲ್ಲಿ ನೀರಿನ ಅಭಾವ ಹೆಚ್ಚಾ ಗಿದ್ದು, ಟ್ಯಾಂಕರ್ ಮೂಲಕ ಸಮಸ್ಯೆ ನೀಗಿಸಲು ಕ್ರಮ ಕೈಗೊಂಡಿದ್ದೇವೆ ಎಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ವಾಣಿ ಮಾಹಿತಿ ನೀಡಿದರು.
ಆಸ್ಪತ್ರೆಯಲ್ಲಿ ಖಾಲಿಯಿರುವ ಪಿಝೀಷಿಯನ್ ಇನ್ನಿತರೆ ತಜ್ಞರನ್ನು ನೇಮಕ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿ ಬಡವರಿಗೆ ಉತ್ತಮ ಆರೋಗ್ಯ ಸೇವೆ ನೀಡಲು ಅಧಿಕಾರಿಗಳು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕೆಂದರು. ಇದೇ ವೇಳೆಯಲ್ಲಿ ಆಸ್ಪ ತ್ರೆಯ ಎಲ್ಲಾ ವಾರ್ಡ್, ಟ್ರಾಮಾಕೇರ್ ಘಟಕ ಪರಿ ಶೀಲಿಸಿ ಸ್ವತ್ಛತೆ ಕಾಪಾಡಿಕೊಳ್ಳಬೇಕೆಂದು ತಾಕೀತು ಮಾಡಿದರು. ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್‌ಮೂರ್ತಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.