ಕೃಷಿ ಉತ್ಪನ್ನ ಮಾರಾಟಕ್ಕೆ ನಿರ್ಬಂಧವಿಲ್ಲ
Team Udayavani, Apr 9, 2020, 3:28 PM IST
ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರದ ಆದೇಶದಂತೆ ಕೋವಿಡ್-19 ವೈರಸ್ ಹರಡುವಿಕೆಯಿಂದ ಭಾರತದೆಲ್ಲೆಡೆ ಲಾಕ್ಡೌನ್ ಜಾರಿ ಯಲ್ಲಿದ್ದು, ಅದರಂತೆ ಜಿಲ್ಲೆಯಾದ್ಯಂತ ಲಾಕ್ಡೌನ್ ಆಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮತ್ತು ಕೃಷಿ ಇಲಾಖೆ ವತಿಯಿಂದ ವಿವಿಧ ಕೃಷಿ ಚಟುವಟಿಕೆ ಕೈಗೊಳ್ಳಲು ಯಾವುದೇ ಅಡಚಣೆಯಾಗದಂತೆ ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಅಧಿಕೃತ ರಸಗೊಬ್ಬರ, ಬಿತ್ತನೆ ಬೀಜ ಮತ್ತು ಕೀಟನಾಶಕ ಮಾರಾಟಗಾರರಿಗೆ ಈಗಾಗಲೇ ಗ್ರೀನ್ಪಾಸ್ ವಿತರಣೆ ಮಾಡಿದ್ದು, ಅಗತ್ಯ ವಸ್ತುಗಳ ಸೇವೆಯಡಿ ಕೃಷಿ ಪರಿಕರ ಹಾಗೂ ಅಧಿಕೃತ ಖಾಸಗಿ ಮಾರಾಟಗಾರರಲ್ಲಿ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ದಾಸ್ತಾನು ಲಭ್ಯವಿದ್ದು, ಅಗತ್ಯತೆಗೆ ಅನುಗುಣವಾಗಿ ರೈತರು ಖರೀದಿಸಬಹುದು ಎಂದರು.
ಹೋಬಳಿ ಮಟ್ಟದಲ್ಲಿ ಸ್ಥಾಪಿಸಿರುವ ಕೃಷಿ ಯಂತ್ರಧಾರೆ ಕೇಂದ್ರ ಗಳು ಸಹ ಕಾರ್ಯನಿರ್ವಹಿಸುತ್ತಿದ್ದು, ರೈತರು ವಿವಿಧ ಕೃಷಿ ಯಂತ್ರೋ ಪಕರಣಗಳನ್ನು ಬಾಡಿಗೆ ಆಧಾರದಲ್ಲಿ ಪಡೆಯ ಬಹುದಾಗಿದೆ. ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ಉಳುಮೆ, ಬಿತ್ತನೆ, ಕಟಾವು ಹಾಗೂ ಸಂಸ್ಕರಣೆ ಯಂತ್ರಗಳನ್ನು ಜಿಲ್ಲೆಯ ಒಳಗೆ ಮತ್ತು ಹೊರಗೂ ಸಂಚಾರಕ್ಕೆ ನಿರ್ಬಂಧವಿರುವುದಿಲ್ಲ ಹಾಗೂ ಕೃಷಿ ಉತ್ಪನ್ನಗಳ ಮಾರಾಟ ಮತ್ತು ಸಾಗಾಣಿಕೆಗೆ ಸಹ ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ಜಂಟಿ ಕೃಷಿ ನಿರ್ದೇಶಕಿ ರೂಪಾ ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.