ರಾಮಾಯಣದ “ಸುಗ್ರೀವ” ಪಾತ್ರಧಾರಿ ಶ್ಯಾಮ್ ಸುಂದರ್ ಕಾಲಾನಿ ವಿಧಿವಶ, ಗಣ್ಯರ ಸಂತಾಪ
ರಾಮಾಯಣ ಧಾರವಾಹಿಯಲ್ಲಿ ಸುಗ್ರೀವ ಹಾಗೂ ಬಲಿ ಪಾತ್ರವನ್ನು ನಿರ್ವಹಿಸಿದ್ದರು.
Team Udayavani, Apr 9, 2020, 3:13 PM IST
ನವದೆಹಲಿ:ದೂರದರ್ಶನದಲ್ಲಿ ಅಪಾರ ಜನಪ್ರಿಯತೆ ಪಡೆದಿದ್ದ ರಮಾನಂದ್ ಸಾಗರ್ ಅವರ ರಾಮಾಯಣ ಧಾರವಾಹಿಯಲ್ಲಿ ಸುಗ್ರೀವನ ಪಾತ್ರದಲ್ಲಿ ನಟಿಸಿದ್ದ ಶ್ಯಾಮಸುಂದರ್ ಕಾಲಾನಿ ವಿಧಿವಶರಾಗಿದ್ದಾರೆ ಎಂದು ಸಹ ನಟ, ರಾಮಾಯಣದ ರಾಮನ ಪಾತ್ರಧಾರಿ ಅರುಣ್ ಗೋವಿಲ್ ಟ್ವೀಟ್ ಮಾಡುವ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.
ರಮಾನಂದ್ ಸಾಗರ್ ಅವರ ರಾಮಾಯಣದಲ್ಲಿ ಸುಗ್ರೀವನ ಪಾತ್ರ ನಿರ್ವಹಿಸಿದ್ದ ಮಿ.ಶ್ಯಾಮ್ ಸುಂದರ್ ನಿಧನರಾಗಿದ್ದಾರೆಂದು ತಿಳಿದು ತುಂಬಾ ನೋವಾಯಿತು. ಅವರೊಬ್ಬ ಉತ್ತಮ ಹಾಗೂ ಅದ್ಭುತ ವ್ಯಕ್ತಿತ್ವ ಹೊಂದಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಗೋವಿಲ್ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ರಾಮಾಯಣ ಧಾರವಾಹಿಯಲ್ಲಿ ಸುಗ್ರೀವ ಹಾಗೂ ಬಲಿ ಪಾತ್ರವನ್ನು ನಿರ್ವಹಿಸಿದ್ದರು. ವರದಿಗಳ ಪ್ರಕಾರ, ಶ್ಯಾಮ್ ಸುಂದರ್ ಅವರು ಏಪ್ರಿಲ್ 7ರಂದು ಹರ್ಯಾಣದ ಕಾಲ್ಕಾದಲ್ಲಿ ನಿಧನರಾಗಿದ್ದರು. ಅವರು ಕ್ಯಾನ್ಸರ್ ನಿಂದ ಬಳಲುತ್ತಿದ್ದರು ಎಂದು ವಿವರಿಸಿದೆ.
1980-90ರ ದಶಕದಲ್ಲಿ ದೂರದರ್ಶನದಲ್ಲಿ ಅತೀ ಹೆಚ್ಚು ವೀಕ್ಷಿಸಲ್ಪಟ್ಟಿದ್ದ ಹೆಗ್ಗಳಿಕೆಗೆ ಪಾತ್ರವಾಗಿದ್ದ ಧಾರವಾಹಿ ಇದೀಗ ಕೋವಿಡ್ ವೈರಸ್ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್ ಡೌನ್ ಘೋಷಿಸಲಾಗಿದೆ. ಹೀಗಾಗಿ ಡಿಡಿಯಲ್ಲಿ ರಾಮಾಯಣ ಮತ್ತು ಮಹಾಭಾರತ ಮರು ಪ್ರಸಾರವಾಗುತ್ತಿದೆ. ಶ್ಯಾಮ್ ಸುಂದರ್ ಅವರ ನಿಧನಕ್ಕೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ. ಇವರು ಪತ್ನಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
AI: ಶಾರುಖ್ ಪತ್ನಿ ಗೌರಿ ಮತಾಂತರ?: ಡೀಪ್ ಫೇಕ್ ಫೋಟೋ ವೈರಲ್
Life threat: ಸಲ್ಮಾನ್ ಮನೆ ಬಾಲ್ಕನಿಗೆ ಬುಲೆಟ್‌ಪ್ರೂಫ್ ಗಾಜು
ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್.. ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ
MUST WATCH
ಹೊಸ ಸೇರ್ಪಡೆ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.